ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಕೊಡಿ: ಸಿದ್ದು


Team Udayavani, Feb 5, 2020, 11:20 AM IST

bk-tdy-1

ಬಾದಾಮಿ: ಬಡಮಕ್ಕಳಿಗೆ ದೊರೆಯುವ ಯೋಜನೆ ಜಾರಿಗೊಳಿಸಿದರೆ ಮಕ್ಕಳಿಗೆ ಅನುಕೂಲವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ಪಟ್ಟಣದ ಹೇಮರೆಡ್ಡಿ ಸಮುದಾಯ ಭವನದಲ್ಲಿ ಹಮ್ಮಿಕೊಂಡ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 2019- 20ನೇ ಸಾಲಿಗೆ ಪ್ರವೇಶ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟಾಪ್‌ ವಿತರಿಸಿ ಅವರು ಮಾತನಾಡಿದರು. ಈ ಹಿಂದೆ ಗ್ರಾಮೀಣ ಪ್ರದೇಶದ ಎಲ್ಲ ಮಕ್ಕಳಿಗೆ ಉಚಿತ ಬಸ್‌ ಪಾಸ್‌ ನೀಡಲು ಕಾಯ್ದೆ ಜಾರಿಗೊಳಿಸಿದ್ದೆ. ಆದರೆ, ಮುಂದಿನ ಸರಕಾರ ಅದನ್ನು ರದ್ದುಗೊಳಿಸಿತು ಎಂದರು.

ಇಂದಿನ ಮಕ್ಕಳೆ ದೇಶದ ಮುಂದಿನ ಸಂಪತ್ತು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ-ಸಹಕಾರ ನೀಡಬೇಕು. ಸರಕಾರಿ ಕಾಲೇಜಿನಲ್ಲಿ ಬಡಮಕ್ಕಳು ವಿದ್ಯಾಭ್ಯಾಸ ಮಾಡುತ್ತಾರೆ. ಅಂತವರಿಗೆ ಲ್ಯಾಪ್‌ಟಾಪ್‌ ಖರೀದಿ ಮಾಡಿ ಓದಲು ಸಾಧ್ಯವಾಗುವುದಿಲ್ಲ. ಈ ಯೋಜನೆಯನ್ನು ನಮ್ಮ ಸರಕಾರ ಜಾರಿ ಮಾಡಿತ್ತು. ಈ ಯೋಜನೆಗೆ 300 ಕೋಟಿ ರೂ. ಸರಕಾರಕ್ಕೆ ಹೊಣೆಯಾದರೂ ಮಕ್ಕಳ ಉನ್ನತ ಶಿಕ್ಷಣ ಮತ್ತು ಹೆಚ್ಚಿನ ವ್ಯಾಸಂಗ ಮಾಡಲು ಒಳ್ಳೆಯದಾಗಿದೆ ಎಂದರು.

ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ಬೋಧಕ ಸಿಬ್ಬಂದಿ ಅಧ್ಯಯನ ಮಾಡಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಇಂದಿನ ಮಕ್ಕಳಿಗೆ ಸಾಮಾಜಿಕ ಜವಾಬ್ದಾರಿ ಬರುವಂತಹ ನೀತಿ ಪಾಠ ಬೋಧಿಸುವುದರ ಜತೆಗೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಒಳ್ಳೆಯ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು. ಬದುಕಿನಲ್ಲಿ ವಿದ್ಯಾರ್ಥಿ ಜೀವನ ಮಹತ್ವದ್ದಾಗಿದ್ದು, ಶ್ರದ್ಧೆಯಿಂದ ಶ್ರಮ ಪಟ್ಟು ಅಧ್ಯಯನ ಮಾಡಿ ಉಜ್ವಲ ಭವಿಷ್ಯ ಚೆನ್ನಾಗಿರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರು ಕಾಲೇಜಿಗೆ ಸುಸಜ್ಜಿತ ಕಟ್ಟಡ ಸೇರಿದಂತೆ ಇತರೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.ಪ್ರಥಮ ವರ್ಷ ಪ್ರವೇಶ ಪಡೆದ ಬಿಎ ಮತ್ತು ಬಿಕಾಂ 190 ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ವಿತರಿಸಲಾಯಿತು.

ವೇದಿಕೆಯಲ್ಲಿ ಮಾಜಿ ಸಚಿವರಾದ ಪ್ರಮೋದ ಮಧ್ವರಾಜ, ಬಿ.ಬಿ ಚಿಮ್ಮನಕಟ್ಟಿ, ಎಚ್‌.ವೈ. ಮೇಟಿ, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಎಸ್‌. ಆರ್‌. ಜಾಬನ್ನವರ ಉಪಸ್ಥಿತರಿದ್ದರು. ಪ್ರಾಚಾರ್ಯರಾದ ಜಿ.ಜಿ. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಧ್ಯಾಪಕಿ ಕವಿತಾ ಜಂಗವಾಡ ನಿರೂಪಿಸಿದರು. ಎಂ.ಬಿ. ಹಂಗರಗಿ, ಡಾ| ಎಂ.ಎಚ್‌.ಚಲವಾದಿ,

ಮಹೇಶ ಹೊಸಗೌಡ್ರ, ಪಿ.ಆರ್‌. ಗೌಡರ, ಹೊಳಬಸು ಶೆಟ್ಟರ, ಆರ್‌.ಡಿ.ದಳವಾಯಿ, ಶೈಲಾ ಪಾಟೀಲ ಭಾಗವಹಿಸಿದ್ದರು

ಟಾಪ್ ನ್ಯೂಸ್

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

6

Gurupura: 300 ಕೆ.ಜಿ. ಗೋಮಾಂಸ ಸಾಗಾಟ; ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.