ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ
Team Udayavani, Dec 4, 2019, 4:53 PM IST
ಬಾಗಲಕೋಟೆ: ಕ್ಷೌರಿಕ ಸಮಾಜವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮಾನಿಸಿದ್ದಾರೆ ಎಂದು ಆರೋಪಿಸಿ ಹಡಪದ ಅಪ್ಪಣ್ಣ ಸಮಾಜ ಬಾಂಧವರು ಮಂಗಳವಾರ ಪ್ರತಿಭಟನೆ ನಡೆಸಿದರು.
ನವನಗರದ ಡಾ| ಅಂಬೇಡ್ಕರ್ ಭವನದಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಹಡಪದ ಅಪ್ಪಣ್ಣಸಮಾಜದ ಪ್ರಮುಖರು ಮಾತನಾಡಿ, ಮಾಜಿಸಿಎಂ ಸಿದ್ದರಾಮಯ್ಯ ಕ್ಷೌರಿಕ ಸಮಾಜದ ಬಗ್ಗೆ ಅವಮಾನಕರ ಪದ ಬಳಸಿ ಮಾತನಾಡಿದ್ದಾರೆ. ಇದರಿಂದ ಸಮಾಜ ಬಾಂಧವರಿಗೆ ತೀವ್ರ ನೋವಾಗಿದೆ. ಕೂಡಲೇ ಸಮಾಜ ಬಾಂಧವರ ಕ್ಷಮೆ ಕೋರಬೇಕೆಂದು ಒತ್ತಾಯಿಸಿದರು.
ಕ್ಷೌರಿಕ ಸಮಾಜ, ನಿತ್ಯ ಕೆಲಸವನ್ನೇ ನಂಬಿ ಜೀವನ ನಡೆಸುವವರು. ಅವರ ವೃತ್ತಿಯನ್ನೇ ಅವಮಾನಿಸುವ ರೀತಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ಇದುಅತ್ಯಂತ ಅವಮಾನಕರ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿವಶರಣ ಹಡಪದ ಅಪ್ಪಣ್ಣ ಸಮಾಜ ಅಭಿವೃದ್ಧಿ ಸಂಘದ ರಾಜ್ಯ ಘಟಕ ಅಧ್ಯಕ್ಷ ಎಚ್.ಡಿ. ವೈದ್ಯ, ಜಿಲ್ಲಾ ಘಟಕದ ಗೌರವ ಅಧ್ಯಕ್ಷ ಎಂ.ಎಸ್. ನಾವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಹಡಪದ, ಮುಖಂಡರಾದ ವಿ.ಡಿ. ನಾವಿ, ವಿಠಲ ಹಡಪದ, ಹನುಮಂತ ಹಡಪದ, ಸುರೇಶ ಹಡಪದ, ನೀಲಪ್ಪ ಹಡಪದ, ಪ್ರಭು ಹಿಪ್ಪರಗಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.