Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

ಕುಸ್ತಿಗೆ ಹೆಚ್ಚಿನ ಪ್ರೋತ್ಸಾಹ

Team Udayavani, May 17, 2024, 4:17 PM IST

6-rabakavi

ರಬಕವಿ-ಬನಹಟ್ಟಿ: ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ. ಗ್ರಾಮೀಣ ಭಾಗದ ಜನರು ಕುಸ್ತಿಗೆ ಬಹಳಷ್ಟು ಮಹತ್ವ ನೀಡುತ್ತಾ ಬಂದಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಯಾವುದದೇ ಜಾತ್ರೆ, ಉತ್ಸವ, ಹಬ್ಬ, ಹರಿದಿನಗಳಿರಲಿ ಅಲ್ಲಿ ಕಡ್ಡಾಯವಾಗಿ ಕುಸ್ತಿ ಇರಲೇಬೇಕು.

ಕುಸ್ತಿ ಇಲ್ಲಿಯ ಜನರಿಗೆ ಒಂದು ಮನರಂಜನೆಯಾದರೆ ಪೈಲ್ವಾನರಿಗೆ ತಮ್ಮ ಕಲೆ ಪ್ರದರ್ಶನ ಮಾಡಲು ಒಂದು ವೇದಿಕೆ ದೊರೆತಂತಾಗುತ್ತದೆ. ಗ್ರಾಮೀಣರಲ್ಲಿ ನಮ್ಮ ಮನೆಯಲ್ಲಿ ಒಬ್ಬ ಕುಸ್ತಿಪಟು ಇದ್ದಾನೆ ಎಂಬುದನ್ನು ಹೇಳಿಕೊಳ್ಳುವುದೇ ಒಂದು ಹೆಮ್ಮೆಯ ಸಂಗತಿ.

ರಬಕವಿ ಬನಹಟ್ಟಿ ಹಾಗೂ ಸುತ್ತಮುತ್ತಲಿನ ಎಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಈಗಲೂ ನಾವು ಗರಡಿ ಮನೆಗಳನ್ನು ಕಾಣಬಹುದಾಗಿದೆ.

ಅಲ್ಲಿ ಬೆಳಗ್ಗೆ ಮತ್ತು ಸಂಜೆ ಹಿರಿಯ ಪೈಲ್ವಾನರ ಮಾರ್ಗದರ್ಶನದಲ್ಲಿ ಕಿರಿಯರು ತಾಲೀಮು ನಡೆಸುತ್ತಾರೆ. ಅಂತಹದ್ದೇ ಒಂದು ತಾಲಿಮನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ ಸೋಮವಾರಪೇಟೆ ಎಂಬಲ್ಲಿ ಸಮಸ್ತ ದೈವ ಮಂಡಳಿಯ ಶತಮಾನ ಕಂಡಿರುವ ಗರಡಿ ಮನೆ ನಿತ್ಯ ಕಿರಿಯರಿಗೆ ಮಾರ್ಗದರ್ಶನ ನೀಡುತ್ತಾ ಹೊಸ ಪ್ರತಿಭೆಗಳನ್ನು ಬೆಳೆಸುತ್ತಾ ನಡೆದಿದೆ.

ಅದಕ್ಕೆ ಬೆಂಗಾವಲಾಗಿ ನಿಂತವರು ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಹಿರಿಯರು ಹಾಗೂ ಹಿರಿಯ ತರಬೇತಿದಾರ ಕಾಡಪ್ಪ ಜಿಡ್ಡಿಮನಿ ಮತ್ತು ಅವರ ತಂಡ. ಸದ್ಯ ಗರಡಿ ಮನೆಯಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿನಿತ್ಯ ಕುಸ್ತಿ ತರಬೇತಿ ಪಡೆದುಕೊಳ್ಳುತ್ತಿದ್ದಾರೆ.

ಇಲ್ಲಿ ತರಬೇತಿ ಪಡೆದುಕೊಂಡ ಯಲ್ಲಟ್ಟಿ ಗ್ರಾಮದ ಪೈಲ್ವಾನರು ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ.

