ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ದಿನದಿಂದ ದಿನಕ್ಕೆ ಯುವಕರು ನೇಕಾರಿಕೆಯತ್ತ ಸಾಗುವಲ್ಲಿ ಹಿಂದೇಟು

Team Udayavani, Oct 25, 2024, 6:14 PM IST

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ಉದಯವಾಣಿ ಸಮಾಚಾರ
ರಬಕವಿ-ಬನಹಟ್ಟಿ: ಕಳೆದೆರಡು ಶತಮಾನಗಳ ಇತಿಹಾಸ ಹೊಂದಿರುವ ರಬಕವಿ-ಬನಹಟ್ಟಿ ಪಟ್ಟಣಗಳಲ್ಲಿ ಇದೀಗ ಜವಳಿ ಉದ್ಯಮ ಅಳಿವಿನಂಚಿನಲ್ಲಿದೆ. ಒಂದೆಡೆ ಮಾರುಕಟ್ಟೆ ನೆಲೆ ಸಿಗದೆ ವ್ಯಾಪಾರ ಹೀನಾಯ ಸ್ಥಿತಿಯಲ್ಲಿದ್ದರೆ, ಮತ್ತೂಂದೆಡೆ ನವೀಕರಣಗೊಳ್ಳದ ಕಾರಣ ಅದೇ ಹಳೆ ಕಾಲದ ಮಗ್ಗಗಳಿಂದಲೇ ಸೀರೆ ಉತ್ಪಾದನೆ ದೊಡ್ಡ ಸವಾಲಾಗಿದೆ.

ಕೈಮಗ್ಗ ನಂತರ ಅಟೋಮೆಟಿಕ್‌ ನಂತರ ಪಾವರ್‌ಲೂಮ್‌ಗೆ ಪರಿವರ್ತನೆ ಹೊಂದಿದ್ದ ನೇಕಾರರು ಕಳೆದ 50 ವರ್ಷಗಳಿಂದ ಕಿಂಚಿತ್‌ ಬದಲಾವಣೆಯಾಗದೆ ಅದೇ ಹಳೆಯ ಮಗ್ಗಗಳನ್ನೇ ಅವಲಂಬಿಸಿದ್ದರಿಂದ ಹೊಸ ನೈಪುಣ್ಯತೆ, ವಿನ್ಯಾಸದೊಂದಿಗೆ ಬದಲಾವಣೆ ಆಗದಿರುವುದೇ ಜವಳಿ ಹಿನ್ನೆ‌ಡೆಗೆ ಪ್ರಮುಖ ಕಾರಣ.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರಬಕವಿ-ಬನಹಟ್ಟಿ ತಾಲೂಕಿಗೆ ಪೂರಕ ಮೂಲಸೌಕರ್ಯ ಒದಗಿಸುವಲ್ಲಿ
ವಿಫಲಗೊಂಡಿವೆ. ಪ್ರಮುಖವಾಗಿ ಸೈಜಿಂಗ್‌, ವಾರ್ಪಿಂಗ್‌, ಕೋನ್‌ ಡೈಯಿಂಗ್‌, ನೂಲು ಅದಷ್ಟೇ ಅಲ್ಲದೆ ಜವಳಿ ಪಾರ್ಕ್‌ ಕೂಡ
ಸ್ಥಾಪನೆಗೊಂಡಿಲ್ಲ. ಈಗಾಗಲೇ ಅನುಭವ ಹೊಂದಿರುವ ನೇಕಾರ ಮಾಲಿಕರು ಅನ್ಯ ಉದ್ಯೋಗಗಳತ್ತ ವಾಲಿದ್ದಾರೆ. ಜವಳಿ ಕ್ಷೇತ್ರದಿಂದ ದೂರವಾಗುವಲ್ಲಿ ಕಾರಣವಾಗಿದ್ದರೆ, ಮತ್ತೂಂದೆಡೆ ದಿನದಿಂದ ದಿನಕ್ಕೆ ಯುವಕರು ನೇಕಾರಿಕೆಯತ್ತ ಸಾಗುವಲ್ಲಿ ಹಿಂದೇಟು ಹಾಕುತ್ತಿದ್ದಾರೆ.

ಹೈಟೆಕ್‌ ಮಗ್ಗಗಳು ಮೂಲೆಗುಂಪು: ಹೊಸ ವಿನ್ಯಾಸ, ತಾಂತ್ರಿಕತೆಯೊಂದಿಗೆ ರ್ಯಾಪಿಯರ್‌, ಕಂಪ್ಯೂಟರ್‌ ಜಕಾರ್ಡ್‌ ಸೇರಿದಂತೆ ಅನೇಕ ಮಗ್ಗಗಳು ಈಗಷ್ಟೇ ಅವಳಿ ನಗರದತ್ತ ದಾಪುಗಾಲು ಹಾಕಿವೆ. ಇವುಗಳ ನಿರ್ವಹಣೆ ದೊಡ್ಡ ಸವಾಲಾಗಿದ್ದು, ನೇಯ್ಗೆಯ ನೈಪುಣ್ಯತೆ ಹೊಂದಿರದ ಕಾರಣ ಮಾಲಿಕರು ಆರ್ಥಿಕ ಸಂಕಷ್ಟ ಎದುರಿಸುವುದರ ಜತೆಗೆ ಮಗ್ಗಗಳು ಧೂಳು ತಿನ್ನುತ್ತಿವೆ.

