ಕೋವಿಡ್ ಸಂಕಷ್ಟದೊಂದಿಗೆ ಕೇಂದ್ರದಿಂದ ಇಂಧನ ಕಷ್ಟ
Team Udayavani, Jul 8, 2020, 2:47 PM IST
ಮುಧೋಳ: ಕೋವಿಡ್ ಸಂಕಷ್ಟದ ಸಮಯದಲ್ಲೂ ಕೇಂದ್ರ ಸರ್ಕಾರ ಇಂಧನ ಬೆಲೆ ಏರಿಕೆ ಮಾಡುವ ಮೂಲಕ ಬಡ ಜನರಿಗೆ ಕಷ್ಟ ಕೊಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಸತೀಶ ಬಂಡಿವಡ್ಡರ ಆರೋಪಿಸಿದರು.
ನಗರದ ರನ್ನ ವೃತ್ತದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪೆಟ್ರೋಲ್-ಡಿಸೇಲ್ ಬೆಲೆ ಗಗನಕ್ಕೇರಿದೆ. ಇದರಿಂದ ಸಾಮಾನ್ಯ ಜನರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದರು. ಕೋವಿಡ್-19 ಕಷ್ಟದ ಸಮಯದಲ್ಲಿ ಜನಸಾಮಾನ್ಯರ ಬಳಿ ದುಡ್ಡಿಲ್ಲ. ಯಾವ ಉದ್ಯಮಿಗಳ ಬಳಿಯೂ ದುಡ್ಡಿಲ್ಲ. ಯಾರ ಆರ್ಥಿಕ ಪರಿಸ್ಥಿತಿಯೂ ಚೆನ್ನಾಗಿಲ್ಲ. ಇಂತಹ ಸಮಯದಲ್ಲಿ ಜನಸಾಮಾನ್ಯರಿಗೆ ಸಹಾಯ ಮಾಡುವುದು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜವಾಬ್ದಾರಿ. ಆದರೆ, ಸರ್ಕಾರ ಬೇಕಾಬಿಟ್ಟಿಯಾಗಿ ವರ್ತಿಸುವ ಜತೆಗೆ ಬೆಲೆ ಏರಿಕೆಗೆ ಕಡಿವಾಣ ಹಾಕುತ್ತಿಲ್ಲ. ಇದರಿಂದ ಜನರು ರೊಚ್ಚಿಗೆದ್ದಿದ್ದಾರೆ ಎಂದರು.
ರಾಜ್ಯ ಸರಕಾರದಿಂದ ಆರೋಗ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಪಿಪಿಇ ಕಿಟ್, ಸ್ಯಾನಿಟೈಸರ್ ಖರೀದಿಯಲ್ಲೂ ಕೋಟ್ಯಂತರ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಸ್. ಜಿ. ನಂಜಯ್ಯನಮಠ ಮಾತನಾಡಿ, ಕೇಂದ್ರ ಸರಕಾರ ಕಳೆದ 20 ದಿನಗಳಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಗಳು ತಲಾ 10 ರೂ. ವರೆಗೆ ಏರಿಕೆ ಮಾಡಿದೆ. ಇದು ಜನಸಾಮಾನ್ಯರಿಗೆ ಹೊರೆಯಾಗಿದೆ. ಕೋವಿಡ್ 19 ಸಮಯದಲ್ಲಿ ಜನರಿಗೆ ಸಹಾಯ ಮಾಡುವುದನ್ನು ಬಿಟ್ಟು ತೊಂದರೆ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ದಯಾನಂದ ಪಾಟೀಲ ಮಾತನಾಡಿ, ಜನ ಕಷ್ಟದಲ್ಲಿದ್ದಾರೆ. ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು. ರನ್ನ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆ ಮೂಲಕ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲೋಕಣ್ಣ ಕೊಪ್ಪದ, ಬಾಬು ಗೋಲಶೆಟ್ಟಿ, ಕಾಶಿಮಸಾಬ ಕೆಸರಟ್ಟಿ, ದುಂಡಪ್ಪ ಲಿಂಗರಡ್ಡಿ, ಗಿರೀಶ ಲಕ್ಷಾಣಿ, ಪಾಂಡಪ್ಪ ಹೂವನ್ನವರ, ಸುಧೀರ ಅರಳಿಕಟ್ಟಿ, ಕಾಂತುಗೌಡ ಪಾಟೀಲ, ಸುಭಾಸ ಗಸ್ತಿ, ಹಣಮಂತ ಅಡವಿ, ತಿಮ್ಮಣ್ಣ ಹಲಗತ್ತಿ, ಶೋಭಾ ಜಿಗಜಿನ್ನಿ, ತಿರುಪತಿ ಬಂಡಿವಡ್ಡರ, ಶ್ರೀಕಾಂತ ಕೋಳಿ, ಕುಮಾರ ಬಂಡಿವಡ್ಡರ, ಅಶೋಕ ಬಿಲ್ಲನ್ನವರ, ಮನು ಕೆರಕಲಮಟ್ಟಿ, ಸಿದ್ದು ದೇವಗೋಳ, ಬಸವರಾಜ ಇಟ್ಟನ್ನವರ, ಜಗನ್ನಾಥ ಪವಾರ, ನವಿನ ಬದ್ರಿ, ಗುರು ಮಠದ, ವೈ.ಎಸ್. ಲೋಗಾಂವಿ, ಮಂಜುನಾಥ ಮಂಟೂರ, ಗೋಪಾಲ ಗುಣದಾಳ, ಮಲ್ಲು ಪೂಜಾರಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.