ರಾಘವೇಂದ್ರ ನಾಯಕ, ಬಾಲಾಜಿ ಭಜಂತ್ರಿ, ಯಶ್ವಂತ ಸಣ್ಣಕ್ಕಿ, ಆದಿತ್ಯ ತಳವಾರ, ತನ್ವೀರ ಫಣಿಬಂದ, ಆದಿತ್ಯ ಹಟ್ಟಿಪಾಟೀಲ, ಕಲ್ಮೇಶ ಹನಗಂಡಿ, ಅನಸ ಅಪರಾಧ, ಕಾರ್ತಿಕ ಮಡ್ಡಿ, ದಾಮೋದರ ಕಾಜುವೆ, ಪ್ರಶಾಂತ ಧೋತರೆ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿ ಗರಡಿ ಮನೆ ಕೀರ್ತಿ ಹೆಚ್ಚಿಸಿದ್ದಾರೆ.

ಶತಮಾನದ ಇತಿಹಾಸ ಹೊಂದಿರುವ ಸೋಮವಾರಪೇಟೆ ದೈವ ಮಂಡಳಿಯ ಗರಡಿ ಮನೆಯಲ್ಲಿ ತರಬೇತಿ ಹೊಂದಿ ರಾಜ್ಯ ಹಾಗೂ ಕೇಂದ್ರ ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ನೂರಾರು ಜನ ಕೆಲಸ ಮಾಡುತ್ತಿರುವುದು ಈ ಗರಡಿ ಮನೆಯ ಹೆಮ್ಮೆ.

ಇಂತಹ ಗರಡಿ ಮನೆಯನ್ನು ಸದ್ಯ ಹಿರಿಯ ಕುಸ್ತಿ ಪಟು, ತರಬೇತುದಾರ ಕಾಡಪ್ಪ ಜಿಡ್ಡಿಮನಿ ಮಾರ್ಗದರ್ಶನದಲ್ಲಿ ತರಬೇತುದಾರ ರಮೇಶ ಜಿಡ್ಡಿಮನಿ, ಕಾಡಪ್ಪ ಮಹಿಷವಾಡಗಿ ನಡೆಸಿಕೊಂಡು ಹೋಗುತ್ತಿದ್ದು, ಗ್ರಾಮೀಣ ಕುಸ್ತಿ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ.

ಎಲ್ಲ ಕುಸ್ತಿ ಪಟುಗಳು ಕೇವಲ ಶಾಲಾ-ಕಾಲೇಜು ಮಟ್ಟದ ಕುಸ್ತಿ ಪಂದ್ಯದಲ್ಲಿ ಭಾಗವಹಿಸದೆ, ಈ ಭಾಗದಲ್ಲಿ ನಡೆಯುವ ಇತರೆ ಕುಸ್ತಿ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಗೆದ್ದು ಗಮನ ಸೆಳೆದಿದ್ದಾರೆ.

ಬನಹಟ್ಟಿ, ಜಗದಾಳ, ಹೊಸೂರ, ಆಸಂಗಿ ಮತ್ತು ಅಸ್ಕಿ ಗ್ರಾಮದ ಬಾಲಕರು ತರಬೇತಿಗಾಗಿ ಇಲ್ಲಿಗೆ ಬರುತ್ತಾರೆ. ಇವರೆಲ್ಲರಿಗೂ ಇಲ್ಲಿ ಉಚಿತ ತರಬೇತಿ ನೀಡಲಾಗುತ್ತಿದೆ. ಇವರೆಲ್ಲರಿಗೂ ಸದ್ಯ ಮಣ್ಣಿನ ಮೇಲೆಯೇ ತರಬೇತಿ ನೀಡಲಾಗುತ್ತದೆ.

