ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಅಪಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
Team Udayavani, Dec 18, 2021, 7:00 PM IST
ಬಾಗಲಕೋಟೆ (ಕುಳಗೇರಿ ಕ್ರಾಸ್): ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣ ಅಭಿಮಾನಿಗಳು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು.
ದಿಢೀರ್ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಮೇಲಿಂದ ಮೇಲೆ ಬೆಳಗಾವಿಯಲ್ಲಿ ಪುಂಡಾಟಿಕೆ ಮೆರೆಯುತ್ತಿರುವ ಎಂಇಎಸ್ ಸಂಘಟನೇಯನ್ನ ನಿಷೇಧಿಸಬೇಕು ಎಂದು ಆಗ್ರಹಿಸಿದರು.
ನವಿಲುತಿರ್ಥ ಜಲಾಶಯದ ಕಾಡಾ ನಿರ್ಧೇಶಕ ನಾಗಪ್ಪ ಅಡಪಟ್ಟಿ, ಶಶಿ ಉದಗಟ್ಟಿ, ಹನಮಂತ ನರಗುಂದ ಸೇರಿದಂತೆ ಹಲವು ಮುಖಂಡರು ಮಾತನಾಡಿ ನಮ್ಮ ನೆಲದಲ್ಲಿದ್ದು, ನಮ್ಮ ನೀರನ್ನು ಕುಡಿದು, ನಮ್ಮ ತಾಯಿಗೆ ದ್ರೋಹ ಬಗೆಯುವವರನ್ನು ಏಕೆ ಇಟ್ಟುಕೊಳ್ಳಬೇಕು. ಇದಕ್ಕೆಲ್ಲ ಕಾನೂನು ಕ್ರಮ ಕೈಗೊಳ್ಳಲೇ ಬೇಕು ಎಂದರು
ನಮ್ಮ ತಾಯಿಗೆ ದ್ರೋಹ ಮಾಡಿ, ದೇಶಭಕ್ತ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಅಪಮಾನ ಮಾಡಿದವರನ್ನ ಗಡಿಪಾರು ಮಾಡಬೇಕು ಎಂದು ಮರಾಠಿಗರ ವಿರುದ್ಧ ಘೋಷಣೆ ಕೂಗಿದರು.
ಇನ್ನು ಮುಂದೆ ಇಂಥ ಘಟನೆಗೆ ಅವಕಾಶ ಕೊಡದೆ ಸರಕಾರ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪ್ರತಿ ಗ್ರಾಮದಲ್ಲೂ ಪ್ರತಿಭಟನೆ ನಡೆಸಿ ಆ ಮೂಲಕ ವಿಧಾನಸೌದಕ್ಕೆ ಮುತ್ತಿಗೆ ಹಾಕಿ ಬಿಸಿ ಮುಟ್ಟಿಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.