Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ
Team Udayavani, Oct 26, 2024, 12:57 PM IST
ಬಾಗಲಕೋಟೆ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಸಾಗರಮಾಲಾ ಯೋಜನೆಯಡಿ ಪ್ರವಾಸೋದ್ಯಮಕ್ಕೆ ಪೂರಕವಾಗಿ ಮತ್ತು ಸ್ಥಳೀಯ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಜಲಸಾರಿಗೆ ಯೋಜನೆ ಕೈಗೊಳ್ಳಲಾಗುತ್ತಿದೆ.
ಉದ್ದೇಶಿತ ಯೋಜನಾ ಸ್ಥಳಗಳಾದ ವಿಜಯಪುರ ಜಿಲ್ಲೆಯ ಆಲಮಟ್ಟಿ, ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಹೆರಕಲ್ ಗ್ರಾಮದ ಬಳಿ ಉದ್ದೇಶಿತ ಯೋಜನೆಯನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಮ್ ರಾಯ್ ಪುರ ತಿಳಿಸಿದರು.
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಮತ್ತು ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳ ಕಾರ್ಯಸಾಧ್ಯತೆ, ಯೋಜನೆಯ ಭೂಸ್ವಾಧೀನ ಮತ್ತು ಜಲಸಾರಿಗೆ ಉಪಯುಕ್ತತೆ ಬಗ್ಗೆ ಪರಿಶೀಲನೆ ಹಾಗೂ ಆಲಮಟ್ಟಿ ಆಣೆಕಟ್ಟಿನ ಕೆಳಭಾಗದಲ್ಲಿರುವ 25 ಎಕರೆ ಜಮೀನಿನಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಮೀನು ಸಾಕಾಣಿಕೆ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿರುವ ಜಲಮಾರ್ಗದ ಮುಖಾಂತರ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಿದಲ್ಲಿ ಸ್ಥಳೀಯ ಜನರಿಗೆ ವಿವಿಧ ಆರ್ಥಿಕವಾಗಿ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ನದಿ ತೀರದಲ್ಲಿ ಜಲಮಾರ್ಗದ ಮುಖಾಂತರ ಪ್ರವಾಸೋದ್ಯಮವನ್ನು ಅಭಿವೃದ್ದಿಪಡಿಸಿದ್ದಲ್ಲಿ ಹೆಚ್ಚಿನ ಸಂಖ್ಯೆ ಪ್ರವಾಸಿಗರ ಗಮನ ಹೆಚ್ಚು ಸೆಳೆಯಬಹುದು. ಜೊತೆಗೆ ಈ ಯೋಜನೆಯಿಂದ ಸ್ಥಳೀಯ ಜನರು ವಿವಿಧ ಆರ್ಥಿಕ ಪ್ರಯೋಜನಗಳು ಪಡೆದುಕೊಳ್ಳಬಹುದು ಎಂದರು.
ಈ ಯೋಜನೆಯನ್ನು ಅಭಿವೃದ್ಧಿಪಡಿಸಿದಲ್ಲಿ ಪ್ರವಾಸಿಗರು ಮತ್ತು ಸುತ್ತಮುತ್ತ ಪ್ರದೇಶದ ನಿವಾಸಿಗಳಿಗೆ ನೀರು ಆಧಾರಿತ ಕ್ರೀಡೆಗಳನ್ನು ಅನುಭವಿಸುವ ಅವಕಾಶಗಳನ್ನು ಒದಗಿಸಿ ಪ್ರವಾಸೋದ್ಯಮ ಚಟುವಟಿಕೆಗಳು ಅಭಿವೃದ್ಧಿಯಾಗಲಿದೆ ಜಯರಾಮ್ ರಾಯ್ ಪುರ ಅವರು ತಿಳಿಸಿದರು.
ಈ ಪ್ರದೇಶದಲ್ಲಿ ದೋಣಿ/ನೌಕೆ ನಿರ್ಮಾಣ, ಬೋಟ್ ಯಾರ್ಡ್‌ಗಳು ಹಾಗೂ ಸಂಬಂಧಿತ ಉಪಕರಣಗಳ ತಯಾರಿಕೆ ಮುಂತಾದ ಇತರ ಬೆಂಬಲದೊಂದಿಗೆ ಉದ್ಯಮ ತೆರೆಯುವ ಸಾಮರ್ಥ್ಯವನ್ನು ಅಭಿವೃದ್ಧಿ ಪಡಿಸುವಿಕೆಯಲ್ಲಿ ನೆರವಾಗಲಿದೆ ಎಂದು ತಿಳಿಸಿದರು.
ಸುತ್ತಮುತ್ತಲಿನ ಜಿಲ್ಲೆಯಲ್ಲಿರುವ ಪ್ರವಾಸ ತಾಣಗಳು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿದ್ದು, ಜಲಮಾರ್ಗದ ಅಭಿವೃದ್ಧಿಗೆ ಮೂಲಸೌಕರ್ಯ ಒದಗಿಸಿದ್ದಲ್ಲಿ ಪ್ರತಿದಿನ ಹೆಚ್ಚಿನ ಸಂಖ್ಯೆ ಪ್ರವಾಸಿಗರನ್ನು ಆಕರ್ಷಿಸಿ ಸರ್ಕಾರಕ್ಕೆ ಆದಾಯವನ್ನು ಗಳಿಸಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತ ಅಧೀಕ್ಷಕ ಇಂಜಿನಿಯರ್ ಹಿರೇಗೌಡರ, ಕಾರ್ಯಪಾಲಕ ಇಂಜಿನಿಯರ್ ದೊಡ್ಡಮನಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಲವಾದಿ, ಕರ್ನಾಟಕ ಜಲಸಾರಿಗೆ ಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪಾಂಡುರಂಗ, ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.