ನಿರಾಶ್ರಿತರಿಗೆ ಸೂಕ್ತ ಸೌಲಭ್ಯಕ್ಕೆ ಆಗ್ರಹಿಸಿ ರಸ್ತೆ ತಡೆ
Team Udayavani, Aug 10, 2019, 10:15 AM IST
ಮುಧೋಳ: ನಗರದಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ಬಿ. ತಿಮ್ಮಾಪುರ ನೇತೃತ್ವದಲ್ಲಿ ನಿರಾಶ್ರಿತರು ಪ್ರತಿಭಟನೆ ನಡೆಸಿದರು.
ಮುಧೋಳ: ಮುಧೋಳ ನಗರದ ಹಲವಾರು ವಾರ್ಡ್‌ಗಳಲ್ಲಿ ಪ್ರವಾಹಕ್ಕೆ ಸಿಲುಕಿ ಮನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದವರಿಗೆ ಸೂಕ್ತ ಸೌಲಭ್ಯ ನೀಡುವಂತೆ ಆಗ್ರಹಿಸಿ ಕುಟುಂಬಸ್ಥರು, ಸಾರ್ವಜನಿಕರು ರಸ್ತೆಗಿಳಿದು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ತಾಲೂಕಿನ ಎಲ್ಲ ಜನತೆ ಸಾಕಷ್ಟು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಪರಿಹಾರ ಕಲ್ಪಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು. ನಗರದಲ್ಲಿ ನಿರಾಶ್ರಿತರಿಗಾಗಿ ಸ್ಥಾಪಿಸಲಾಗಿರುವ ಗಂಜಿಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆಗಳಲ್ಲದೇ ಜನರು ಪರದಾಡುತ್ತಿದ್ದಾರೆ ಎಂದು ತಿಮ್ಮಾಪುರ ತಿಳಿಸಿದರು.
ಪ್ರತಿಭಟನೆಗೆ ಬೆಂಬಲಿಸಿ ಸತೀಶ ಬಂಡಿವಡ್ಡರ, ಎಚ್.ಎಮ್.ತುಳಸಿಗೇರಿ, ಉದಯ ಫಡತರೆ, ರವಿ ಕಾಂಬಳೆ, ಉದಯ ಕಾಂಬಳೆ, ಹೊಳಬಸು ತೇಲಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪಿಡಿ ವಿಜಯಕುಮಾರ ಮಕ್ಕಳಕಿ ಪ್ರತಿಭಟನಕಾರರ ಮನವೊಲಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.