ವೇತನ ಶ್ರೇಣಿ ನಿಗದಿಗೊಳಿಸಲು ಆಗ್ರಹ

•ಶಿಕ್ಷಣ ಇಲಾಖೆ ನಿರ್ದೇಶಕರ ಆದೇಶಕ್ಕೆ ಆಕ್ರೋಶ •ಬೇಡಿಕೆ ಈಡೇರಿಕೆಗೆ ಪಟ್ಟು

Team Udayavani, Jul 10, 2019, 2:24 PM IST

bk-tdy-4..

ಬಾಗಲಕೋಟೆ: ಪ್ರತಿಭಟನೆಯಲ್ಲಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಾಗೇನವರ ಮಾತನಾಡಿದರು.

ಬಾಗಲಕೋಟೆ: ಶಿಕ್ಷಣ ಇಲಾಖೆಯ ನಿರ್ದೇಶಕರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಜಿಲ್ಲೆಯ ಶಿಕ್ಷಕರು, ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ವಿವಿಧ ತಾಲೂಕುಗಳಿಂದ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ್ದ ಶಿಕ್ಷಕರು, ಶಿಕ್ಷಣ ಇಲಾಖೆ ನಿರ್ದೇಶಕರು ಹೊರಡಿಸಿರುವ ಆದೇಶವನ್ನು ತಕ್ಷಣ ಕೈಬಿಡುವಂತೆ ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಬಾಗೇನವರ ಮಾತನಾಡಿ, 2014ಕ್ಕಿಂತ ಮೊದಲು ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು 1ರಿಂದ 5ನೇ ತರಗತಿಗಳ ವರ್ಗಕ್ಕೆ ಸೀಮಿತಗೊಳಿಸಿ ಆದೇಶಿಸಿದ್ದಾರೆ. ಇದರಿಂದ ಪದವೀಧರ ಶಿಕ್ಷಕರಿಗೆ ಅನ್ಯಾಯ ಮಾಡಿದಂತಾಗಿದೆ. ಕೂಡಲೇ ಈ ಆದೇಶ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ, ಪದವೀಧರ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕು. ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಆಗಿಲ್ಲ. ಹೀಗಾಗಿ ಕೂಡಲೇ ಶಿಕ್ಷಕರ ವರ್ಗಾವಣೆ ಆರಂಭಿಸಬೇಕು. ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಗಳಲ್ಲಿನ ನ್ಯೂನತೆ ಸರಿಪಡಿಸಿ, ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. ಶಿಕ್ಷಕ ಮತ್ತು ವಿದ್ಯಾರ್ಥಿಗಳ ಅನುಪಾತ ಗುರುತಿಸುವಾಗ ಮುಖ್ಯಾಧ್ಯಾಪಕ, ದೈಹಿಕ ಶಿಕ್ಷಣ ಶಿಕ್ಷಕರನ್ನು ಹೊರತುಡಿಸಿ ಹಾಗೂ ಮಾಧ್ಯಮವಾರು, ಪ್ರಾದೇಶಿಕವಾರು ವಿಶೇಷ ನಿಯಮ ರೂಪಿಸಿ, ಹೆಚ್ಚುವರಿ ಪ್ರಕ್ರಿಯೆ ಮಾಡಬೇಕು. 6ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸ್ಸಿನ ಪ್ರಕಾರ ಮುಖ್ಯಾಧ್ಯಾಪಕರಿಗೆ 10, 15, 20, 25, 30 ವರ್ಷಗಳ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪ ನಿರ್ದೇಶಕರ ಹುದ್ದೆವರೆಗೂ ಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಬಿ. ಬಳ್ಳಾರಿ, ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಎಸ್‌.ಎಚ್. ಕಂದಗಲ್, ವಿ.ಕೆ. ಪತ್ತಾರ, ಪರಶುರಾಮ ಪಮ್ಮಾರ, ಅರ್ಜುನ ಕಾಖಂಡಕಿ, ಕೆ.ಎಂ. ಕುಗಾಟೆ, ಎಸ್‌.ಪಿ. ಹೂಗಾರ, ಬಿ.ಎಸ್‌. ಸಜ್ಜನ, ಎಸ್‌.ಬಿ. ಅನಂತಪುರ, ಸಿ.ಜಿ. ಕಡಕೋಳ, ಜಿ.ಎನ್‌. ದಾಸರಡ್ಡಿ, ಎಂ.ಬಿ. ಒಂಟಗೋಡಿ, ಸಿ.ಬಿ. ಕಲ್ಲೋಳ, ಎಸ್‌.ಎ. ಸಾರಂಗಮಠ, ವೈ.ಎಸ್‌. ಮಜ್ಜಗಿ, ಪಿ.ಎಸ್‌. ತಿರಕಪ್ಪನವರ, ಎಂ.ಎಂ. ಮಕಾನದಾರ, ಪಿ.ಕೆ. ಚಲವಾದಿ ಸೇರಿದಂತೆ ಜಿಲ್ಲೆಯ ಆರೂ ತಾಲೂಕಿನ ಸಹಸ್ರಾರು ಶಿಕ್ಷಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.