ನೀಲಾನಗರಕ್ಕೆ ಹೆಚ್ಚುವರಿ ಆಂಗ್ಲ ಮಾಧ್ಯಮ ತರಗತಿಗೆ ಮನವಿ
Team Udayavani, Jun 17, 2019, 9:37 AM IST
ಶಿರೂರ: ನೀಲಾನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮಕ್ಕೆ ಪ್ರವೇಶ ಪಡೆದ ಮಕ್ಕಳು.
ಶಿರೂರ: ಸರಕಾರ ಪ್ರಸಕ್ತ ಸಾಲಿನಿಂದ ಆರಂಭಿಸಿರುವ ಆಂಗ್ಲ ಮಾಧ್ಯಮದ ಶಿಕ್ಷಣಕ್ಕೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಒಲವು ವ್ಯಕ್ತವಾಗಿದ್ದು, ಪಾಲಕರು ತಮ್ಮ ಮಕ್ಕಳಿಗೆ ಆಂಗ್ಲ ಮಾಧ್ಯಮದ ಶಿಕ್ಷಣ ನೀಡಲು ಮುಂದಾಗಿದ್ದಾರೆ.
ಬಂಜಾರಾ ಬಾಂಧವರು ವಾಸಿಸುವ ನೀಲಾನಗರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡಲಾಗಿದ್ದು, ಇಲ್ಲಿ ಪಾಲಕರು ತಮ್ಮ ಮಕ್ಕಳನ್ನು ದಾಖಲಾತಿಗೆ ಕಸರತ್ತು ನಡೆಸಿದ್ದು ಒಂದೇ ದಿನದಲ್ಲಿ 1ನೇ ತರಗತಿಯ ಆಂಗ್ಲ ಮಾಧ್ಯಮಕ್ಕೆ 60 ಮಕ್ಕಳು ಪ್ರವೇಶಾತಿಯ ಅರ್ಜಿ ಪಡೆದು ದಾಖಲಾತಿಗೆ ಮುಂದಾಗಿದ್ದಾರೆ. ಸರಕಾರ ಬರಿ 30 ಮಕ್ಕಳಿಗೆ ಅನುಮತಿ ನೀಡಿದ್ದರಿಂದ ಪಾಲಕರು ಗೊಂದಲದಲ್ಲಿದ್ದಾರೆ. ಆದರೆ, ಪಾಲಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಉಳಿದ ಹೆಚ್ಚುವರಿ ಮಕ್ಕಳಿಗೂ ಇನ್ನೊಂದು ಆಂಗ್ಲ ಮಾಧ್ಯಮ ತರಗತಿ ನೀಡಬೇಕೆಂದು ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.
ಕನ್ನಡ ಮಾಧ್ಯಮಕ್ಕೆ ಮಕ್ಕಳ ಕೊರತೆ: ಸರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೆಡ್ಡು ಒಡೆಯುವ ಉದ್ದೇಶದಿಂದ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡಿದೆ. ಇದರಿಂದ ಕನ್ನಡ ಮಾಧ್ಯಮಕ್ಕೆ ಬರುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ನೀಲಾನಗರ ಶಾಲೆಯಲ್ಲಿ ಕನ್ನಡ ಮಾಧ್ಯಮಕ್ಕೆ ಬರಿ 8 ಮಕ್ಕಳು ಮಾತ್ರ ದಾಖಲಾತಿ ಪಡೆದಿದ್ದಾರೆ. ಅದೇ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭವಾಗಿದ್ದರಿಂದ ಕನ್ನಡ ಮಾಧ್ಯಮಕ್ಕೆ ಬರಲು ಮಕ್ಕಳು ಹಿಂಜರೆಯುತ್ತಿದ್ದಾರೆ.
ಪಠ್ಯಪುಸ್ತಕ ಇಲ್ಲ: ಸದ್ಯ ಆರಂಭವಾಗಿರುವ ಆಂಗ್ಲ ಮಾಧ್ಯಮ ಶಿಕ್ಷಣ ಮಾಧ್ಯಮದ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ದೊರೆತಿಲ್ಲ, ವರ್ಗ ಶಿಕ್ಷಕಿ ಪ್ರೇಮಾ ಕಟ್ಟಿ ತರಬೇತಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.