ಭೂಸೇನಾ ನಿಗಮ ಕಾರ್ಯ ವೈಖರಿಗೆ ಅಸಮಾಧಾನ
Team Udayavani, Dec 14, 2019, 12:22 PM IST
ಬಾಗಲಕೋಟೆ: ಪೂರ್ಣ ಪ್ರಮಾಣದ ಅನುದಾನ ನೀಡಿದರೂ ಕಾಮಗಾರಿ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿರುವ ಭೂ ಸೇನಾ ನಿಗಮದ ಕಾರ್ಯ ವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ, ನಿಗಮದ ಉಪ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಎಸ್ ಸಿಪಿ, ಟಿಎಸ್‌ಪಿ ಕಾಮಗಾರಿ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲಾಮಟ್ಟದ ಜಾಗೃತಿ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾದಾಮಿ-ಮುಧೋಳದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಸಂಪೂರ್ಣ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಮಗಾರಿಯ ಜವಾಬ್ದಾರಿ ಪಡೆದ ಭೂ ಸೇನಾ ನಿಗಮ ಈವರೆಗೆ ಕಾಮಗಾರಿ ಕೈಗೊಂಡಿಲ್ಲ. ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನ ನವೆಂಬರ್ ಅಂತ್ಯಕ್ಕೆ ಉಳಿದ ಎಲ್ಲ ಸ್ಥಳೀಯ ಸಂಸ್ಥೆಗಿಂತ ಗುಳೇದಗುಡ್ಡ ಪುರಸಭೆ ಮಾತ್ರ ಅತೀ ಕಡಿಮೆ ಶೇ.40 ಮಾತ್ರ ಪ್ರಗತಿ ಸಾಧಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಕೂಡಲೇ ನಿಗದಿ ಅವಧಿಯಲ್ಲಿ ಕಾಮಗಾರಿ ಕೈಗೊಳ್ಳಲು ಸೂಚಿಸಿದರು.
ಜಿಲ್ಲೆಯ ಎಲ್ಲ ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ವಸತಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಹುನಗುಂದದ ವಸತಿ ನಿಲಯಕ್ಕೆ ಕಾಂಪೌಂಡ್ ಇಲ್ಲ. ಹಾಸ್ಟೇಲ್‌ನಲ್ಲಿ ನೀರಿನ ತೊಟ್ಟಿ ಇದ್ದು, ಮಕ್ಕಳು ಬೀಳದಂತೆ ಕ್ರಮ ವಹಿಸಬೇಕು. ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಸ್ವತ್ಛತೆ ಕಾಪಾಡಲು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ, ಸಾಮರಸ್ಯ ಬೆಳೆಸಲು ಜಿಲ್ಲೆಯಾದ್ಯಂತ ವಿವಿಧೆಡೆ ಸಭೆ ಆಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿ ಈ ವರ್ಷ ಜನವರಿಯಿಂದ ನವೆಂಬರ್‌ವರೆಗೆ ಒಟ್ಟು 33 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 32 ತನಿಖೆ ಹಂತದಲ್ಲಿವೆ ಎಂದರು. ಜಿಲ್ಲೆಯಲ್ಲಿ ಎಲ್ಲ ದೌರ್ಜನ್ಯ ಪ್ರಕರಣಗಳಲ್ಲಿ ಎಲ್ಲರಿಗೂ ಹಂತ ಹಂತವಾಗಿ ಪರಿಹಾರ ಕಳೆದೆರಡು ವರ್ಷಗಳಿಂದ ಆರ್‌ಟಿಜಿಎಸ್ ಮೂಲಕವೇ ನೇರವಾಗಿಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಮದ್ಯವರ್ತಿಗಳ ಹಾವಳಿ ತಡೆಗೆ ಉತ್ತಮ ಕ್ರಮವಾಗಿದ್ದು, ಜೂನ್‌ದಿಂದ ಇಲ್ಲಿವರೆಗೆ ಒಟ್ಟು 29 ಪ್ರಕರಣಗಳಿಗೆ ಪರಿಹಾರಧನ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಜಗದೀಶ ಹೆಬ್ಬಳ್ಳಿ ಸಭೆಗೆ ತಿಳಿಸಿದರು.
ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕೃಷಿ ಇಲಾಖೆ ಒಟ್ಟು ಶೇ.73.82, ತೋಟಗಾರಿಕೆ ಇಲಾಖೆ ಶೇ.87.23, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶೇ.85.51, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶೇ.71.05, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಶೇ.99.50, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶೇ.70.26, ಕೈಗಾರಿಕೆ ಇಲಾಖೆ ಶೇ.100, ಕಾರ್ಮಿಕ ಇಲಾಖೆ ಶೇ.73, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಶೇ.91.32 ಪ್ರಗತಿ ಸಾಧಿಸಿವೆ. ಒಟ್ಟಾರೆ ವಿಶೇಷ ಘಟಕ ಯೋಜನೆಯಡಿ 59.50 ಕೋಟಿ ರೂ. ಹಾಗೂ ಗಿರಿಜನ ಉಪಯೋಜನೆಯಡಿ 58.68 ಕೋಟಿ ರೂ.ಖರ್ಚು ಮಾಡಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಾಗೃತಿ ಸಮಿತಿಯ ಸದಸ್ಯ ಎಂ.ಎಚ್. ಚಲವಾದಿ, ದುಂಡಪ್ಪ ಸಾವಳಗಿ, ಯಲ್ಲಪ್ಪ ಮೇತ್ರಿ, ಶಂಭುಗೌಡ ಪಾಟೀಲ, ಸುಭಾಸ ಗತ್ತಿ, ಎಸ್.ಎಸ್. ಗುಳೇದ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.