ರಸ್ತೆ ದುರಸ್ತಿಗೆ ನೀರಲ್ಲೇ ನಿಂತು ಡಿಸಿಎಂಗೆ ಮನವಿ
Team Udayavani, Oct 23, 2019, 8:39 AM IST
ಮಹಾಲಿಂಗಪುರ: ಮಳೆಯಿಂದ ಹಾನಿಗೊಳಗಾದ ರಸ್ತೆ ದುರಸ್ತಿಗೆ ಆಗ್ರಹಿಸಿ ನೀರಲ್ಲೇ ನಿಂತು ಬಾಲಕಿ ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ವಿಡಿಯೋ ವೈರಲ್ ಆಗಿದೆ.
ಕಳೆದ ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ರನ್ನಬೆಳಗಲಿ ಪಟ್ಟಣದ ಎಲ್ಲ ಹಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಪಟ್ಟಣದ 17ನೇ ವಾರ್ಡ್ ವ್ಯಾಪ್ತಿಯ ಕೋಡಿಹಾಳ ವಸತಿಯಲ್ಲಿನ ಮನೆ ಮತ್ತು ರಸ್ತೆಗಳುಜಲಾವೃತವಾಗಿವೆ. ಕೋಡಿಹಾಳ ನಿವಾಸಿ ಮಾಳಪ್ಪ ಮಠದ ಪುತ್ರಿ ಅನ್ನಪೂರ್ಣ, ಜಲಾವೃತಗೊಂಡ ರನ್ನಬೆಳಗಲಿ-ಚಿಮ್ಮಡ ರಸ್ತೆ ಜಲಾವೃತಗೊಂಡು ತೊಂದರೆಯಾದರೂ ಗಮನ ಹರಿಸುತ್ತಿಲ್ಲ ಎಂದು ಪುರಸಭೆ ಸದಸ್ಯರು, ಪಪಂ ಅಧಿಕಾರಿಗಳು, ಜಿಲ್ಲಾಧಿ ಕಾರಿಗಳು ಮತ್ತು ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಮನವಿ ಮಾಡಿಕೊಂಡಿದ್ದಾಳೆ.
ಅಧಿಕಾರಿಗಳ ಭೇಟಿ: ಬಾಲಕಿ ವಿಡಿಯೋ ವೈರಲ್ ಆಗಿದ್ದರಿಂದ ಮುಧೋಳ ತಹಶೀಲ್ದಾರ್ ಸಂಜಯ ಇಂಗಳೆ, ರನ್ನಬೆಳಗಲಿ ಪಪಂ ಮುಖ್ಯಾಧಿಕಾರಿ ಶ್ರೀನಿವಾಸ ಜಾಧವ, ಮಹಾಲಿಂಗಪುರ ಠಾಣಾಧಿಕಾರಿ ಆರ್. ವೈ. ಬೀಳಗಿ ಕೋಡಿಹಾಳ ವಸತಿಯಲ್ಲಿನ ಚಿಮ್ಮಡ-ರನ್ನಬೆಳಗಲಿ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು. ರಸ್ತೆಯಲ್ಲಿ ನಿಂತ ನೀರು ಹರಿಯುವಂತೆ ವ್ಯವಸ್ಥೆ ಮಾಡಿ, ರಸ್ತೆಯ ಅಕ್ಕಪಕ್ಕದ ರೈತರು ಸಹಕಾರ ನೀಡಿದರೆ ಶೀಘ್ರ ರಸ್ತೆ ದುರಸ್ತಿ ಮಾಡುವುದಾಗಿ ಭರವಸೆ ನೀಡಿದರು. ಪಪಂ ಸದಸ್ಯರು, ಗ್ರಾಮದ ಹಿರಿಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.