ಬಾಗಲಕೋಟೆ ಲಾಕ್‌ಡೌನ್ ಮಾಡಲು ಆಗ್ರಹಿಸಿ ಮನವಿ
Team Udayavani, Jul 17, 2020, 1:49 PM IST
ಮಹಾಲಿಂಗಪುರ: ತಂಬಾಕು, ಗುಟಕಾ, ಮಾವಾ, ಮದ್ಯಪಾನ ನಿಷೇಧ ಹಾಗೂ ಕೋವಿಡ್ ಹೆಚ್ಚಳವಾಗುತ್ತಿರುವ ಕಾರಣ ಬಾಗಲಕೋಟೆ ಜಿಲ್ಲೆಯನ್ನು ಲಾಕ್‌ಡೌನ್ ಮಾಡಬೇಕು ಎಂದು ಒತ್ತಾಯಿಸಿ ಸ್ಥಳೀಯ ಕರ್ನಾಟಕ ನವ ನಿರ್ಮಾಣ ಸೇನೆ ಅಧ್ಯಕ್ಷ ಅಸ್ಲಂ ಕೌಜಲಗಿ ನೇತೃತ್ವದಲ್ಲಿ ಸದಸ್ಯರು ಪುರಸಭೆ ಮುಖ್ಯಾಧಿಕಾರಿ ಬಿ.ಆರ್. ಕಮತಗಿ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ನವ ನಿರ್ಮಾಣ ಸೇನೆಯ ತಾಲೂಕಾ ಅಧ್ಯಕ್ಷ ಅಸ್ಲಂ ಕೌಜಲಗಿ ಮಾತನಾಡಿ, ಕೋವಿಡ್ ಮಹಾಮಾರಿ ಜಿಲ್ಲೆಯಲ್ಲಿ ಹೆಚ್ಚಿರುವುದರಿಂದ ಇಲ್ಲಿಯ ಜನರಲ್ಲಿ ಆತಂಕವನ್ನುಂಟು ಮಾಡಿದೆ. ಸುರಕ್ಷಿತ ಕ್ರಮವಾಗಿ ಕೆಲ ಜಿಲ್ಲೆಗಳು ಲಾಕ್ ಡೌನ್ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಯನ್ನು ಕೂಡಾ ಲಾಕ್‌ಡೌನ್ ಮಾಡಬೇಕು. ಸುರಿಯುತ್ತಿರುವ ಮಳೆಯಿಂದಾಗಿ ಕೊರೊನಾ ಹೆಚ್ಚುವ ಸಂಭವವಿದೆ ಎಂದರು.
ತಂಬಾಕು, ಮಾವಾ, ಗುಟಕಾ, ಮದ್ಯಪಾನ ಸೇವನೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾಬಿಟ್ಟಿ ಉಗಿಯುವುದರಿಂದ ಕೊರೊನಾದಂತ ಸಾಂಕ್ರಾಮಿಕ ರೋಗ ಹೆಚ್ಚಿನ ಸಂಖ್ಯೆಯಲ್ಲಿ ಹರಡುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ತಂಬಾಕು, ಮಾವಾ, ಗುಟಕಾ, ಮದ್ಯಪಾನ ಮಾರಾಟ ಸಂಪೂರ್ಣ ನಿಷೇಧ ಮಾಡಬೇಕು ಎಂದರು.
ಕನಸೇ ಉಪಾಧ್ಯಕ್ಷ ನಿಂಗನಗೌಡ ಪಾಟೀಲ, ಪ್ರಶಾಂತ ಹಟ್ಟಿ, ಮಹಾಲಿಂಗ ಲಾತೂರ, ಶಾನೂರ ಜಂಬಗಿ, ಸೈಯದ್ ಪಕಾಲಿ, ಆನಂದ ಹುಣಶ್ಯಾಳ, ವಸೀಂ ಅಜರೇಕರ, ಇಸ್ಮಾಯಿಲ್ ನದಾಫ, ರಜಾಕ ನದಾಫ್, ನಿಜಗುಣ ಮುರಗೋಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.