Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

ಕೃಷ್ಣೆ, ಘಟಪ್ರಭಾ ರಬಕವಿ-ಬನಹಟ್ಟಿ ತಾಲೂಕಿನ ಜಲ ಮೂಲ: ಸಾರ್ವಜನಿಕರಲ್ಲಿ ಆತಂಕ

Team Udayavani, Mar 17, 2024, 6:54 PM IST

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

ರಬಕವಿ-ಬನಹಟ್ಟಿ : ಈ ವರ್ಷ ಬಿಸಿಲಿನ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಪರದಾಡುವಂತಾಗಿದ್ದಾರೆ. ರಬಕವಿ-ಬನಹಟ್ಟಿ ತಾಲೂಕಿಗೆ ಕೃಷಾ ನದಿ ಹಾಗೂ ಘಟಪ್ರಭಾ ನದಿ ಪ್ರಮುಖ ನೀರಿನ ಜಲ ಮೂಲಗಳಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಇನ್ನೂ ಮಾರ್ಚ್ ವೇಳೆಗೆ ಬಹಳಷ್ಟು ಇಳಿಮುಖವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಠಿ ಮಾಡಿದೆ.

ಈ ಭಾಗದ ಜಮಖಂಡಿ ರಬಕವಿ, ಬನಹಟ್ಟಿ, ತೇರದಾಳ, ಹಾರುಗೇರಿ ಅಥಣಿ ಹಾಗೂ ಬೆಳಗಾವಿ ಬಾಗಲಕೋಟ ಜಿಲ್ಲೆಯ ಪ್ರಮುಖ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಹಾಹಾಕಾರ ಪ್ರಾರಂಭವಾಗುವ ಸಂಭವ ಜಾಸ್ತಿಯಾಗಿದೆ. ಏಪ್ರಿಲ್ ಎರಡನೆ ವಾರದವರೆಗೆ ನೀರು ಸಾಕಾಗಬಹುದು ಎಂಬುದು ಅಧಿಕಾರಿಗಳ ಅಂಬೋಣ. ಅಲ್ಲದೇ ಬಿಸಿಲಿನ ತಾಪಮಾನ, ನೀರಿನ ಮಟ್ಟದಲ್ಲಿ ಕುಸಿತ, ಸರಿಯಾದ ಮಳೆಯಾಗದಿರುವ ಹಿನ್ನಲೆಯಲ್ಲಿ ಮುಂದಿನ ಎರಡುವರೆ ತಿಂಗಳುಗಳ ಕಾಲ ನೀರಿನ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿದೆ.

ಮುಂದಿನ ಜೂನ್ ನಲ್ಲಿ ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಮಳೆ ಆಗಿ ಅಲ್ಲಿಂದ ನೀರು ಹರಿದು ಬಂದಾಗ ಮಾತ್ರ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೂಗಳತೆಯಲ್ಲಿರುವ ಕೃಷ್ಣಾನದಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ನಡೆದಿದ್ದು, ಇದರಿಂದ ಜಲಮೂಲಗಳಾದ ಕೆರೆ, ಕೊಳವೆಬಾವಿ, ಬೋರವೆಲ್‌ಗಳು ಬತ್ತುವ ಆತಂಕ ಎದುರಾಗಿದೆ.

ತಾಲೂಕಿನ ಹಿಪ್ಪರಗಿ ಜಲಾಶಯ ಒಟ್ಟು 6 ಟಿಎಂಸಿ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 2.03 ಟಿಎಂಸಿ ನೀರು ಮಾತ್ರ ಸಂಗ್ರಹವಿದ್ದು, ಅಧಿಕಾರಿಗಳ ಪ್ರಕಾರ ಪ್ರತಿ ತಿಂಗಳಿಗೆ 1 ಟಿಎಂಸಿಯಷ್ಟು ನೀರು ಹಿಪ್ಪರಗಿ ಜಲಾಶಯದಿಂದ ಬಳಕೆಯಾಗುತ್ತಿದೆ. ಆದರೆ ಇತ್ತೀಚಿನ ಬಿಸಿಲಿನ ತಾಪಮಾನ ಹಾಗೂ ಜಲಾಶಯದ ಮುಂದಿನ ಭಾಗಕ್ಕೆ ಕುಡಿಯುವ ನೀರು ಹಾಗೂ ಜನ ಜಾನುವಾರುಗಳಿಗೆ ನೀರು ಒದಗಿಸ ಬೇಕಾಗುವ ಕಾರಣ 2 ಟಿಎಂಸಿ ಒಂದು ತಿಂಗಳಿಗೂ ಸಾಲುವುದಿಲ್ಲ. ಹಿಪ್ಪರಗಿ ಜಲಾಶಯದ ಮುಂಭಾಗ ಸಂಪೂರ್ಣವಾಗಿ ಖಾಲಿಯಾಗಿರುವುದರಿಂದ ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಆದಷ್ಟು ಬೇಗನೆ ನೀರು ಬೀಡಿಸದಿದ್ದಲ್ಲಿ ಭೀಕರ ಜಲಕ್ಷಾಮ ಉಂಟಾಗುವುದರಲ್ಲಿ ಎರಡು ಮಾತಿಲ್ಲ.

