ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ: ಡಿಸಿ
ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ
Team Udayavani, Mar 12, 2022, 5:45 PM IST
ಬಾಗಲಕೋಟೆ: ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರಿಗೆ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ನಿಟ್ಟಿನಲ್ಲಿ ಮಾ. 12ರಂದು ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಯೋಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ.ರಾಜೇಂದ್ರ ಹೇಳಿದರು.
ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಏಕಕಾಲದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಾಲೂಕಿನ ಹೊನ್ನಾಕಟ್ಟಿ ಗ್ರಾಮದಲ್ಲಿ ಚಾಲನೆ ನೀಡಲಿದ್ದಾರೆ. ಅದೇ ರೀತಿಯ ಜಿಲ್ಲೆಯ ಎಲ್ಲ ಮತಕ್ಷೇತ್ರಗಳಲ್ಲಿ ಏಕಕಾಲದಲ್ಲಿ ಪ್ರಾರಂಭಿಸಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ಹೋಗಿ ಕಂದಾಯ ದಾಖಲೆಗಳನ್ನು ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಬಾದಾಮಿ ತಾಲೂಕಿನ ನವೀಲುಹೊಳೆ, ಗುಳೇದಗುಡ್ಡ ತಾಲೂಕಿನ ಪಾದನಕಟ್ಟಿ, ಹುನಗುಂದ ತಾಲೂಕಿನ ಅಮರಾವತಿ, ಇಲಕಲ್ಲ ತಾಲೂಕಿನ ಹಿರೇಓತಗೇರಿ, ಜಮಖಂಡಿ ತಾಲೂಕಿನ ಹುಲ್ಯಾಳ, ರಬಕವಿ-ಬನಹಟ್ಟಿ ತಾಲೂಕಿನ ಕೆಸರಕೊಪ್ಪ, ಮುಧೋಳ ತಾಲೂಕಿನ ಮಾಲಾಪೂರ ಹಾಗೂ ಬೀಳಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ ಎಂದರು.
ಜಿಲ್ಲೆಯಲ್ಲಿ 310621 ಪಹಣಿಗಳು, 18852 ಅಟ್ಲಾಸ್‌ಗಳು, 208320 ಜಾತಿ ಪ್ರಮಾಣ ಪತ್ರಗಳನ್ನು ಈಗಾಗಲೇ ಮುದ್ರಿಸಿ ಪರಿಶೀಲಿಸಿ ಸಿದ್ಧತೆಯಲ್ಲಿಟ್ಟುಕೊಳ್ಳಲಾಗಿದೆ. ಮಾರ್ಚ 12 ರಂದು ಉಪವಿಭಾಗಾ ಧಿಕಾರಿಗಳು, ತಹಶೀಲ್ದಾರ್ ರು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಕಾರಿಗಳು ಹಾಗೂ ಗ್ರಾಮ ಸಹಾಯಕರ ನೇತೃತ್ವದಲ್ಲಿ ಆಯಾ ಮತಕ್ಷೇತ್ರಗಳ ವಿಧಾನಸಭಾ ಸದಸ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ದಾಖಲೆ ಪಡೆಯಲು ಸಾಧ್ಯವಾಗದವರು ಮಾ. 21 ರಿಂದ 26ರವರೆಗೆ ನಾಡಕಚೇರಿಗಳಿಗೆ ಭೇಟಿ ನೀಡಿ ಕಂದಾಯ ದಾಖಲೆಗಳನ್ನು ಉಚಿತವಾಗಿ ಪಡೆಯಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು. ಈ ಯೋಜನೆಯಿಂದ ಎಲ್ಲ ಕುಟುಂಬಗಳಿಗೆ ದಾಖಲೆ ನೀಡುತ್ತಿರುವುದರಿಂದ ದಾಖಲೆಗಳನ್ನು ಪರಿಶೀಲಿಸಿಕೊಳ್ಳಲು, ಅದರಲ್ಲಿ ಯಾವುದಾದರೂ ಲೋಪದೋಷಗಳಿದ್ದಲ್ಲಿ ಬದಲಾ ವಣೆಗಳಿದ್ದಲ್ಲಿ ಕಂಡುಕೊಳ್ಳಲು ಅನುಕೂಲವಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.