Rabkavi Banhatti; ಲೇಔಟ್ ಗಳಲ್ಲಿ ಮೂಲ ಸೌಕರ್ಯಗಳ ಕೊರತೆ: ಸೂಕ್ತ ಕ್ರಮಕ್ಕೆ ಆಗ್ರಹ

ಸಾಮಾನ್ಯ ಸಭೆಯಲ್ಲಿ ಲೇಔಟ್‌ಗಳದ್ದೇ ಸದ್ದು; ಅಭಿವೃದ್ಧಿಯಾಗದ ಉದ್ಯಾನವನಗಳು

Team Udayavani, Sep 3, 2024, 6:23 PM IST

Rabkavi Banhatti; ಲೇಔಟ್ ಗಳಲ್ಲಿ ಮೂಲ ಸೌಕರ್ಯಗಳ ಕೊರತೆ : ಸೂಕ್ತ ಕ್ರಮಕ್ಕೆ ಆಗ್ರಹ

ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಲೇಔಟ್ ಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದ್ದು ಲೇಔಟ್ ಗಳ ಮಾಲೀಕರು ನಗರಸಭೆಯ ಯಾವುದೇ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಮತ್ತು ಲೇಔಟ್ ಗಳಲ್ಲಿ ಕಳಪೆ ಕಾಮಗಾರಿ ಮತ್ತು ಸುಳ್ಳು ಮಾಹಿತಿಯನ್ನು ನಗರಸಭೆಗೆ ನೀಡುತ್ತಿದ್ದಾರೆ. ಅಂಥವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸದಸ್ಯರು ನಗರಸಭೆಯ ಅಧಿಕಾರಿಗಳನ್ನು ಆಗ್ರಹಿಸಿದರು.

ಮುಂದಿನ ದಿನಗಳಲ್ಲಿ ಇಂಥ ಲೇಔಟ್ ಗಳನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ನಗರಸಭೆಯ ಸಾಮಾನ್ಯ ಸಭೆಯ ಅನುಮತಿಯನ್ನು ಪಡೆದುಕೊಳ್ಳಬೇಕು. ಅಧ್ಯಕ್ಷರನ್ನು ಒಳಗೊಂಡಂತೆ ಒಂದು ಸಮಿತಿಯನ್ನು ನಿರ್ಮಿಸಬೇಕು ಎಂದು ನಗರಸಭೆಯ ಸದಸ್ಯರ ಸಂಜಯ ತೆಗ್ಗಿ ಸಭೆಗೆ ತಿಳಿಸಿದರು.

ಮತ್ತೊರ್ವ ಸದಸ್ಯ ಶ್ರೀಶೈಲ ಬೀಳಗಿ ಮಾತನಾಡಿ, ಲೇಔಟ್ ಗಳನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ನಗರಸಭೆಯ ರಸ್ತೆ, ಚರಂಡಿ ಸೇರಿದಂತೆ ಆಸ್ತಿಗಳನ್ನು ಹಾಳು ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಎಫ್ ಐ ಆರ್ ಮಾಡುವಂತೆ ಆಗ್ರಹಿಸಿದರು.

ಇ-ಆಸ್ತಿಗಳ ಗೊಂದಲದಿಂದಾಗಿ ಅವಳಿ ನಗರಗಳ ಸಾರ್ವಜನಿಕರಿಗೆ ಆಸ್ತಿಗಳ ನೊಂದಣಿ, ಮಾರಾಟ ಮತ್ತು ಖರೀದಿ ಮಾಡಲು ತೊಂದರೆಯಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಇದನ್ನು ಸರಳೀಕರಣಗೊಳಿಸಲು ತಿಳಿಸಿದರು.

ನಗರಸಭೆಯ ವ್ಯಾಪ್ತಿಯಲ್ಲಿ ಇಪ್ಪತ್ತು ಸಾವಿರ ಆಸ್ತಿಗಳಿವೆ. ಆದ್ದರಿಂದ ಆಸ್ತಿಗಳ ಮಾಲೀಕರು ತಮ್ಮ ಸೂಕ್ತ ದಾಖಲೆಗಳನ್ನು ನೀಡಿ ಆಸ್ತಿಗಳನ್ನು ಇ-ಆಸ್ತಿಕರಣಗೊಳಿಸಿಕೊಳ್ಳಬೇಕು ಎಂದು ಪೌರಾಯುಕ್ತ ಜಗದೀಶ ಈಟಿ ತಿಳಿಸಿದರು.

ನಗರಸಭೆಯ ಅಧಿಕಾರಿಗಳು ರಬಕವಿ ನಗರದಲ್ಲಿರುವ ಉದ್ಯಾನವನಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಂಜಯ ತೆಗ್ಗಿ ಆಗ್ರಹಿಸಿದರು.