ರಬಕವಿ ಬನಹಟ್ಟಿ ತಾಲೂಕಿನ ಅವಳಿ ನಗರಗಳಲ್ಲಿ ಉಂಟಾಗುತ್ತಿದ್ದ ನೀರಿನ ಭವನೆ ಸದ್ಯಕ್ಕೆ ಕಂಡು ಬರುತ್ತಿಲ್ಲ. ಆದರೂ ಮುಂದಿನ ದಿನಮಾನಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನಗರದ ಎಲ್ಲ ವಾರ್ಡ್ ಗಳಲ್ಲಿ ನಗರಸಭೆ ವತಿಯಿಂದ ಕೃಷ್ಣಾ ನದಿಯಿಂದ ಜಾಕವೆಲ್ ಮೂಲಕ ನೀರಿನ ವ್ಯವಸ್ಥೆ ಮಾಡುತ್ತಿದ್ದು, ಅಲ್ಲದೇ ಪ್ರತಿಯೊಂದು ವಾರ್ಡ್ ಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಿದ್ದು ಅವುಗಳ ಮೂಲಕ ನೀರನ್ನು ಪೂರೈಸುವ ಸಲುವಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಅಲ್ಲದೇ ನಗರಸಭೆ ವ್ಯಾಪ್ತಿಯ 85 ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲಾಗಿದ್ದು, ಆ ಕೊಳವೆ ಬಾವಿಗಳ ಮಾಲೀಕರೊಂದಿಗೆ ಒಡಂಬಡಿಕೆ ಮಾಡಿಕೊಂಡು ನೀರು ಪೂರೈಸಿದ ಕೊಳವೆ ಬಾವಿಗಳ ಮಾಲೀಕರ ವಿದ್ಯುತ್ ಬಿಲ್ ನ್ನು ನಗರಸಭೆಯಿಂದ ಪಾವತಿಸಿ ಬೇಸಿಗೆ ನಿಬಾಯಿಸಲು ನಗರಸಭೆ ಅಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ.

ಅದೇ ರೀತಿ ತೇರದಾಳ ಹಾಗೂ ಮಹಾಲಿಂಗಪುರ ಪುರಸಭೆಯಲ್ಲಿ ಬರ ಎದುರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು ಅದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತೇ ಎನ್ನುವುದು ಬೀಸಿಲಿನ ತಾಪಮಾನ ನೋಡಿದರೆ ತಿಳಿಯುತ್ತಿಲ್ಲ.

ಇನ್ನೂ ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಆ ನಿಟ್ಟಿನಲ್ಲಿ ಕೊಳವೆ ಬಾವಿ, ಕೆರೆ ಇತರೆ ಸಂಪನ್ಮೂಲಗಳನ್ನು ಬಳಸಿಕೊಂಡು ನೀರಿನ ವ್ಯವಸ್ಥೆ ಮಾಡಲು ತಾಲೂಕು ಆಡಳಿತ ಸಿದ್ದತೆ ಮಾಡಿಕೊಂಡಿದೆ.

