ಎಂಎಸ್‌ಪಿಟಿಸಿ ಗುತ್ತಿಗೆ ರದ್ದುಗೊಳಿಸಿ

Team Udayavani, Nov 7, 2020, 8:47 PM IST

bk-tdy-1

ಜಮಖಂಡಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡುವ ಆಹಾರ ಪದಾರ್ಥಗಳಲ್ಲಿ ಕಳಪೆ ಗುಣಮಟ್ಟ ಕಂಡುಬರುತ್ತಿರುವುದು ಕೇಳಿ ಬಂದಿದ್ದು, ಆಹಾರ ಪೂರೈಕೆ ಮಾಡುವಎಂಎಸ್‌ಪಿಟಿಸಿ ಸಂಸ್ಥೆ ಗುತ್ತಿಗೆಯನ್ನು ಬದಲಿಸುವಂತೆ ಶಾಸಕ ಆನಂದ ನ್ಯಾಮಗೌಡ ಸಿಡಿಪಿಒ ಅವರಿಗೆ ಎಚ್ಚರಿಕೆ ನೀಡಿದರು.

ನಗರದ ತಾಪಂ ಸಭಾಭವನದಲ್ಲಿ ಶುಕ್ರವಾರ ನಡೆದ ತಾಲೂಕು ಮಟ್ಟದ ಇಲಾಖಾವಾರುಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಿಡಿಪಿಒ ಅನುರಾಧಾ ಹಾದಿಮನಿ ಅವರಿಗೆ ಸೂಚನೆ ನೀಡಿದರು. ಅವಳಿ ತಾಲೂಕಿನಲ್ಲಿರುವ 295 ಅಂಗನವಾಡಿ ಕೇಂದ್ರಗಳಲ್ಲಿ 28933 ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾದರೇ ಆರೋಗ್ಯದ ಸ್ಥಿತಿ ಬಗ್ಗೆ ಚಿಂತನೆ ನಡೆಸಬೇಕು. ಈಗಾಗಲೇ ತಾಲೂಕಿನ 33 ಮಕ್ಕಳು ಅಪೌಷ್ಟಿಕತೆ ಕೊರತೆಯಿಂದ ಬಳಲುತ್ತಿದ್ದು, ಇವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅಪೌಷ್ಟಿಕತೆ ಕೊರತೆ ಮಕ್ಕಳು ತಾಲೂಕಿನಲ್ಲಿ ಕಂಡು ಬರುವ ಮುನ್ನ ಅಂತಹ ಮಕ್ಕಳನ್ನು ಗುರ್ತಿಸಿ ಅವರಿಗೆ ಪೌಷ್ಟಿಕ ಆಹಾರ ಸಿಗುವಂತೆ ನೋಡಿಕೊಳ್ಳಬೇಕೆಂದು ಹೇಳಿದರು.

ಅವಳಿ ತಾಲೂಕಿನಲ್ಲಿ ಸೇವೆ ಸಲ್ಲಿಸುವ ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ಮೂರು ತಿಂಗಳಿಂದ ವೇತನ ಸಿಕ್ಕಿಲ್ಲ. ವೇತನಕ್ಕಾಗಿ ನ. 11ರಂದು ಸತ್ಯಾಗ್ರಹ ನಡೆಸುವುದಾಗಿ ಪತ್ರ ನೀಡಿದ್ದು, ತಾಪಂ ಇಲಾಖೆ ವೇತನ ಮಂಜೂರು ಮಾಡಬೇಕು ಎಂದರು. ಅದಕ್ಕೆ ಉತ್ತರಿಸಿದ ತಾಪಂ ಇಒ ಅಬೀದ ಗದ್ಯಾಳ ಈಗಾಗಲೇ ಸರ್ಕಾರದ ಅನುದಾನ ಬಿಡುಗಡೆಯಾಗಿದ್ದು, ಇನ್ನೇರೆಡು ದಿನಗಳಲ್ಲಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದರು.

ಕಳೆದ ತಿಂಗಳು ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ ಪ್ಯಾಕೇಟ್‌ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದನ್ನು ಕೂಡಲೇ ಪತ್ತೆ ಹಚ್ಚಲು ಇಲಾಖೆ ಮುತುವರ್ಜಿ ವಹಿಸಿ ಆರೋಪಿಗಳ ಪತ್ತೆ ನಡೆಸಬೇಕೆಂದು ಶಾಸಕರು ಸೂಚಿಸಿದರು. ತಾಲೂಕಾ ವೈದ್ಯಾಧಿಕಾರಿ ಡಾ|ಗೈಬುಸಾಬ ಗಲಗಲಿ ಮಾತನಾಡಿ, ತಾಲೂಕಿನಲ್ಲಿ ಹೊಸದಾಗಿ 34 ಎಚ್‌ಐವಿರೋಗಿಗಳು ಪತ್ತೆಯಾಗಿದ್ದು, ರೋಗಿಗಳಿಗೆ ಔಷಧೋಪಚಾರ ನೀಡಲಾಗಿದೆ. ತಾಲೂಕಿನಲ್ಲಿ 19544 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 1212 ಖಚಿತಗೊಂಡಿದೆ. ತಾಲೂಕಿನ ಸಾವಳಗಿ ಮತ್ತು ಕೊಣ್ಣೂರಪ್ರಾಥಮಿಕ ಆರೋಗ್ಯ ಕೇಂದ್ರಗಳುಅವ್ಯವಸ್ಥೆ ಆಗರವಾಗಿದ್ದು, ಕೂಡಲೇ ಅವನ್ನು ಸರಿಪಡಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕಷ್ಟು ಔಷಧಿ ಸಂಗ್ರಹವಿದ್ದರೂ ಕೊರತೆ ಇದೆ ಎಂದು ರೋಗಿಗಳಿಗೆ ಹೊರಗಡೆಯಿಂದ ಔಷಧಿ ಖರೀದಿಗೆ ಹೇಳಿತ್ತಿರುವುದು ತಪ್ಪು.ವೈದ್ಯರು ರೋಗಿಗಳೊಂದಿಗೆ ಸರಿಯಾಗಿ ವರ್ತಿಸಿ ಅವರಿಗೆ ಸ್ಪಂದಿಸಿ ಉಪಚರಿಸಬೇಕು ಎಂದು ಸೂಚಿಸಲಾಯಿತು.

ಸಭೆಯಲ್ಲಿ ತಾಪಂ ಆಧ್ಯಕ್ಷೆ ಸುಜಾತಾಕಲ್ಯಾಣಿ, ಉಪಾಧ್ಯಕ್ಷೆ ಸಂದರವ್ವ ಬೆಳಗಲಿ, ಇತರರು ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.