ಕಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್‌ಡೌನ್
Team Udayavani, Jul 29, 2020, 1:34 PM IST
ಗುಳೇದಗುಡ್ಡ: ತಾಲೂಕಿನಲ್ಲಿ 10 ಜನರಿಗೆ ಮಹಾಮಾರಿ ಕೋವಿಡ್ ಸೋಂಕು ದೃಢಪಟ್ಟಿದೆ. ಪುರಸಭೆ ಮುಖ್ಯಾಧಿಕಾರಿಗೂ ಸಹ ಕೋವಿಡ್ ಸೊಂಕು ಕಾಣಿಸಿಕೊಂಡಿದ್ದು, ಜನರಲ್ಲಿ ಮತ್ತಷ್ಟು ಭಯದ ವಾತಾವರಣ ಉಂಟಾಗಿದೆ.
ಪಟ್ಟಣದಲ್ಲಿ ಒಟ್ಟು ಎಂಟು ಜನರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಅದರಲ್ಲಿಗುಳೇದಗುಡ್ಡ ಪುರಸಭೆಯ ಮುಖ್ಯಾಧಿಕಾರಿಗೆ, ಕಮತಗಿ ರಸ್ತೆಯ ಹತ್ತಿರದ ಇಬ್ಬರಿಗೆ, ಸಂಗೋಂದಿ ಓಣಿಯಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು, ಮೂವರು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಟಗೇರಿ ಗ್ರಾಮದಲ್ಲಿ ಓರ್ವನಿಗೆ, ತಿಮ್ಮಸಾಗರ ಗ್ರಾಮದಲ್ಲಿ ಒಬ್ಬರಿಗೆ ಹೀಗೆ ಒಟ್ಟು ತಾಲೂಕಿನಲ್ಲಿ ಹತ್ತು ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಹಶೀಲ್ದಾರ್ ಜಿ.ಎಂ. ಕುಲಕರ್ಣಿ ತಿಳಿಸಿದ್ದಾರೆ.
ಕಟಗೇರಿ ಗ್ರಾಮದ ಪ್ರಾಥಮಿಕ ಆಸ್ಪತ್ರೆಯ ವೈದ್ಯರೊಬ್ಬರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಅಲ್ಲದೇ ಕೆಲವಡಿ ಗ್ರಾಮ ಪಂಚಾಯತ ವ್ಯಾಪ್ತಿಯ ತಿಮ್ಮಸಾಗರ ಗ್ರಾಮದಲ್ಲಿ ಓರ್ವನಿಗೆ ಪಾಸಿಟಿವ್ ಬಂದಿದೆ. ಕಂದಾಯ ನಿರೀಕ್ಷಕ ಎಂ.ಎಸ್. ಅಂಗಡಿ, ಪಿಡಿಒ ಜಿ.ಎಂ. ಕಾಳಗಿ ಸ್ಯಾನಿಟೈಸರ್ ಮಾಡಿಸಿ, ಸೀಲ್ ಡೌನ್ ಮಾಡಿದ್ದಾರೆ. ಪ್ರಾಥಮಿಕ ಸಂಪರ್ಕಿತರನ್ನು ಗ್ರಾಮದ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ಜು. 29ರಿಂದ ಮಧ್ಯಾಹ್ನ 12ಕ್ಕೆ ಬಂದ್: ಪಟ್ಟಣದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಪಟ್ಟಣದ ಗುರು ಹಿರಿಯರ ಅನುಮತಿ ಮೇರೆಗೆ ಪುರಸಭೆ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮುಂಗಟ್ಟುಗಳನ್ನು ಜು. 29ರಿಂದ ಆ.4ರವರೆಗೆ ಬೆ. 6ಗಂಟೆಯಿಂದ ಮಧ್ಯಾಹ್ನ 12ಗಂಟೆಯವರೆಗೆ ಮಾತ್ರ ಅಂಗಡಿ ತೆರೆಯಬೇಕು. ಮ. 12ಗಂಟೆ ನಂತರ ಎಲ್ಲ ಅಂಗಡಿಗಳನ್ನು ಬಂದ್ ಮಾಡಿ, ಸಾರ್ವಜನಿಕರ ಅನಗತ್ಯ ಸಂಚಾರ ನಿಷೇಧಿಸಲಾಗಿದೆ ಎಂದು ತಹಶೀಲ್ದಾರ್ ಜಿ.ಎಂ. ಕುಲಕರ್ಣಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.