ರಾಜ್ಯ ಹೆದ್ದಾರಿಯಲ್ಲಿ ಮೃತದೇಹವಿಟ್ಟು ಪ್ರತಿಭಟನೆ
ಶವಸಂಸ್ಕಾರಕ್ಕೆ ಅವಕಾಶ ಕಲ್ಪಿಸಿಕೊಟ್ಟ ತಹಶೀಲ್ದಾರ್
Team Udayavani, Jun 24, 2019, 9:06 AM IST
ಜಮಖಂಡಿ: ಕುಂಬಾರಹಳ್ಳದಲ್ಲಿ ವಡ್ಡರ ಸಮಾಜಕ್ಕೆ ಶವಸಂಸ್ಕಾರಕ್ಕೆ ಸ್ಥಳ ನಿಗದಿಗೆ ಆಗ್ರಹಿಸಿ ರಾಜ್ಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಸಮಾಜ ಬಾಂಧವರು ಪ್ರತಿಭಟನೆ ನಡೆಸಿದರು.
ಜಮಖಂಡಿ: ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ವಡ್ಡರ ಸಮಾಜಕ್ಕೆ ಶವಸಂಸ್ಕಾರಕ್ಕೆ ನಿಗದಿತ ಸ್ಥಳವಿಲ್ಲದೇ ಶವಸಂಸ್ಕಾರಕ್ಕೆ ಪರದಾಡುವಂತಾಗಿದ್ದು, ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ವಡ್ಡರ ಸಮಾಜದವರು ಬೆಳಗಾವಿ ವಿಜಯಪುರ ರಾಜ್ಯ ಹೆದ್ದಾರಿ ಮೇಲೆ ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿದರು.
ವಡ್ಡರ ಸಮಾಜದ ಮಹಿಳೆ ಶಿವಕ್ಕ ಅನ್ನಪ್ಪ ಬಂಡಿವಡ್ಡರ (52) ನಿಧನರಾಗಿದ್ದು, ಶವಸಂಸ್ಕಾರ ಮಾಡುವ ಸಂದರ್ಭದಲ್ಲಿ ತಿಕ್ಕಾಟ ಆರಂಭಗೊಂಡಿದೆ. ಗ್ರಾಮದ ಕೆಲವು ಸಮಾಜದ ಪ್ರಮುಖರು ಶವಸಂಸ್ಕಾರಕ್ಕೆ ಅಡ್ಡಿ ಉಂಟು ಮಾಡಿದರು. ಹಳ್ಳದ ಪಕ್ಕದ ಭೂಮಿಯಲ್ಲಿ ಶವಸಂಸ್ಕಾರ ಮಾಡುವದರಿಂದ ತಮಗೆ ವಾಸನೆ ಬರುತ್ತಿದ್ದು, ಆ ಸ್ಥಳದಲ್ಲಿ ಶವಸಂಸ್ಕಾರಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಸಮಾಜದ ಜನರು ಶವಸಂಸ್ಕಾರ ಮಾಡದೇ ರಾಜ್ಯ ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಪ್ರಶಾಂತ ಚನಗೊಂಡ ಪ್ರತಿಭಟನೆ ನಿರತ ಜನರನ್ನು ಸಮಾಧಾನಗೊಳಿಸಲು ಯತ್ನಿಸಿದರು. ಮೂರು ತಲೆಮಾರಿನಿಂದ ನಡೆಯುತ್ತಿರುವ ಶವಸಂಸ್ಕಾರ ಜಾಗ ಸರಕಾರದ ಜಾಗವಾಗಿದ್ದು, ಇದಕ್ಕೆ ಯಾರು ತಡೆ ಒಡ್ಡುವಂತಿಲ್ಲ ಎಂದು ಹೇಳುವ ಮೂಲಕ ಶವಸಂಸ್ಕಾರ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.