ವಿದ್ಯಾರ್ಥಿನಿ ಕೊಲೆ ಪ್ರಕರಣ ಖಂಡಿಸಿ ಮನವಿ
Team Udayavani, May 2, 2019, 2:21 PM IST
ಇಳಕಲ್ಲ: ರಾಯಚೂರು ಇಂಜನಿಯರಿಂಗ್ ವಿದ್ಯಾರ್ಥಿನಿಯ ಅಸಹಜ ಪ್ರಕರಣ ಇಡೀ ಸಮಾಜವೇ ತಲೆ ತಗ್ಗಿಸುವಂತದ್ದಾಗಿದ್ದು, ವಿದ್ಯಾರ್ಥಿನಿಯ ಸಾವಿನ ಪ್ರಕರಣದ ತನಿಖೆಯನ್ನು ತೀವ್ರಗತಿಯಲ್ಲಿ ನಡೆಸಬೇಕು ಎಂದು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಬಾಗಲಕೋಟೆ ಜಿಲ್ಲಾ ಸಂಚಾಲಕ ವಿಜಯ ಗೌಡರ ಆಗ್ರಹಿಸಿದ್ದಾರೆ.
ಇಲ್ಲಿಯ ಎಸ್.ಆರ್. ಕಂಠಿ ವೃತ್ತದಲ್ಲಿ ಎಬಿವಿಪಿಯ ನಗರ ಘಟಕ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯು ಆಮೆಗತಿಯಲ್ಲಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಬಂಧಿತನಾಗಿರುವ ಆರೋಪಿಯಿಂದ ಮಾಹಿತಿ ಪಡೆದಿರುವ ಪೊಲೀಸರು ಬಹಿರಂಗಗೊಳಿಸಿಲ್ಲ. ಕಾನೂನು ವ್ಯವಸ್ಥೆ ಕಾಪಾಡಿ ಜನರಲ್ಲಿ ನೈತಿಕ ಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡದೇ ಗೃಹ ಇಲಾಖೆ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿದರು.
ಬಳಿಕ ತಾಲೂಕಾ ದಂಡಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ನಗರ ಘಟಕದ ಕಾರ್ಯದರ್ಶಿ ವಿನಯ ಮಲಾರಖಾನ, ಸೋಮು ಪಾಟೀಲ, ಅಭಿಷೇಕ ಕೋಲ್ಕರ್, ಸಿದ್ದು ಹಿರೇಮಠ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.