ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಸಂಘಟನೆಗಳ ಪ್ರತಿಭಟನೆ
Team Udayavani, May 5, 2019, 11:44 AM IST
ಬೀಳಗಿ: ರಾಯಚೂರು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ತಾಲೂಕು ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ, ವಿಶ್ವ ಹಿಂದೂ ಪರಿಷತ್ ಹಾಗೂ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ ಪ್ರತಿಭಟನೆ ನಡೆಸಿತು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ವಿದ್ಯಾರ್ಥಿನಿ ಹತ್ಯೆಯ ಹಿಂದಿನ ರಹಸ್ಯ ಬಯಲಾಗಬೇಕೆಂದು ಆಗ್ರಹಿಸಿ, ವ್ಯವಸ್ಥೆ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದರು. ಮಿನಿ ವಿಧಾನಸೌಧ ಆವರಣ ತಲುಪಿದ ಪ್ರತಿಭಟನಾ ಮೆರವಣಿಗೆ ಅಲ್ಲಿ ಸಭೆಯಾಗಿ ಮಾರ್ಪಟ್ಟಿತು. ಕೆಲಕಾಲ ಪ್ರತಿಭಟನೆ ನಡೆಸಿ ಮೂಲಕ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು,
ವಿಶ್ವಕರ್ಮ ಸಮಾಜದ ಮುಖಂಡ ಪ್ರಭಾಕರ ಟಂಕಸಾಲಿ ಮಾತನಾಡಿ, ವಿದ್ಯಾರ್ಥಿನಿ ಮೇಲೆ ಆಗಿರುವ ಅತ್ಯಾಚಾರ ಶಂಕಿತ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರಗತಿಯಲ್ಲಿ ಬಂಧಿಸಬೇಕು. ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸಿ, ಸೂಕ್ತ ಪರಿಹಾರ ನೀಡಬೇಕು. ಈ ಪ್ರಕರಣದ ತೀರ್ಪು ಸಮಾಜಘಾತುಕ ಶಕ್ತಿಗಳಿಗೆ ಪಾಠವಾಗಬೇಕು. ಪ್ರಕರಣ ಶೀಘ್ರ ಇತ್ಯರ್ಥವಾಗಬೇಕು. ಇಲ್ಲದಿದ್ದರೆ, ಪ್ರತಿಭಟನೆ ಸ್ವರೂಪವನ್ನು ತೀವ್ರಗೊಳಿಸುವ ಮೂಲಕ ನ್ಯಾಯ ಸಿಗುವವರೆಗೂ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕೆ.ಎನ್.ಬಡಿಗೇರ, ನಾಗರಾಜ ಟಂಕಸಾಲಿ, ಸಂಗಪ್ಪ ಕಟಗೇರಿ, ವಿ.ಜಿ.ರೇವಡಿಗಾರ, ಪಂಡಲೀಕ ದಳವಾಯಿ, ಎಸ್.ಎನ್.ಮುತ್ತಗಿ, ವಿದ್ಯಾ ಟಂಕಸಾಲಿ, ರುಕ್ಮಿಣಿ ಬಡಿಗೇರ, ವಿಠuಲ ಕಂಬಾರ, ಗೀತಾ ಬಡಿಗೇರ, ಜಯಶ್ರೀ ನಿರುಗ್ಗಿ, ವೀರಣ್ಣ ತೋಟದ, ಕಸ್ತೂರಿ ಬಡಿಗೇರ, ಮಲ್ಲಪ್ಪ ಬಡಿಗೇರ, ದ್ಯಾಮಣ್ಣ ಬಡಿಗೇರ, ದುಂಡಪ್ಪ ಬಡಿಗೇರ ಇತರರು ಇದ್ದರು.
ನೊಂದ ಕುಟುಂಬಕ್ಕೆ ನ್ಯಾಯ ಕೊಡಿ
ಜಮಖಂಡಿ: ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಕೊಲೆ ಪ್ರಕರಣ ಖಂಡಿಸಿ ಸ್ಥಳೀಯ ವಿಶ್ವ ನಿರ್ಮಾಣ ಸೇನೆ ಕಾರ್ಯಕರ್ತರು ನಗರದ ಎ.ಜಿ.ದೇಸಾಯಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ವಿಶ್ವ ನಿರ್ಮಾಣ ಸೇನೆ ರಾಜ್ಯ ಕಾರ್ಯದರ್ಶಿ ರಮೇಶ ಬೀಳಗಿ ಮಾತನಾಡಿ, ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ಮಹೇಶ ವಡ್ಡರ, ತಾಲೂಕಾಧ್ಯಕ್ಷ ಮಹಾದೇವ ಮಾಲೋಜಿ, ಮಹೇಶ ನಿಂಗನೂರ, ನಿವೃತ್ತಿನಾಥ ವಾಸ್ಟರ, ಶಿವು ಗಸ್ತಿ, ಶ್ರೀಕಾಂತ ಕಾಳೆ, ಸಾಗರ ಸುತ್ತಾರ, ನಾಗ ರಾಜ ಕಣಬೂರ, ಸಾರಕ ಚನಾಳ, ಬಸವರಾಜ ಸಸಲಾದಿ, ದಶರಥ ಝಂಡೆ, ಶ್ರೀಶೈಲ ಮೊಸಗಡಿ, ಬಸವರಾಜ ತುಬಚಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.