Bagalkote: ಭೀಕರ ಅಪಘಾತ; ಜಾತ್ರೆಗೆ ಹೋದವರು ಮಸಣ ಸೇರಿದರು!
Team Udayavani, Jan 26, 2024, 11:17 AM IST
ಬಾಗಲಕೋಟೆ: ಜಿಲ್ಲೆಯ ಬಾದಾಮಿ ಬನಶಂಕರಿ ಜಾತ್ರೆ ಮುಗಿಸಿಕೊಂಡು ತಮ್ಮೂರಿಗೆ ತೆರಳುತ್ತಿದ್ದ ನಾಲ್ವರು ಭೀಕರ ಅಪಘಾತದಲ್ಲಿ ಮಸಣ ಸೇರಿದ ದಾರುಣ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ ಕ್ರಾಸ್ ಬಳಿ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ವಿಜಯಪುರ ತಾಲೂಕಿನ ಹೊನಗನಳ್ಳಿ ಗ್ರಾಮ ಓರ್ವ ಮಹಿಳೆ ಹಾಗೂ ನಾಲ್ವರು ಯುವಕರು, ಗುರುವಾರ ಸಂಜೆ ಬನಶಂಕರಿ ಜಾತ್ರೆಗೆ ಬಂದಿದ್ದರು. ದೇವಿಯ ರಥೋತ್ಸವ ಹಾಗೂ ರಾತ್ರಿ ನಾಟಕ ನೋಡಿಕೊಂಡು, ಸಂಭ್ರಮದ ಜಾತ್ರೆ ಮಾಡಿದ್ದರು. ಗುರುವಾರ ಮಧ್ಯರಾತ್ರಿ ಬಾದಾಯಿಂದ ಹೊರಟಿದ್ದರು. ಶುಕ್ರವಾರ ಬೆಳಗಿನ ಜಾವ ಸುನಗ ಕ್ರಾಸ್ ಬಳಿ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು, ಕಬ್ಬಿನ ಟ್ರ್ಯಾಕ್ಟರ್ ನಡಿ ಸಿಲುಕಿದೆ. ಮೃತ ದೇಹಗಳನ್ನು ಹೊರ ತಗೆಯಲು ಜೆಸಿಬಿ ಯಂತ್ರ ಬಳಸಬೇಕಾಯಿತು.
ಮೃತರನ್ನು ವಿಜಯಪುರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಕಾರು ಚಾಲಕ ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ, (34), ಕಾಮಾಕ್ಷಿ ಬಡಿಗೇರ (35), ತುಕಾರಾಮ್ ತಳೇವಾಡ (30) ಎಂದು ಗುರುತಿಸಲಾಗಿದೆ.
ಘಟನೆ ಬೆನ್ನಲ್ಲೆ ಸ್ಥಳಕ್ಕೆ ಬಾಗಲಕೋಟೆ ಎಸ್.ಪಿ. ಅಮರನಾಥ ರೆಡ್ಡಿ ಭೇಟಿ ನೀಡಿದ್ದು, ಜೆಸಿಬಿ ಮೂಲಕ ಕಬ್ಬು ತೆರವುಗೊಳಿಸಿ ಕಾರು ಹೊರ ತೆಗೆಯಲಾಯಿತು.
ಮೃತ ದೇಹಗಳನ್ನು ಬೀಳಗಿ ತಾಲೂಕಾಸ್ಪತ್ರೆಗೆ ಶವಪರೀಕ್ಷೆಗೆ ಕೊಂಡೊಯ್ಯಲಾಯಿತು. ಸ್ಥಳದಲ್ಲಿ ಮೃತರ ಸಂಭಂಧಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ
MUST WATCH
ಹೊಸ ಸೇರ್ಪಡೆ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
Malpe ಬೀಚ್ ಸ್ವಚ್ಛತೆ: 3 ದಿನದಲ್ಲಿ 26 ಲೋಡ್ ಕಸ ಸಂಗ್ರಹ
Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.