ರಬಕವಿ-ಬನಹಟ್ಟಿ: ಐದು ಲಕ್ಷ ಭಕ್ತರಿಗೆ ಹಾಲುಗ್ಗಿ-ಕಿಚಡಿ-ಸಾಂಬಾರು ಪ್ರಸಾದ

ವೆಚ್ಚದಲ್ಲಿ ಪ್ರಸಾದ ವ್ಯವಸ್ಥೆ ಕಲ್ಪಿಸುವ ಯೋಜನೆ ರೂಪಿಸಲಾಗಿದೆ

Team Udayavani, Feb 6, 2023, 4:50 PM IST

ರಬಕವಿ-ಬನಹಟ್ಟಿ: ಐದು ಲಕ್ಷ ಭಕ್ತರಿಗೆ ಹಾಲುಗ್ಗಿ-ಕಿಚಡಿ-ಸಾಂಬಾರು ಪ್ರಸಾದ

ರಬಕವಿ-ಬನಹಟ್ಟಿ: ಮಹಾರಾಷ್ಟ್ರ ಕೊಲ್ಹಾಪೂರ ಕನೇರಿಮಠದಲ್ಲಿ ಫೆ.20 ರಿಂದ 26ರವರೆಗೆ ಜರುಗುವ ಪಂಚಮಹಾಭೂತ ಲೋಕೋತ್ಸವ ಕಾರ್ಯಕ್ರಮಕ್ಕೆ 30 ಲಕ್ಷಕ್ಕೂ ಅಧಿಕ ಭಕ್ತರು ಭಾಗಿಯಾಗಲಿದ್ದು, ಒಂದು ದಿನದ ಪ್ರಸಾದ ಸ್ವೀಕರಿಸುವ 5 ಲಕ್ಷ ಜನ ಭಕ್ತರಿಗೆ ಈ ಭಾಗದ ಹಾಲುಗ್ಗಿ, ಕಿಚಡಿ, ಸಾಂಬಾರು ಉಣಬಡಿಸಲು ತೀರ್ಮಾನಿಸಲಾಯಿತು.

ನಗರದ ಭದ್ರನ್ನವರ ಕಲ್ಯಾಣ ಮಂಟಪದಲ್ಲಿ ರವಿವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ರಬಕವಿ-ಬನಹಟ್ಟಿ, ಮಹಾಲಿಂಗಪುರ ಹಾಗೂ ತೇರದಾಳ ಸೇರಿದಂತೆ ಎಲ್ಲ ಗ್ರಾಮಗಳ ಭಕ್ತರಿಂದ ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ಪ್ರಸಾದ ವ್ಯವಸ್ಥೆ ಕಲ್ಪಿಸುವ ಯೋಜನೆ ರೂಪಿಸಲಾಗಿದೆ ಎಂದು ಬಿಡಿಸಿಸಿ ಬ್ಯಾಂಕ್‌ ಮಾಜಿ ನಿರ್ದೇಶಕ ಭೀಮಶಿ ಮಗದುಮ್‌ ತಿಳಿಸಿದರು.

ಹಳೇ ಹುಬ್ಬಳ್ಳಿ ವೀರಭಿಕ್ಷಾವರ್ತಿ ಮಠದ ಶಿವಶಂಕರ ಸ್ವಾಮೀಜಿ ಮಾತನಾಡಿ, ಆಕಾಶ, ವಾಯು, ಅಗ್ನಿ, ಜಲ, ಪೃಥ್ವಿಗಳ ಜಾಗೃತಿ, ಜೀವನಶೈಲಿ ಸರಿಪಡಿಸಿಕೊಳ್ಳುವ ದೃಷ್ಟಿಯಿಂದ ಕನೇರಿಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿಗಳು ಇಂತಹ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಹೇಳಿದರು.

ಹುಲ್ಯಾಳದ ಹರ್ಷಾನಂದ ಶ್ರೀಗಳು ಮಾತನಾಡಿ, ಕನೇರಿಯಲ್ಲಿ ಜರುಗುವ ಲೋಕೋತ್ಸವ ಕಾರ್ಯಕ್ರಮ ಒಂದು ವಾರ ಕಾಲ ನಡೆಯಲಿದ್ದು, 25ಕ್ಕೂ ಅಧಿಕ ರಾಜ್ಯಗಳಿಂದ ಜನ ಸೇರಲಿದ್ದಾರೆ. 50ಕ್ಕೂ ಅಧಿಕ ದೇಶಗಳಿಂದ ಅತಿಥಿಗಳ ಆಗಮನವಾಗಲಿದೆ. 300ಕ್ಕೂ ಅಧಿಕ ಜಿಲ್ಲೆಗಳಿಂದ ಸಂಘಟನೆಗಳ ಪ್ರತಿನಿಧಿ ಗಳು, 500ಕ್ಕೂ ಹೆಚ್ಚು ಉಪ ಕುಲಪತಿಗಳು ಸಾಕ್ಷಿಯಾಗಲಿದ್ದಾರೆ. 650 ಎಕರೆ ಪ್ರದೇಶದಲ್ಲಿ ಈ ಲೋಕೋತ್ಸವ ಕಾರ್ಯಕ್ರಮ ಜರುಗಲಿದೆ ಎಂದರು.

ಸಾವಿರಕ್ಕೂ ಅಧಿಕ ಸಾಧು ಸಂತರು, 1500 ಕೃಷಿ ಉಪಕರಣಗಳು, ಉತ್ಪನ್ನಗಳು, ವಿವಿಧ ಜೀವನೋಪಯೋಗಿ ವಸ್ತುಗಳ ಮಳಿಗೆಗಳು ಬರಲಿವೆ. 3 ಸಾವಿರ ಜನರು 3ಡಿ ಮತ್ತು ಕಲಾವಿದರಿಂದ ಕಲಾಪ್ರದರ್ಶನ ಆಯೋಜಿಸಿದ್ದು, 10 ಸಾವಿರದಷ್ಟು ಉದ್ಯೋಗಿ, ವ್ಯಾಪಾರಿಗಳು ಭಾಗವಹಿಸಲಿದ್ದಾರೆ. ಪ್ರಮುಖವಾಗಿ 1ಲಕ್ಷ ಚ.ಅಡಿಯಲ್ಲಿ ಬೃಹತ್‌ ಸಭಾಮಂಟಪ ತಯಾರಾಗಿದ್ದು, 30ಲಕ್ಷಕ್ಕೂ ಅಧಿಕ ಜನ ಸೇರಲಿದ್ದಾರೆಂದರು.

ಈ ಸಂದರ್ಭದಲ್ಲಿ ಹಳಿಂಗಳಿ ಕಮರಿಮಠದ ಶಿವಾನಂದ ಶ್ರೀಗಳು, ಸಿದ್ಧರಾಜ ಪೂಜಾರಿ, ಅಂಬಾದಾಸ ಕಾಮೂರ್ತಿ, ಬ್ರಿಜ್‌ಮೋಹನ ಡಾಗಾ, ಶಂಕರ ಜಾಲಿಗಿಡದ, ಗಂಗಪ್ಪ ಮುಗತಿ, ಶ್ರೀಶೈಲ ದಭಾಡಿ, ಶ್ರೀಪಾದ ಬಾಣಕಾರ, ಹರ್ಷವರ್ಧನ ಪಟವರ್ಧನ, ಮೋಹನ ಪತ್ತಾರ, ಪ್ರಭಾಕರ ಮೊಳೇದ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

13

Kollywood: ಯೂಟ್ಯೂಬ್‌ ವಿಮರ್ಶೆ ಬ್ಯಾನ್‌ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

15

Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ… ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.