ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ
ಕರವೇಯಿಂದ ಎತ್ತಿನ ಬಂಡಿಯಲ್ಲಿ ಕೇಂದ್ರ ಸರ್ಕಾರದ ಪ್ರತಿಕೃತಿ ಮೆರವಣಿಗೆ
Team Udayavani, Feb 5, 2021, 6:53 PM IST
ಬಾಗಲಕೋಟೆ: ಕೇಂದ್ರ ಸರ್ಕಾರದ ಪ್ರತಿಕೃತಿಯನ್ನು ಎತ್ತಿನ ಬಂಡಿಯಲ್ಲಿರಿಸಿ ಮೂರು ಕಿ.ಮೀವರೆಗೆ ಮೆರವಣಿಗೆ ನಡೆಸುವ ಮೂಲಕ ತೈಲ ಬೆಲೆ ಏರಿಕೆ ವಿರೋಧಿಸಿ ಕರವೇ (ನಾರಾಯಣಗೌಡ ಬಣ) ಕಾರ್ಯಕರ್ತರು ಗುರುವಾರ ವಿನೂತನ ಪ್ರತಿಭಟನೆ ನಡೆಸಿದರು.
ನಗರದ ಬಸವೇಶ್ವರ ವೃತ್ತದಿಂದ ಕೇಂದ್ರ ಸರ್ಕಾರದ ಪ್ರತಿಕೃತಿಯನ್ನು ಎತ್ತಿನ ಬಂಡಿಯಲ್ಲಿರಿಸಿ, ಅಲ್ಲಿಂದ ನವನಗರದ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಂತರ ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕರವೇ ಜಿಲ್ಲಾ ಅಧ್ಯಕ್ಷ ರಮೇಶ ಬದ್ನೂರ ಮಾತನಾಡಿ, ಕೊರೊನಾ ವೇಳೆ ಲಾಕ್‌ಡೌನ್ ಹೇರಿದ್ದು, ಈ ನಿಯಮ ಪಾಲನೆಯಿಂದ ದೇಶದ ವ್ಯಾಪಾರಸ್ಥರು, ದಿನಗೂಲಿ ಕೆಲಸಗಾರರು ಕೆಲಸವಿಲ್ಲದೇ ಆರ್ಥಿಕ ಸಂಕಷ್ಟದಿಂದ ಬಳಲಿದ್ದಾರೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ, ಇಂಧನ ದರಗಳ ಮೇಲೆ ಆತಿಯಾದ ತೆರಿಗೆ, ಅಬಕಾರಿ ಸುಂಕ ಹೆಚ್ಚಿಸುವ ಮೂಲಕ ದೇಶದ ಜನರ ಜೀವನಕ್ಕೆ ಕೊಡಲಿಪೆಟ್ಟು ನೀಡಿದ್ದಾರೆ. ಇದು ಸರ್ಕಾರದ ಮೇಲೆ ನಂಬಿಕೆ ಇಟ್ಟು, ಬಹುಮತ ನೀಡಿದ ಜನತೆಗೆ ಮಾಡಿದ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಾರಿಗೆ ವ್ಯವಸ್ಥೆ, ಪ್ರತಿಯೊಬ್ಬರ ಜೀವಾಳ ಇದ್ದಂತೆ, ಎಲ್ಲ ಚಟುವಟಿಕೆಗಳ ನರನಾಡಿ ಇದ್ದಂತೆ. ಇಂಧನದ ಅವಲಂಬನೆಯಿಂದ ನಡೆಯಬಲ್ಲ ಅವಶ್ಯಕ ಸಾರಿಗೆ ವ್ಯವಸ್ಥೆಗೆ ನಿರಂತರ ಬೆಲೆ ಏರಿಕೆಯಿಂದ ಕತ್ತು ಹಿಸುಕಿದಂತಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 55 ಡಾಲರ್ ಪ್ರತಿ ಬ್ಯಾರೇಲ್‌ಗೆ ಇದ್ದು, ವಾಸ್ತವ ಪೆಟ್ರೋಲ್ ದರ 30 ರೂ.ಗಿಂತ ಕಡಿಮೆ ಇದೆ. ಆದರೆ, ರಾಜ್ಯದಲ್ಲಿ ಪೆಟ್ರೋಲ್ ಬೆಲೆ 90ರೂ. ಏರಿಕೆಯಾಗಿದೆ. ಇದು ಕೇಂದ್ರ ಸರ್ಕಾರ ಬಹಿರಂಗವಾಗಿ ಮಾಡುತ್ತಿರುವ ಲೂಟಿ ಎಂದು ಆರೋಪಿಸಿದರು.
ಇದನ್ನೂ ಓದಿ : ಬ್ರಾಹ್ಮಣ ಸಂಸತ್‌ಗೆ ರಜತೋತ್ಸವ ಸಂಭ್ರಮ
ನಗರಸಭೆ ಮಾಜಿ ಸದಸ್ಯ ಗೋವಿಂದರಾಜ ಬಳ್ಳಾರಿ ಮತ್ತು ಕಾಂಗ್ರೆಸ್ ಯುವ ಘಟಕ ಮಾಜಿ ಅಧ್ಯಕ್ಷ ಚಂದ್ರಶೇಖರ ರಾಠೊಡ, ಹೋರಾಟಕ್ಕೆ ಬೆಂಬಲ ನೀಡಿ ಪಾಲ್ಗೊಂಡಿದ್ದರು. ಕರವೇ ಪ್ರಮುಖರಾದ ಬಸವರಾಜ ಧರ್ಮಂತಿ, ವಿಜಯ ಕಾಳೆ, ಮಲ್ಲು ಕಟ್ಟಿಮನಿ, ಬಸವರಾಜ ಅಂಬಿಗೇರ, ಮಂಜು ರಾಮದುರ್ಗ, ಆಕಾಶ ಆಸಂಗಿ, ರವಿ ಶಿಂಧೆ, ಮಂಜು ಪವಾರ, ಪ್ರವೀಣ ಪಾಟೀಲ, ದೇವೇಂದ್ರ ಆಸ್ಕಿ, ಆತ್ಮಾರಾಮ ನೀಲನಾಯಕ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.