ಪ.ಪೂ.ಉಪನ್ಯಾಸಕರ ಪ್ರತಿಭಟನೆ
Team Udayavani, Feb 11, 2020, 12:31 PM IST
ಬಾಗಲಕೋಟೆ: ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರದಿಂದ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಕಾರ್ಯ ನಿರ್ವಹಿಸುವ ಮೂಲಕ ಪ್ರತಿಭಟನೆ ಆರಂಭಿಸಿದರು.
6ನೇ ವೇತನ ಆಯೋಗದ ವರದಿ ಜಾರಿ ವೇಳೆ ಆದ ವೇತನ ತಾರತಮ್ಯ ನಿವಾರಣೆ, ಕಾಲ್ಪನಿಕ ವೇತನ, ಸರ್ಕಾರಿ ಕಾಲೇಜುಗಳ ಪ್ರಾಚಾರ್ಯ ಹುದ್ದೆ ನೇಮಕಾತಿ, ಜ್ಯೋತಿ ಸಂಜೀವಿನಿ ಯೋಜನೆ ಅನುದಾನಿತ ಕಾಲೇಜುಗಳ ಉಪನ್ಯಾಸಕರಿಗೂ ವಿಸ್ತರಣೆ ಹೀಗೆ ಒಟ್ಟು 23 ಪ್ರಮುಖ ಬೇಡಿಕೆಗಳನ್ನು ಉಪನ್ಯಾಸಕರು ಹಲವು ವರ್ಷಗಳಿಂದ ಸರ್ಕಾರದ ಮುಂದಿಟ್ಟಿದ್ದಾರೆ. ಈಗಾಗಲೇ ಮೊದಲ ಹಂತದಲ್ಲಿ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಿ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದು, 2ನೇ ಹಂತವಾಗಿ ಬೆಂಗಳೂರಿನಲ್ಲಿ ಧರಣಿ ನಡೆಸಲಾಗಿತ್ತು. ಈಗ 3ನೇ ಹಂತವಾಗಿ ಪ್ರಥಮ ಪಿಯು ಪರೀಕ್ಷೆ ಆರಂಭವಾದ ಹಿನ್ನೆಲೆಯಲ್ಲಿ ಪರೀಕ್ಷೆ ದಿನದಂದು ಎಲ್ಲ ಉಪನ್ಯಾಸಕರು, ಪ್ರಾಚಾರ್ಯರು ಕೈಗೆ ಕಪ್ಪುಬಟ್ಟೆ ಕಟ್ಟಿಕೊಂಡು ಕಾರ್ಯ ನಿರ್ವಹಿಸಿದರು.
ಸರ್ಕಾರ ಕೂಡಲೇ ಉಪನ್ಯಾಸಕರ ಬೇಡಿಕೆ ಈಡೇರಿಸದೇ ಇದ್ದರೆ ಮುಂದೆ ದ್ವಿತೀಯ ಪಿಯು ವಿದ್ಯಾರ್ಥಿಗಳ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸಲಾಗುವುದು. 3ನೇ ಹಂತವಾಗಿ ಸೋಮವಾರ ಜಿಲ್ಲೆಯಾದ್ಯಂತ ಇರುವ ಸರ್ಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಎಲ್ಲ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಹೋರಾಟ ನಡೆಸಿದ್ದೇವೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ರಾಜ್ಯ ಘಟಕದ ಪರಿಷತ್ ಸದಸ್ಯ ಎಸ್.ಬಿ. ಬಳವಾಟ, ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಂ ಗೌಡರ, ಪ್ರಧಾನ ಕಾರ್ಯದರ್ಶಿ ಮಹೇಶ ಜಕ್ಕಣ್ಣವರ, ಕಾರ್ಯಾಧ್ಯಕ್ಷೆ ನಾಗರತ್ನಮ್ಮ ಸುಬ್ಟಾರಡ್ಡಿ, ಖಜಾಂಚಿ ಎಂ.ಸಿ. ನರೇಗಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.