ಜಮಖಂಡಿ ಕಾಲೇಜಿಗೆ ಸೌಕರ್ಯ ಕಲ್ಪಿಸಿ
Team Udayavani, Nov 5, 2019, 12:48 PM IST
ಜಮಖಂಡಿ: ನಗರದ ಸರ್ಕಾರಿ ಪಿ.ಬಿ. ಪದವಿ ಪೂರ್ವ ಮಹಾವಿದ್ಯಾಲಯಕ್ಕೆ ಮೂಲಸೌಕರ್ಯ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ನಗರದ ಸರ್ಕಾ ಮಹಾವಿದ್ಯಾಲಯದಮುಖ್ಯದ್ವಾರ ಬೆಳಗ್ಗೆ 7ಗಂಟೆಗೆ ಆರಂಭಿಸದಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಬಸ್ ನಿಲ್ದಾಣ ರಸ್ತೆ ಮಾರ್ಗವಾಗಿ ಕಾಲೇಜಿನ ಪ್ರಾಚಾರ್ಯ ಹಾಗೂ ಸಿಬ್ಬಂದಿ ವಿರುದ್ಧ ಘೋಷಣೆ ಕೂಗುತ್ತಾ ಶಾಸಕ ಆನಂದ ನ್ಯಾಮಗೌಡ ನಿವಾಸಕ್ಕೆ ತೆರಳಿದರು. ಶಾಸಕರು ವಾಯುವಿಹಾಕ್ಕೆ ಹೋಗಿದ್ದ ವಿಷಯ ತಿಳಿದ ಎಲ್ಲ ವಿದ್ಯಾರ್ಥಿಗಳು ಮರಳಿ ನಗರದ ಎ.ಜಿ.ದೇಸಾಯಿ ವೃತದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಬಿಇಒ ಸಿ.ಎಂ. ನ್ಯಾಮಗೌಡ ಕಾಲೇಜಿಗೆ ಧಾವಿಸಿ ವಿದ್ಯಾರ್ಥಿಗಳ ಮನವಿ ಆಲಿಸಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಕಾಲೇಜಿನ ಮುಖ್ಯದ್ವಾರ ತೆಗೆಸುವುದಾಗಿ ಅಲ್ಲದೆ ಕಾಲೇಜಿನಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ನೀಗಿಸುವ ಭರವಸೆ ನೀಡಿದರು. ತಾಲೂಕಿನ ಅನೇಕ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳು ಬೆಳಗ್ಗೆ ಮುಖ್ಯದ್ವಾರದ ಬಳಿ ನಿಲ್ಲಬೇಕು. ಇದರಿಂದ ನಮ್ಮ ವಿದ್ಯಾಭ್ಯಾಸಕ್ಕೆ ಕುಂಠಿತವಾಗುತ್ತಿದೆ. ಕಾಲೇಜಿನ ಪ್ರಾಂಶುಪಾಲರು ಸರಿಯಾದ ಸಮಯಕ್ಕೆ ಬರುವುದಿಲ್ಲ. ಕಾಲೇಜಿನ ಆವರಣದಲ್ಲಿ ಶುದ್ಧ ಕುಡಿವ ನೀರು ವ್ಯವಸ್ಥೆ, ವಿದ್ಯುತ್ ಸಂಪರ್ಕ ಸಮರ್ಪಕವಾಗಿಲ್ಲ.
ಕ್ಲಾಸ್ ರೂಮ್‌ಗಳಲ್ಲಿ ಬೆಳಕಿನ ಅಭಾವವಿದ್ದು, ಸುಟ್ಟ ದೀಪಗಳಿವೆ. ಆಟದ ಮೈದಾನ ಇಲ್ಲ. ದೈಹಿಕ ಶಿಕ್ಷಣ ಶಿಕ್ಷಕರಿಲ್ಲದೇ ವಿದ್ಯಾರ್ಥಿಗಳಿಗೆ ಕ್ರೀಡೆ ಮರೀಚಿಕೆಯಾಗಿದೆ ಎಂದು ಆರೋಪಿಸಿದರು. ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸದೇ ಬೇಜವಾರಿಯಾಗಿ ವರ್ತಿಸಿದ ಪ್ರಾಚಾರ್ಯನನ್ನು ಆರಕ್ಷರು ತರಾಟೆಗೆ ತೆಗೆದುಕೊಂಡರು. ಪ್ರತಿದಿನ ಸರಿಯಾಗಿ ಮುಖ್ಯದ್ವಾರ ತೆಗೆಯಲಾರದ್ದಕ್ಕೆ ಮಕ್ಕಳು ರಸ್ತೆ ಪಕ್ಕದಲ್ಲಿ, ಬಸ್ ನಿಲ್ದಾಣದಲ್ಲಿ ನಿಲ್ಲುವಂತಾಗಿದೆ. ವಿದ್ಯಾರ್ಥಿಗಳಿಗೆ ಅಪಾಯ ಸಂಭವಿಸಿದರ ಪ್ರಾಚಾರ್ಯರೆ ಹೊಣೆಗಾರರು ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.