ಮುಂದಿನ ಮೂರು ತಿಂಗಳಕಾಲ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅದರಲ್ಲಿ ಬೀಜಿಯಾಗಿದ್ದಾರೆ. ಸದ್ಯ ಮುಂದಿನ ದಿನಮಾನಗಳಲ್ಲಿ ಸಂಭವಿಸುವ ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರು, ಬೆಳೆ, ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಆ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲೂಕು ಆಡಳಿತ ಈ ಗಂಭೀರ ಸಮಸ್ಯೆಯನ್ನು ಯಾವ ರೀತಿ ಎದುರಿಸುತ್ತದೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ತಾಲೂಕಿನಲ್ಲಿ ಸದ್ಯ ಸುಮಾರು ಒಂದುವರೆ ತಿಂಗಳ ಕಾಲ ನೀರಿನ ಯಾವುದೇ ಸಮಸ್ಯೆ ಇಲ್ಲ, ಈ ಕುರಿತು ನದಿ ನೀರು ಬತ್ತಿ ಸಮಸ್ಯೆ ಆಗುವ ಮೊದಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಆ ನಿಟ್ಟಿನಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಎಲ್ಲಿ ಸಮಸ್ಯೆ ಆಗುತ್ತದೆಯೋ ಅಲ್ಲಲ್ಲಿ ನಿವಾರಣೆಗೆ ತಾಲೂಕು ಆಡಳಿತ ಸಕಲ ರೀತಿಯಿಂದ ಸಜ್ಜಾಗಿದೆ.
-ಗಿರೀಶ ಸ್ವಾದಿ ತಹಶೀಲ್ದಾರರು, ರಬಕವಿ ಬನಹಟ್ಟಿ

ಬರ ಎದುರಿಸುವ ನಿಟ್ಟಿನಲ್ಲಿ ಈಗಾಲೇ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆದಿದ್ದು, ತಾಲೂಕಿನ ಯಾವ ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದುರಾಗುತ್ತದೆ ಎಂಬುದರ ಬಗ್ಗೆ ಪಟ್ಟಿ ಮಾಡಲಾಗಿದ್ದು, ಮೊದಲು ಬೋರ್ ವೆಲ್‌ಗಳ ಮೂಲಕ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳುತ್ತೇವೆ. ಒಂದು ವೇಳೆ ಬರ ಪರಿಸ್ಥಿತಿ ಹೆಚ್ಚಾದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಸಿದ್ಧರಿದ್ದು, ಈ ಕುರಿತು ಟೆಂಡರ್ ಕರೆಯಲಾಗಿದೆ. ಒಟ್ಟಾರೆ ಈ ಕುರಿತು ಅಗತ್ಯ ಕ್ರಮಗಳನ್ನು ತೆಗೆದುಕೊಂಡು, ನೀರಿನ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ.
-ಸಿದ್ದಪ್ಪ ಪಟ್ಟಿಹಾಳ, ಕಾರ್ಯನಿರ್ವಹಣಾಧಿಕಾರಿ, ತಾಲೂಕು ಪಂಚಾಯತಿ, ರಬಕವಿ ಬನಹಟ್ಟಿ

ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ಈಗಾಗಲೇ 338 ಕೊಳವೆ ಬಾವಿಗಳಿವೆ. ಅದರಲ್ಲಿ 326 ಕಾರ್ಯ ಮಾಡುತ್ತಿವೆ. ಉಳಿದ ಕೊಳವೆ ಬಾವಿಗಳ ದುರಸ್ತಿ ಕಾರ್ಯವನ್ನು ಕೂಡಾ ಕೈಗೊಳ್ಳಲಾಗುವುದು. 13 ತೆರೆದ ಬಾವಿಗಳು ಇದ್ದು, ಅವುಗಳನ್ನು ಕೂಡಾ ಸ್ವಚ್ಛಗೊಳಿಸಿ ನೀರು ಪೂರೈಕೆಗೆ ಬಳಸಿಕೊಳ್ಳಲಾಗುವುದು ಮತ್ತು 85 ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲಾಗಿದೆ. ಕೊಳವೆ ಬಾವಿಗಳ ಮಾಲೀಕರೊಂದಿಗೆ ಒಡಂಬಡಿಕೆ ಮಾಡಿಕೊಂಡು ನೀರು ಪೂರೈಸಿದ ಕೊಳವೆ ಬಾವಿಗಳ ಮಾಲೀಕರ ವಿದ್ಯುತ್ ಬಿಲ್ ನ್ನು ನಗರಸಭೆಯಿಂದ ಪಾವತಿಸಲಾಗುವುದು. ನೀರಿನ ಸಮಸ್ಯೆಯನ್ನು ಎದುರಿಸುವ ಸಂದರ್ಭದಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.
-ಜಗದೀಶ ಈಟಿ, ಪೌರಾಯುಕ್ತರು, ನಗರಸಭೆ, ರಬಕವಿ ಬನಹಟ್ಟಿ

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.