ಮದ್ಯ ಮಾರಾಟ ನಿಷೇಧಕ್ಕೆ ಜಲ ಸತ್ಯಾಗ್ರಹ

Team Udayavani, Jan 29, 2020, 11:34 AM IST

bk-tdy-1

ಕೂಡಲಸಂಗಮ: ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ರಾಜ್ಯದ ವಿವಿಧ ಜಿಲ್ಲೆಗಳ ನೂರಾರು ಮಹಿಳೆಯರು ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ತ್ರಿವೇಣಿ ಸಂಗಮದಲ್ಲಿ ಜಲ ಸತ್ಯಾಗ್ರಹ ಆರಂಭಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಮಹಿಳೆಯರು, ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ತ್ರಿವೇಣಿ ಸಂಗಮವಾದ ಕೂಡಲಸಂಗಮದ ಸಂಗಮೇಶ್ವರ ದೇವಾಲಯ ಹೊರ ಆವರಣದ ರಥ ಬೀದಿಯ ಪಕ್ಕದ ಕೃಷ್ಣಾ ನದಿಯಲ್ಲಿ ಎದೆಮಟ ನೀರಿನಲ್ಲಿ ನಿಂತು ಮದ್ಯ ನಿಷೇಧಿಸುವಂತೆ ಒತ್ತಾಯಿಸಿದರು. ಹೆಂಡ ಬೇಡ-ತುಂಡು ಭೂಮಿ ಬೇಕು, ಬೀರು-ಬೇಡ ನೀರು ಬೇಕು, ಅಮಲೀನ ಕೇಂದ್ರ ಬೇಡ -ಆರೋಗ್ಯ ಕೇಂದ್ರ ಬೇಕು, ಸಾರಾಯಿ ಬೇಡ -ಶಿಕ್ಷಣ ಬೇಕು, ಸರಾಯಿ ತೆರಿಗೆ ಕೋಟಿ ಕೋಟಿ- ಬಡವರ ಜೀವನ ಲೂಟಿ ಲೂಟಿ ಎಂಬ ಘೋಷಣೆ ಕೂಗುತ್ತ ಮದ್ಯ ನಿಷೇಧ ಮಾಡಲೇಬೇಕೆಂದು ಹಕ್ಕೋತ್ತಾಯ ಮಂಡಿಸಿದರು.

ಏನೇ ಬರಲಿ ಒಗ್ಗಟ್ಟಿರಲ್ಲಿ, ಗೆಲ್ಲುವವರೆಗೆ ಹೋರಾಟ ಎಂಬ ಗೂಗಿನ ವಿಭಿನ್ನ ರೀತಿಯ ಮದ್ಯಪಾನ ನಿಷೇದ ಹೋರಾಟ ಮಂಗಳವಾರ ಸುಕ್ಷೇತ್ರಕ್ಕೆ ಆಗಮಿಸಿದ ಪ್ರವಾಸಿಗರು ಭಕ್ತರ ಮನ ಕುಲಕುವಂತೆ ಮಾಡಿತ್ತು, ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲ ಎಂದು ಬಂದ ಪ್ರವಾಸಿಗರು ಭಕ್ತರು ಹೋರಾಟಗಾರರಿಗೆ ಬೆಂಬಲ ಕೊಟ್ಟರು.ಬೆಳಗ್ಗೆ 9 ಗಂಟೆಯ ಸುಮಾರಿಗೆ 150 ಜನರ ತಂಡ ಎದೆಮಟ ನೀರಿಗೆ ಇಳಿದು ಹೋರಾಟ ಆರಂಭಿಸಿದರು.

ಘೋಷಣೆಗಳ ಮಧ್ಯೆ ಯಾರಿಗೆ ಹೇಳಲೆವ್ವ ನನ್ನ ಬಾಳಿನ ಕಥೆಯನ್ನು, ಗೊಳಿನ ಕಥೆಯನ್ನು, ತಂದೆ ಸತ್ತ, ಮಾವ ಸತ್ತ, ಮಗ ಸತ್ತ…. ಹಾಡಿಗೆ ಹಲಗೆ ನಾದ ಮೆರಗು ಕೊಟ್ಟರೆ, ಸತ್ಯಾಗ್ರಹ ವೀಕ್ಷಣೆಗೆ ಬಂದವರು, ಹೋರಾಟಗಾರ ಹಾಡು, ನೋವು ಕೇಳಿ ಕಣ್ಣಿರಾದರು.

150 ಜನರ ತಂಡ 1ರಿಂದ 2ಗಂಟೆ ನಡುಮಟ್ಟದ ನೀರಿನಲ್ಲಿ ನಿಲ್ಲುವುದು. ಪಾಳೆ ಪದ್ದತಿಯಂತೆ ಸತ್ಯಾಗ್ರಹಿಗಳು ನಿಲ್ಲಲು ನದಿ ದಡದಲ್ಲಿ ಕುಳಿತಿದ್ದರು. ರಾಜ್ಯದ 16 ಜಿಲ್ಲೆಯಿಂದ 800ಕ್ಕೂ ಅಧಿಕ ಹೋರಾಟಗಾರರು ಮಂಗಳವಾರ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಹೋರಾಟದ ಸ್ಥಳದ ನದಿಯ ಬದಿಯಲ್ಲಿ ಮುಂಜಾಗ್ರತೆಗಾಗಿ ಕೂಡಲಸಂಗಮ ಅಭಿವೃದ್ಧಿ ಮಂಡಳಿ ದೋಣಿ ನಿಲ್ಲಿಸಿತ್ತು. ಈ ಜಲ ಸತ್ಯಾಗ್ರಹ ಬುಧವಾರ ಮುಂದುವರಿಯಲಿದೆ. ಗುರುವಾರ ಸಮಾವೇಶದ ಮೂಲಕ ಸರ್ಕಾರಕ್ಕೆ ಮದ್ಯಪಾನ ನಿಷೇಧಿಸುವಂತೆ ನಾಡಿನ ವಿವಿಧ ಸ್ವಾಮೀಜಿಗಳೊಂದಿಗೆ ಸಮಾವೇಶ ನಡೆಸಿ, ಒತ್ತಾಯಿಸುತ್ತೇವೆ. ಅಷ್ಟಕ್ಕೂ ಸರ್ಕಾರದಿಂದ ಸೂಕ್ತ ಭರವಸೆ ಬರದಿದ್ದರೆ ಮುಂದಿನ ಹೋರಾಟದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯ ಸ್ವರ್ಣಾ ಭಟ್‌ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.