ಲೆಕ್ಕಪತ್ರಗಳ ಮಾಹಿತಿಯನ್ನು ಸದಸ್ಯರಿಗೆ ನೀಡಿ: ಸಾಮಾನ್ಯ ಸಭೆಗಿಂತ ಮುಂಚಿತವಾಗಿ ನಗರಸಭೆಯ ಸದಸ್ಯರಿಗೆ ಲೆಕ್ಕ ಪತ್ರಗಳ ಮಾಹಿತಿಯನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ನಗರಸಭೆಯ ಲೆಕ್ಕಪತ್ರಗಳು ಪಾರದರ್ಶಕವಾಗಿರುವಂತೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಸರ್ವರ್ ಸಮಸ್ಯೆಯಿಂದಾಗಿ ಹಣಕಾಸು ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ನಗರಸಭೆಯ ಸದಸ್ಯೆ ದುರ್ಗವ್ವ ಹರಿಜನ ಮಾತನಾಡಿ, ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಣೆ ಮಾಡದೇ ಇರುವುದರಿಂದ ವಾರ್ಡ್ ನಲ್ಲಿ ಯಾವುದೇ ದುರಸ್ತಿ ಮತ್ತು ಕಾರ್ಯಗಳು ನಡೆಯುತ್ತಿಲ್ಲ. ಇದರಿಂದಾಗಿ ವಾರ್ಡ್ ಜನರಿಗೆ ಉತ್ತರ ನೀಡುವುದು ಕಷ್ಟವಾಗಿದೆ. ಆದ್ದರಿಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಆಗ್ರಹಿಸಿದರು.

ವೃತ್ತ ನಾಮಕರಣ: ಬನಹಟ್ಟಿಯ ಸೋಮವಾರ ಪೇಟೆಯಲ್ಲಿನ ರಸ್ತೆಗೆ ಸಂಗೋಳ್ಳಿ ರಾಯಣ್ಣ ವೃತ್ತ ನಾಮಕರಣಕ್ಕೆ ಸಭೆ ಅಂಗೀಕರಿಸಿತು.

ಪ್ರಸಕ್ತ ವರ್ಷ ವಿವಿಧ ಘಟಕಗಳಲ್ಲಿನ ಕಾರ್ಯನಿರ್ವಹಣೆಯ ಕಾರ್ಮಿಕರ ವೇತನ ಸುಮಾರು1 ಕೋಟಿ ರೂ.ಗಳಷ್ಟು ಟೆಂಡರ್ ಕರೆಯಲು ಸಭೆ ತೀರ್ಮಾನಿಸಿತು.

ಅವಳಿ ನಗರಾದ್ಯಂತವಿರುವ ಶೌಚಾಲಯ ನಿರ್ವಹಣೆದಾರರಿಗೆ ಉಚಿತವಾಗಿತ್ತು. ಇದೀಗ ಟೆಂಡರ್ ಕರೆಯುವ ಮೂಲಕ ಹೊಸ ನಿರ್ವಹಣೆದಾರರಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಸದಸ್ಯರು ಸಹಮತ ತೋರಿಸಿದರು.

ವಿವಿಧ ಟೆಂಡರ್ ಗಳಿಗೆ ಸಭೆಯಲ್ಲಿ ಅನುಮೋದನೆಯನ್ನು ನೀಡಲಾಯಿತು.ಯಲ್ಲಪ್ಪ ಕಟಗಿ, ಗೌರಿ ಮಿಳ್ಳಿ, ಬಸವರಾಜ ಗುಡೋಡಗಿ, ಚಿದಾನಂದ ಹೊರಟ್ಟಿ, ಶಶಿಕಲಾ ಸಾರವಾಡ ಸೇರಿದಂತೆ ಅನೇಕರು ವಾರ್ಡ್ ಗಳ ಸಮಸ್ಯೆಗಳನ್ನು ಸಭೆಗೆ ತಿಳಿಸಿದರು.

ನಗರಸಭೆಯ ಅಧ್ಯಕ್ಷೆ ವಿದ್ಯಾ ಧಬಾಡಿ, ಉಪಾಧ್ಯಕ್ಷೆ ದೀಪಾ ಗಾಡಿವಡ್ಡರ ಇದ್ದರು.ನಗರಸಭೆಯ ಮ್ಯಾನೇಜರ್ ಮುಖೇಶ ಬನಹಟ್ಟಿ, ವೈಶಾಲಿ ಹಿಪ್ಪರಗಿ, ಶೋಭಾ ಹೊಸಮನಿ, ಸಂಗೀತಾ ಕೋಳಿ, ಮುತ್ತಪ್ಪ ಚೌಡಕಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.