ಯುಕೆಪಿ ಮಾದರಿಯಲ್ಲಿ ಶಾಶ್ವತ ಪರಿಹಾರ ಒದಗಿಸಲು ಆಗ್ರಹ


Team Udayavani, Sep 13, 2019, 10:50 AM IST

bk-tdy-1

ಮುಧೋಳ: ಲೋಕಾಪುರ ಹಾಗೂ ಮುಧೋಳ ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿ ನಡೆದ ಧರಣಿ ಸತ್ಯಾಗ್ರಹದಲ್ಲಿ ವಿಧಾನ ಪರಿಷತ್‌ ಸದಸ್ಯ ಆರ್‌.ಬಿ. ತಿಮ್ಮಾಪುರ ಮಾತನಾಡಿದರು.

ಮುಧೋಳ: ಭೀಕರ ಪ್ರವಾಹಕ್ಕೆ ರಾಜ್ಯದ 22 ಜಿಲ್ಲೆಗಳಲ್ಲಿ ಜನಸಾಮಾನ್ಯರು, ಜಾನುವಾರುಗಳು ತೀವ್ರ ತೊಂದರೆ ಅನುಭವಿಸಿವೆ. ಸಂತ್ರಸ್ತರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯ ದೊರೆತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂತ್ರಸ್ತರ ಸಮಸ್ಯೆ ಆಲಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಆರ್‌.ಬಿ.ತಿಮ್ಮಾಪುರ ಆರೋಪಿಸಿದರು.

ಮುಧೋಳ ಹಾಗೂ ಲೋಕಾಪುರ ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರನ್ನು ನಿರ್ಲಕ್ಷಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್‌ ಶಾ ಅವರಿಗೆ ಬೇಡದ ಕೂಸಾಗಿರುವುದರಿಂದ ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವುದೇ ನೆರವು, ಸಹಾಯ, ಸಹಕಾರ ನೀಡುತ್ತಿಲ್ಲ ಎಂದರು.

ಶಿವಮೊಗ್ಗದಲ್ಲಿ ಯಡಿಯೂರಪ್ಪನವರ ಕ್ಷೇತ್ರದಲ್ಲಿ ಘೋಷಿಸಿರುವಂತೆ, ಉಪಮುಖ್ಯಮಂತ್ರಿಗಳ ಕ್ಷೇತ್ರವಾದ ಮುಧೋಳದಲ್ಲಿಯೂ ಅದೇ ರೀತಿ ಪರಿಹಾರ ಘೋಷಿಸಬೇಕು. ಜಲಾವೃತಗೊಂಡ ಎಲ್ಲ ಗ್ರಾಮಗಳನ್ನು ಸ್ಥಳಾಂತರಿಸಿ ಯುಕೆಪಿ ಮಾದರಿಯಲ್ಲಿ ಶಾಶ್ವತ ಪರಿಹಾರ ಒದಗಿಸಬೇಕು. ಹಾನಿಗೊಳಗಾದ ರೈತರ ಹೊಲಗಳಿಗೆ ಪ್ರತಿ ಎಕರೆಗೆ ರೂ.1 ಲಕ್ಷ ಪರಿಹಾರ ನೀಡಬೇಕು. ಮನೆ ಕಳೆದುಕೊಂಡವರಿಗೆ 10 ಲಕ್ಷ ಪರಿಹಾರ, ಹಾಗೂ ಮನೆ ನಿರ್ಮಿಸುವವರೆಗೂ ಪ್ರತಿ ತಿಂಗಳು 10 ಸಾವಿರ ಬಾಡಿಗೆ ಹಣ ನೀಡಬೇಕು. ಅವಳಿ ಜಿಲ್ಲೆಗಳಲ್ಲಿ ಎರಡನೇ ಬಾರಿ ಪ್ರವಾಹ ಬಂದಿದ್ದು, ಮತ್ತೆ ನಿರಾಶ್ರಿತರು ತೊಂದರೆಗೀಡಾಗಿದ್ದಾರೆ. ಆದ್ದರಿಂದ ತಾತ್ಕಾಲಿಕ ಶೆಡ್‌ ನಿರ್ಮಿಸಬೇಕು. ರಾಜ್ಯದಲ್ಲಿ ಸಂಭವಿಸಿರುವ ಜಲ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಒತ್ತಾಯಿಸಿದರು.

ಕೆಲವು ಕಡೆ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ರಾಜಕೀಯ ಪಕ್ಷಪಾತ ಮಾಡಲಾಗುತ್ತಿದೆ ಎಂದು ಆರೋಪ ಕೇಳಿಬರುತ್ತಿದೆ. ನಿರಾಶ್ರಿತರಿಗೆ ಎ, ಬಿ, ಸಿ ಎಂದು ಪರಿಹಾರ ವಿತರಣೆಗೆ ಸರ್ವೇ ನಡೆಸುತ್ತಿದ್ದು, ಇದನ್ನು ಬಿಟ್ಟು ಎಲ್ಲರಿಗೂ ಸರಿಯಾಗಿ ಎ ಶ್ರೇಣಿಯಲ್ಲಿಯೇ ಪರಿಹಾರ ನೀಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಾಂತ ಎಲ್ಲ ನಿರಾಶ್ರಿತರ ಜೊತೆಗೆ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದು ಎಂದರು.

ಜಿಪಂ ಸದಸ್ಯ ಮಹಾಂತೇಶ ಉದಪುಡಿ, ಕಾಂಗ್ರೆಸ್‌ ಮುಖಂಡ ಸತೀಶ ಬಂಡಿವಡ್ಡರ, ದುಂಡಪ್ಪ ಲಿಂಗರಡ್ಡಿ, ಎಚ್.ಎ.ಕಡಪಟ್ಟಿ, ಧರೆಪ್ಪ ಸಾಂಗ್ಲೀಕರ, ರಾಜು ಹಲಗತ್ತಿ, ಸದಾಶಿವ ಮಾಳಿ ಸೇರಿದಂತೆ ಅನೇಕರು ಮುಖಂಡರು ಮಾತನಾಡಿದರು.

ಮುಧೋಳ ಬ್ಲಾಕ್‌ ಹಾಗೂ ಲೋಕಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಸಂಜಯ ನಾಯಕ ಹಾಗೂ ಲೋಕಣ್ಣ ಕೊಪ್ಪದ ತಹಶೀಲ್ದಾರ್‌ ಸಂಜಯ ಇಂಗಳೆ ಆವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.