ಇಲ್ಲಿಯ ಹಿರಿಯ ತರಬೇತುದಾರ ಕಾಡಪ್ಪ ಜಿಡ್ಡಿಮನಿ ಕುಸ್ತಿಗಾಗಿ ತಮ್ಮನ್ನೇ ತಾವು ಅರ್ಪಿಸಿಕೊಂಡಿದ್ದು, ಈ ಭಾಗದಲ್ಲಿ ಎಲ್ಲೇ ಕುಸ್ತಿ ಪಂದ್ಯಾವಳಿ ನಡೆದರೂ ಅಲ್ಲಿ ನಿರ್ಣಾಯಕರಾಗಿ ಭಾಗವಹಿಸುತ್ತಾರೆ. ಅಲ್ಲದೇ ಅವರ ಗರಡಿಯಲ್ಲಿ ಸಾವಿರಾರು ಪೈಲ್ವಾನರು ತರಬೇತಿ ಹೊಂದಿ ಉತ್ತಮ ಪೈಲ್ವಾನರಾಗಿ ಹೊರಹೊಮ್ಮಿದ್ದಾರೆ. ಕುಸ್ತಿ ವಿಷಯವಾಗಿ ಝೀ ಟೀವಿ ವಾಹಿನಿಯ ಲೈಫ್ ಸುಪರ್ ಗುರು ಎಂಬ ರಿಯಾಲಿಟಿ ಷೋದಲ್ಲಿ ಭಾಗವಹಿಸಿದ್ದರು.

ಇಲ್ಲಿನ ಗರಡಿ ಮನೆಯನ್ನು 2001 ರಲ್ಲಿ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ತಮ್ಮ ತಂದೆ ದಿ. ಮಹಾದೇವಪ್ಪ ಬಿದರಿ ಅವರ ಸ್ಮರಣಾರ್ಥ ನಿರ್ಮಿಸಿ ಕೊಟ್ಟಿದ್ದಾರೆ. ಇಂತಹ ಅಪರೂಪದ ಗರಡಿ ಮನೆಗೆ ಇನ್ನಷ್ಟು ಸೌಕರ್ಯಗಳು ಬೇಕಾಗಿದ್ದು, ರಾಜ್ಯ ಸರಕಾರ ಹಾಗೂ ಸ್ಥಳೀಯ ಶಾಸಕರು ಇತ್ತ ಗಮನ ಹರಿಸಿ ಗರಡಿ ಮನೆಗೆ ಹಾಗೂ ಮ್ಯಾಟ್ ಕುಸ್ತಿಗೆ ಬೇಕಾಗುವ ಆಧುನಿಕ ಸಲಕರಣೆಗಳನ್ನು ಒದಗಿಸಿದ್ದಲ್ಲಿ ಇಲ್ಲಿನ ಪ್ರತಿಭೆಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ.

ಇಂದಿನ ಆಧುನಿಕ ಮ್ಯಾಟ್ ಕುಸ್ತಿಗೆ ಬೇಕಾಗುವ ಮ್ಯಾಟ್‌ಗಳನ್ನು ಒದಗಿಸಿದ್ದಲ್ಲಿ ಯುವ ಪೀಳಿಗೆಗೆ ಇದರಿಂದ ಅನುಕೂಲವಾಗಲಿದೆ. ಆದಷ್ಟು ಬೇಗ ಸರಕಾರ ಹಾಗೂ ಸಚಿವರು ಇತ್ತ ಗಮನ ಹರಿಸಬೇಕಿದೆ. – ಕಾಡಪ್ಪ ಜಿಡ್ಡಿಮನಿ, ಹಿರಿಯ ತರಬೇತುದಾರರು

ಸೋಮವಾರಪೇಟೆ ಸಮಸ್ತ ದೈವ ಮಂಡಳಿ ಗರಡಿ ಮನೆ ಶತಮಾನದ ಇತಿಹಾಸ ಹೊಂದಿದ್ದು ಇಲ್ಲಿ ತರಬೇತಿ ಹೊಂದಿದ್ದ ಹಲವಾರು ಜನ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಮಿಂಚಿದ್ದಾರೆ. ಇಂದಿನ ಆಧುನಿಕ ಕುಸ್ತಿಗೆ ತಕ್ಕಂತೆ ಬದಲಾಗಬೇಕಾದ ಅನಿವಾರ್ಯತೆ ಇದ್ದು ಸರಕಾರ ಇಂತಹ ಗರಡಿಮನೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅಗತ್ಯ ಪ್ರೋತ್ಸಾಹ ನೀಡಬೇಕು. –ಪ್ರಶಾಂತ ಕೊಳಕಿ, ಸದಸ್ಯರು, ಸೋಮವಾರ ಪೇಟೆ ಸಮಸ್ತ ದೈವ ಮಂಡಳಿ, ಬನಹಟ್ಟಿ

  • ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.