ಮಕ್ಕಳ ಶಿಕ್ಕಣಕ್ಷೆ ಆದ್ಯತೆ ನೀಡಿ: ನವಲಿಹಿರೇಮಠ
Team Udayavani, Jan 24, 2021, 1:21 PM IST
ಹುನಗುಂದ: ತಾಲೂಕಿನ ಬೀದಿ ಬದಿ ವ್ಯಾಪಾರಿಗಳು ನಿಮ್ಮ ವ್ಯಾಪಾರದ ಜತೆಗೆ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಎಸ್‌ಆರ್‌ಎನ್‌ಇ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ನವಲಿಹಿರೇಠ ಹೇಳಿದರು.
ಪಟ್ಟಣದ ವಿ.ಮ. ವೃತ್ತದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘಟನೆಯ ಒಕ್ಕೂಟದ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ರಾಷ್ಟೀಯ ಬೀದಿ ಬದಿ ವ್ಯಾಪಾರಸ್ಥರ ದಿನಾಚರಣೆ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವತ್ತ ಗಮನ ಹರಿಸಿ. ಉನ್ನತ ಅ ಧಿಕಾರಿಯನ್ನಾಗಿ ಮಾಡುವ ಕೆಲಸವಾಗಬೇಕು. ಬೀದಿ ಬದಿ ವ್ಯಾಪಾರಸ್ಥ ಸಂಘದಿಂದ ಹತ್ತು ಹಲವು ಕಾರ್ಯಕ್ರಮ ಮಾಡುವ ಮೂಲಕ ಸಂಘಟನೆಯನ್ನು ಉನ್ನತ ಮಟ್ಟದಲ್ಲಿ ಬೆಳೆಯಲಿ. ಅದಕ್ಕಾಗಿ ನಮ್ಮ ಫೌಂಡೇಶನ್‌ದಿಂದ 5 ಲಕ್ಷ ರೂ. ನೀಡುವುದಾಗಿ ಹೇಳಿದರು.
ಬಡತನದಲ್ಲಿರುವ ವ್ಯಾಪಾರಿಗಳಿಗೆ ಸಾಲದ ರೂಪದಲ್ಲಿ ನೀಡಿ ಸಕಾಲಕ್ಕೆ ಮರಳಿ ಪಡೆಯುವ ಕಾರ್ಯವಾಗಲಿ. ಇನ್ನು ಬೀದಿ ವ್ಯಾಪಾರಿಗಳ ಮಕ್ಕಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 90 ಅಂಕ ಪಡೆದ ವಿದ್ಯಾರ್ಥಿಗಳಿಗೆ ಎಸ್‌ಆರ್‌ಎನ್‌ಇ ಫೌಂಡೇಶನ್ ಮೂಲಕ ಅವರನ್ನು ದತ್ತು ಪಡೆದು ಓದಿಸಲಾಗುವುದು ಎಂದರು.
ಇದನ್ನೂ ಓದಿ:ಜಮೀನಿಗೆ ಒಂಟಿ ಸಲಗ ಲಗ್ಗೆ: ರಾಗಿ ಬೆಳೆ ಸಂಪೂರ್ಣ ನಾಶ
ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಬಸವರಾಜ ನಾಗರಾಳ ಮಾತನಾಡಿ, ಪ್ರಧಾನಮಂತ್ರಿ ಆತ್ಮ ನಿರ್ಭರ ಭಾರತ ಯೋಜನೆಯಡಿಯಲ್ಲಿ ಪಟ್ಟಣದ 247 ಜನ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಅದರಲ್ಲಿ ಕೆಲ ಜನರಿಗೆ ಸಾಲ ಮಂಜೂರಾಗಿದೆ. ಉಳಿದ ಫಲಾಭವಿಗಳಿಗೂ ಸಾಲ ಮಂಜೂರಾಗಲಿದೆ. ಶೀಘ್ರ ಸಾಲ ಮೇಳ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಅಧಿ ಕಾರಿ ಎಸ್.ಎಸ್. ಯರಗುಡಿ ಮಾತನಾಡಿದರು. ಸಂಘದ ತಾಲೂಕು ಅಧ್ಯಕ್ಷ ಮಹಾಂತೇಶ ಹೂಗಾರ, ನಗರ ಘಟಕದ ಅಧ್ಯಕ್ಷ ದುರಗಪ್ಪ ಬೆಳಗಲ್ಲ, ಪ್ರಧಾನ ಕಾರ್ಯದರ್ಶಿ ಸಂಗಪ್ಪ ಭಜಂತ್ರಿ, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಸಯ್ಯದ್ ಖಾಜಾ ಅಮೀನ್ ಫೀರಜಾದೆ, ಮುಖಂಡರಾದ ಮಲ್ಲಿಕಾರ್ಜುನ ಹೂಗಾರ, ಕರವೇ ನಗರ ಘಟಕದ ಅಧ್ಯಕ್ಷ ಶರಣು ಗಾಣಗೇರ, ಹರ್ಷದ ನಾಯಕ, ರಾಮಣ್ಣ ಭಜಂತ್ರಿ, ಖಾಜೇಸಾಬ ಬಾಗವಾನ್, ಮುನ್ನಾ ಬಾಗವಾನ್, ಎಸ್.ಎಚ್.ಪೀರಜಾದೆ, ವೀರೇಶ ಗಸನಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ
ರಬಕವಿ-ಬನಹಟ್ಟಿ: ಜಗದಾಳ ರೈತ ಬೆಳೆದ ಬಾಳೆಹಣ್ಣುಇರಾನ್ ದೇಶಕ್ಕೆ ರಫ್ತು!
ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ
Rabakavi: ರೈತರ ಬದುಕಿನ ರೊಟ್ಟಿಯನ್ನು ಕಾಂಗ್ರೆಸ್ ಕಸಿದುಕೊಳ್ಳುತ್ತಿದೆ: ಶಾಸಕ ಸಿದ್ದು ಸವದಿ
Rabkavi Banhatti: ಜಗದಾಳದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಪಗಡೆಯಾಟ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.