ಬೆರಳಣಿಕೆಯಷ್ಟು ಮಾಲಿಕರು ಮಾತ್ರ ಮಗ್ಗಗಳನ್ನು ಖರೀದಿಸಿದ್ದರಿಂದ ಇವರ ಹಾನಿ ಅನುಭವಿಸಿದ್ದರಿಂದ ಇತರೆ ಮಾಲಿಕರು
ಮಗ್ಗಗಳ ಖರೀದಿಗೆ ಹಿಂದೇಟು ಹಾಕುವಂತಾಗಿದೆ. ಸೀರೆ ಉತ್ಪಾದನೆಯಾಗಬೇಕಾದರೆ ಸುಮಾರು ಐದಾರು ವಿಭಾಗಗಳ ಘಟಕಗಳು ಅವಶ್ಯವಿದ್ದವು. ಪ್ರಮುಖವಾಗಿ ವಾರ್ಪಿಂಗ್‌, ಸೈಜಿಂಗ್‌, ನೂಲು ಸುತ್ತುವಿಕೆ ಸೇರಿದಂತೆ ಅನೇಕವಿದ್ದವು. ಇದೀಗ ಸೀರೆ ನೇಯ್ಗೆಗೆ ಮಾರುಕಟ್ಟೆಯಲ್ಲಿ ತಯಾರಿ ನೂಲು ದೊರಕುತ್ತಿರುವುದರಿಂದ ಕಚ್ಚಾ ಸಾಮಗ್ರಿಗಳ ಘಟಕಗಳು ನೇಪಥ್ಯಕ್ಕೆ ಸರಿಯುವುದಕ್ಕೆ ಕಾರಣವಾಗಿದೆ.

ಹಲವಾರು ಸಮಸ್ಯೆಗಳನ್ನು ಹೊತ್ತು ನಿಂತಿರುವ ಜವಳಿ ಕ್ಷೇತ್ರಕ್ಕೆ ಅಸಂಘಟನೆಯಿಂದ ಹೋರಾಟ ಅಥವಾ ಬೇಡಿಕೆಗಳಿಗೆ ಸ್ಪಂದನೆಗೆ ಸಮಸ್ಯೆ ಎದುರಾಗಿದೆ. ಪ್ರತಿ ಬಾರಿ ಸರ್ಕಾರದ ವಿರುದ್ಧ ಸಿಡಿದೇಳುತ್ತಿದ್ದ ನೇಕಾರರು ಕಳೆದೊಂದು ದಶಕದಿಂದ ಪ್ರಮುಖ ಹೋರಾಟಗಳಿಂದ ದೂರ ಉಳಿದಿದ್ದಾರೆ.

ಯೋಜನೆಗಳಿಗೆ ಸೀಮಿತ: ಸರ್ಕಾರದ ಯೋಜನೆಗಳಿಗೆ ಸೀಮಿತಗೊಂಡಿರುವ ನೇಕಾರರು ತಮ್ಮ ಕಾಯಕದ ನಿಷ್ಠೆ ಹಾಗೂ
ಪ್ರಯತ್ನ ತೋರುವಲ್ಲಿ ವಿಫಲಗೊಂಡಿದ್ದಾರೆ. ನೆರೆಯ ರಾಜ್ಯಗಳಲ್ಲಿನ ಅತಿ ವೇಗದ ಉದ್ಯೋಗ ಕ್ರಾಂತಿಗೆ ಕಿಂಚಿತ್‌ ಪೈಪೋಟಿ ಒಡ್ಡುವಲ್ಲಿ ಇಚ್ಛಾಶಕ್ತಿ ತೋರದಿರುವುದು ವಿಪರ್ಯಾಸ. 2005ಕ್ಕಿಂತಲೂ ಮೊದಲು ಸುಮಾರು 20 ಸಾವಿರಗಳಷ್ಟು ಮಗ್ಗಗಳು ಇದ್ದವು. ರಬಕವಿ-ಬನಹಟ್ಟಿ ಪಟ್ಟಣಕ್ಕೆ ಕಾಲಿಟ್ಟರೆ ಸಾಕು ಮಗ್ಗಗಳ ಶಬ್ದವೇ ಕೇಳುತ್ತಿತ್ತು. ಇದೀಗ ಕೇವಲ 6 ಸಾವಿರಕ್ಕೆ ಇಳಿಕೆ ಕಂಡು ಪಟ್ಟಣದ ಮಧ್ಯಭಾಗದಲ್ಲಿ ಮಗ್ಗಗಳಿಗೆ ಹುಡುಕಾಟ ನಡೆಸಬೇಕಾದ ಸ್ಥಿತಿ ಇದೆ.

ಜವಳಿ ಕ್ಷೇತ್ರದಲ್ಲಿ ಇದೀಗ ಸಾಕಷ್ಟು ಪೈಪೋಟಿ ನಡೆಯುತ್ತಿದ್ದು, ಇಂದಿನ ಯುವ ಜನಾಂಗ ಬೇರೆ ಬೇರೆ ಬಟ್ಟೆಗಳತ್ತ ಆಕರ್ಷಿತರಾಗುತ್ತಿದ್ದಾರೆ. ಜನರ ಅಭಿರುಚಿಗೆ ತಕ್ಕಂತೆ ಹೊಸ ಹೊಸ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ಸೀರೆಗಳನ್ನು ತರಲು ಪ್ರಯತ್ನಿಸಬೇಕಿದೆ. ಸರಕಾರ ಕೂಡಾ ಜವಳಿ ಪಾರ್ಕ್‌ ನಿರ್ಮಿಸಿ ಸೀರೆಗಳ ಮಾರಾಟಕ್ಕೆ ಅವಶ್ಯಕ ವಾತಾವರಣ ನಿರ್ಮಿಸಬೇಕಿದೆ.
*ಶಂಕರ ಜಾಲಿಗಿಡದ, ಅಧ್ಯಕ್ಷರು, ಪಾವರ್‌ಲೂಮ್‌ ಅಸೋಶಿಯೇಷನ್‌, ಬನಹಟ್ಟಿ.

■ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.