ಪ್ರಕೃತಿ ವಿಕೋಪ ಪರಿಹಾರಕ್ಕೆ 75 ಕೋಟಿ ಬಿಡುಗಡೆ: ಜಿಲ್ಲಾಧಿಕಾರಿ ರಾಮಚಂದ್ರನ್
Team Udayavani, Aug 21, 2019, 10:30 AM IST
ಬಾಗಲಕೋಟೆ: ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಮಾತನಾಡಿದರು.
ಬಾಗಲಕೋಟೆ: ಪ್ರಕೃತಿ ವಿಕೋಪದಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, ಸಂತ್ರಸ್ತರಿಗೆ ಪರಿಹಾರ ನೀಡಲು ಸರಕಾರದಿಂದ ಈವರೆಗೆ ಒಟ್ಟು 75 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ವಿವಿಧ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಮೊದಲು 10 ಕೋಟಿ, ಸೋಮವಾರ 25 ಕೋಟಿ ಹಾಗೂ ಮಂಗಳವಾರ 40 ಕೋಟಿ ಸೇರಿ ಒಟ್ಟು 75 ಕೋಟಿ ರೂ. ಜಿಲ್ಲೆಗೆ ಬಿಡುಗಡೆಯಾಗಿದೆ ಎಂದರು.
ಸೋಮವಾರ ಜಿಲ್ಲೆಯ ಸಂತ್ರಸ್ತರಿಗೆ ತಲಾ 10 ಸಾವಿರ ರೂ.ಗಳಂತೆ ಆರ್‌ಟಿಜಿಎಸ್ ಮೂಲಕ ನೇರವಾಗಿ 8500 ಜನ ಸಂತ್ರಸ್ತರ ಬ್ಯಾಂಕ್ ಖಾತೆಗಳಿಗೆ 8.5 ಕೋಟಿ ರೂ. ಜಮಾ ಮಾಡಲಾಗಿದೆ. ನಾಳೆ ಪುನಃ 15 ಸಾವಿರ ಹಾಗೂ ಇನ್ನೇರಡು ದಿನದಲ್ಲಿ ಮತ್ತೆ 15 ಸಾವಿರ ಸೇರಿದಂತೆ 30 ಸಾವಿರ ಸಂತ್ರಸ್ತರಿಗೆ ಜಮಾ ಮಾಡಲಾಗುವುದು ಎಂದರು.
ಸಂಪೂರ್ಣ ಪಾರದರ್ಶಕತೆ: ಪ್ರವಾಹದಿಂದ ಜಿಲ್ಲೆಯ ಸಂತ್ರಸ್ತರ ಬದುಕೇ ತಲ್ಲಣಗೊಂಡ ಹಿನ್ನಲೆಯಲ್ಲಿ ಪ್ರವಾಹ ಪರಿಹಾರವನ್ನು ನುರಿತ ತಂಡಗಳ ಮುಖಾಂತರ ನೇರವಾಗಿ ಆಯಾ ಸಂತ್ರಸ್ತರ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್ ಮೂಲಕ ಜಮಾ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕಾರ್ಯವನ್ನು ಪಾರದರ್ಶಕವಾಗಿ ಮಾಡಲಾಗುತ್ತಿದೆ ಎಂದರು.
ತಾತ್ಕಾಲಿಕ ಶೆಡ್ ನಿರ್ಮಾಣ: ಪ್ರವಾಹದಿಂದ ಸಂಪೂರ್ಣವಾಗಿ ಹಾನಿಗೊಳಗಾಗಿರುವ ಮನೆಗಳ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿ ಕೊಡಲಾಗುತ್ತಿದೆ. ಲೋಕೋಪಯೋಗಿ, ನಿರ್ಮಿತಿ ಕೇಂದ್ರ ಹಾಗೂ ಭೂಸೇನಾ ನಿಗಮದಿಂದ ಜಂಟಿಯಾಗಿ ತಾತ್ಕಾಲಿಕ ಶೆಡ್ ನಿರ್ಮಿಸುವ ಕಾರ್ಯ ಮಾಡಲಾಗುತ್ತದೆ. ಸಂಪೂರ್ಣ ಮನೆ ಹಾಳಾಗಿರುವ ಹಾಗೂ ತಾತ್ಕಾಲಿಕ ಶೆಡ್‌ಗಳಲ್ಲಿ ವಾಸಿಸುವ ಸಂತ್ರಸ್ತರಿಗೆ ಗರಿಷ್ಠ 10 ತಿಂಗಳ ಅವಧಿಗೆ ಸೀಮಿತಗೊಳಿಸಿ ಮಾಸಿಕ 5 ಸಾವಿರ ರೂ.ಗಳಂತೆ ಬಾಡಿಗೆ ಮೊತ್ತ ನೀಡಲಾಗುವುದು ಎಂದರು.
ಪಟ್ಟದಕಲ್ಲ ಸ್ಥಳಾತರಕ್ಕೆ ಒತ್ತು: ಪ್ರವಾಹದಿಂದ ತತ್ತರಿಸಿದ ಐತಿಹಾಸಿಕ ಸ್ಮಾರಕಗಳ ತಾಣವಾದ ಪಟ್ಟದಕಲ್ಲು ಗ್ರಾಮವನ್ನು ಸ್ಥಳಾಂತರ ಮಾಡಬೇಕಿದ್ದು, ಈ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ಪ್ರಾಣಹಾನಿ ಪರಿಹಾರ ವಿತರಣೆ: ಪ್ರವಾಹದಿಂದ ಇಲ್ಲಿಯವರೆಗೆ 3 ಜನ ಮೃತಪಟ್ಟಿದ್ದು, ತಲಾ 5 ಲಕ್ಷ ರೂ.ಗಳಂತೆ ಒಟ್ಟು 15 ಲಕ್ಷ ರೂ.ಗಳ ಪರಿಹಾಧನ ನೀಡಲಾಗಿದೆ. 150 ಜಾನುವಾರುಗಳು ಸಹ ಮೃತಪಟ್ಟಿದ್ದು, ಒಟ್ಟು 5 ಲಕ್ಷ ಪರಿಹಾರ ಧನ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಪ್ರವಾಹದಿಂದ 24800 ಮನೆಗಳು ಹಾನಿಗೊಳಪಟ್ಟಿವೆ ಎಂದು ತಿಳಿಸಿದರು.
• ಮನೆ ಕಟ್ಟಿಕೊಳ್ಳಲು 5 ಲಕ್ಷ ;10 ತಿಂಗಳು ಬಾಡಿಗೆ ಹಣ
• ಸಂತ್ರಸ್ತರು ಎದೆಗುಂದಬೇಕಿಲ್ಲ
• ಪೂರ್ಣ ಬಿದ್ದ ಮನೆಗೆ 5 ಲಕ್ಷ ಪರಿಹಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.