ತಾಲೂಕು ಸಾಹಿತ್ಯ ಸಮ್ಮೇಳನ ಸಿದ್ಧತೆ ಪರಿಶೀಲನೆ
Team Udayavani, Feb 29, 2020, 4:14 PM IST
ಬಾದಾಮಿ: ಮಾ.1ರಂದು ನಡೆಯಲಿರುವ 7ನೇ ತಾಲೂಕು ಸಾಹಿತ್ಯ ಸಮ್ಮೇಳನ ಸುವ್ಯವಸ್ಥೆ, ಅಚ್ಚುಕಟ್ಟಾಗಿ ನಡೆಯುವಂತೆ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ತಹಶೀಲ್ದಾರ್ ಸುಹಾಸ ಇಂಗಳೆ ತಿಳಿಸಿದರು.
ಶುಕ್ರವಾರ ಇಲ್ಲಿನ ವೀರಪುಲಿಕೇಶಿ ಒಳಾಂಗಣ ಕ್ರೀಡಾಂಗಣ ಮುಂಭಾಗದ ಬಸವ ಭವನದಲ್ಲಿ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿದರು. ಸಮ್ಮೇಳನದಲ್ಲಿ ವಿಐಪಿ, ಮಹಿಳೆಯರಿಗೆ, ಪುರುಷರಿಗೆ, ಮಾಧ್ಯಮ ಪ್ರತಿನಿಧಿಗಳಿಗೆ ಕುಳಿತುಕೊಳ್ಳಲು ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ. ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರಿಗೆ, ಸಾರ್ವಜನಿಕರಿಗೆ ಗೋಧಿ ಹುಗ್ಗಿ, ಚಪಾತಿ, ಅನ್ನಸಾರು ಊಟದ ವ್ಯವಸ್ಥೆ ಮಾಡಲಾಗಿದೆ. ಸುಮಾರು 2000 ಜನರು ಆಗಮಿಸುವ ನಿರೀಕ್ಷೆ ಇದೆ ಎಂದರು.
ಜನರಿಗೆ ತೊಂದರೆಯಾಗದಂತೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನದ ದಿನ ಸ್ವತ್ಛತೆ ಕಾಪಾಡಲು ಪುರಸಭೆ ಅಧಿಕಾರಿಗಳಿಗೆ, ವಿದ್ಯುತ್ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಕೆಇಬಿ ಅಧಿ ಕಾರಿಗಳಿಗೆ ಸೇರಿದಂತೆ ವಿವಿಧ ಇಲಾಖೆ ಅ ಧಿಕಾರಿಗಳಿಗೆ ಕೆಲವೊಂದು ಜವಾಬ್ದಾರಿಗಳನ್ನು ನೀಡಲಾಗಿದೆ. ಸಮ್ಮೇಳನದಲ್ಲಿ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ಸೇರಿದಂತೆ, ಸಂಸದರು, ಶಾಸಕರು, ಜಿಪಂ, ತಾಪಂ, ಪುರಸಭೆ ಸೇರಿದಂತೆ ಜನಪ್ರತಿನಿಧಿಗಳು ಆಗಮಿಸುವರು. ಕಡ್ಡಾಯವಾಗಿ ಎಲ್ಲ ಇಲಾಖೆ ಅಧಿಕಾರಿಗಳು, ನಗರದ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಲು, ಸಮ್ಮೇಳನದ ದಿನ ಹಾಜರಾಗಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಿಎಸ್‌ಐ ಪ್ರಕಾಶ ಬಣಕಾರ, ತಾಲೂಕು ಕಸಾಪ ಅಧ್ಯಕ್ಷ ರವಿ ಕಂಗಳ, ಸಾಹಿತಿಗಳಾದ ಸದಾಶಿವ ಮರಡಿ, ಉಮೇಶ ಜಾಧವ, ಹನಮಂತ ಹರದೊಳ್ಳಿ, ಶಂಕರ ಹೂಲಿ, ಬಿ.ಸಿ.ಪವಾಡಶೆಟ್ಟಿ, ಸುವರ್ಣ ಅಂಗಡಿ, ಬಸಮ್ಮಾ ನರಸಾಪೂರ, ಮಹಾಂತೇಶ ಈಳಗೇರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.