ರಬಕವಿ ಬನಹಟ್ಟಿ ನಗರಸಭೆ: ಅಧ್ಯಕ್ಷ ಸಂಜಯ ತೆಗ್ಗಿ, ಉಪಾಧ್ಯಕ್ಷೆ ವಿದ್ಯಾ ಧಬಾಡಿ ಆಯ್ಕೆ
Team Udayavani, Mar 5, 2022, 6:02 PM IST
ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ನಗರಸಭೆಯ ಅಧ್ಯಕ್ಷರಾಗಿ ರಬಕವಿಯ ಸಂಜಯ ತೆಗ್ಗಿ ಮತ್ತು ಉಪಾಧ್ಯಕ್ಷೆಯಾಗಿ ಬನಹಟ್ಟಿಯ ವಿದ್ಯಾ ಧಬಾಡಿ ಶನಿವಾರ ರಬಕವಿ-ಬನಹಟ್ಟಿ ನಗರಸಭೆಯ ಸಭಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಗೊಂಡರು.
31ಸದಸ್ಯರನ್ನು ನಗರಸಭೆ ಹೊಂದಿದ್ದು, ನಗರಸಭೆಯ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲವು ಸಾಧಿಸಿದ್ದ ಸಾವಿತ್ರಿ ಹಕ್ಕಲದಡ್ಡಿ ಮತದಾನದಲ್ಲಿ ಭಾಗವಹಿಸಲಿಲ್ಲ. ಶಾಸಕರ ಮತ ಸೇರಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಸಂಜಯ ತೆಗ್ಗಿ ಅವರಿಗೆ 26 ಮತಗಳು ಬಂದವು. ಕಾಂಗ್ರೆಸ್ ಪಕ್ಷದ ಬಸವರಾಜ ಗುಡೋಡಗಿ ೫ ಮತಗಳನ್ನು ಪಡೆದರು. ಅದೇ ರೀತಿಯಾಗಿ ಉಪಾಧ್ಯಕ್ಷ ಸ್ಥಾನದ ಬಿಜೆಪಿಯ ವಿದ್ಯಾ ಧಬಾಡಿ ಅವರಿಗೆ ೨೬ ಮತ್ತು ಕಾಂಗ್ರೆಸ್ ಪಕ್ಷದ ಸುರೇಖಾ ಮನಗೂಳಿಯವರಿಗೆ ೫ ಮತಗಳು ಬಂದವು. ಅಧ್ಯಕ್ಷರಾಗಿ ಸಂಜಯ ತೆಗ್ಗಿ ಮತ್ತು ಉಪಾಧ್ಯಕ್ಷೆಯಾಗಿ ವಿದ್ಯಾ ಧಬಾಡಿ ಆಯ್ಕೆಗೊಂಡರು ಎಂದು ಚುನಾವಣಾಧಿಕಾರಿಯಾಗಿದ್ದ, ಜಮಖಂಡಿ ಉಪವಿಭಾಗಾಧಿಕಾರಿ ಡಾ.ಸಿದ್ದು ಹುಲ್ಲೊಳ್ಳಿ ತಿಳಿಸಿದರು.
ನಗರ ಸೌಂದರ್ಯ. ಅಭಿವೃದ್ಧಿಗೆ; ಮಹತ್ವ ನೀಡಿ: ಈ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿ, ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ನಗರಸಭೆಯ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರ ಸೌಂದರ್ಯ ಮತ್ತು ಅಭಿವೃದ್ಧಿಗೆ ಮಹತ್ವ ನೀಡಬೇಕು. ಈಗಾಗಲೇ ನಗರಸಭೆಗೆ ರೂ. ೩೦ ಕೋಟಿ ಅನುದಾನ ಬಂದಿದೆ. ಈ ಹಣವನ್ನು ಸಮಪರ್ಕವಾಗಿ ಬಳಸಿಕೊಂಡು ನಗರದ ಅಭಿವೃದ್ಧಿಗೆ ಶ್ರಮಿಸಿ ಎಂದರು.
ಮರ್ಯಾದೆ ಕಳೆದುಕೊಂಡ ಕಾಂಗ್ರೆಸ್: ತೇರದಾಳ ಪುರಸಭೆಯಲ್ಲಿ 23 ಸದಸ್ಯರಲ್ಲಿ ಕಾಂಗ್ರೆಸ್ ಪಕ್ಷದ 10 ಸದಸ್ಯರಿದ್ದರೂ ಚುನಾವಣೆಗೆ ಸ್ಪರ್ಧಿಸದೆ ಸಹಕರಿಸಿದರು. ಆದರೆ ರಬಕವಿ ಬನಹಟ್ಟಿ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷದ 5 ಸದಸ್ಯರಿದ್ದರೂ ಚುನಾವಣೆಯಲ್ಲಿ ಪಾಲ್ಗೊಂಡು ಹೀನಾಯವಾಗಿ ಪರಾಭವಗೊಂಡು ತಮ್ಮ ಮರ್ಯಾದೆಯನ್ನು ಕಳೆದುಕೊಂಡರು. ಕ್ಷೇತ್ರದಲ್ಲಿ ಬಿಜೆಪಿಯ ಪ್ರಾಭಲ್ಯ ಕಂಡು ಬರುತ್ತದೆ ಎಂದರು.
ಈ ಸಂದರ್ಭದಲ್ಲಿ ಪೌರಾಯುಕ್ತ ಶ್ರೀನಿವಾಸ ಜಾಧವ, ಸಿಪಿಐ ಜಿ.ಕರುಣೇಶಗೌಡ, ಪಿಎಸ್ಐ ಸುರೇಶ ಮಂಟೂರ, ಮಹಾಲಿಂಗಪುರದ ಪಿಎಸ್ಐ ವಿಜಯ ಕಾಂಬಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.