2ರಿಂದ ಸಂಕಲ್ಪ ಯಾತ್ರೆ
ಪ್ರತಿದಿನ ವಿಧಾನಸಭಾ ಮತಕ್ಷೇತ್ರದಲ್ಲಿ 5 ರಿಂದ 15ಕಿ.ಮೀ.ಪಾದಯಾತ್ರೆ
Team Udayavani, Sep 29, 2019, 10:28 AM IST
ಬಾಗಲಕೋಟೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 150 ಜನ್ಮದಿನೋತ್ಸವದ ಪ್ರಯುಕ್ತ ಜಿಲ್ಲೆಯಲ್ಲಿ ಪ್ರತಿದಿನ ವಿಧಾನಸಭಾ ಮತಕ್ಷೇತ್ರದಲ್ಲಿ 5 ರಿಂದ 15 ಕಿ.ಮೀ.ವರೆಗೆ ಪಾದಯಾತ್ರೆ ಮೂಲಕ ಸಂಕಲ್ಪ ಯಾತ್ರೆ ನಡೆಯಲಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
ನಗರದ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 2ರಿಂದ ಜನವರಿ 30ರವರೆಗೆ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 150 ಕಿ.ಮೀ.ಈ ಯಾತ್ರೆ ಸಂಚರಿಸಲಿದೆ. ಪ್ರತಿಯೊಂದು ವಿಧಾನಸಭೆ ಕ್ಷೇತ್ರದಲ್ಲಿ ಆಯಾ ಕ್ಷೇತ್ರದ ಶಾಸಕರು, ಜನಪ್ರತಿನಿ ಗಳು, ಮುಖಂಡರು ಭಾಗವಹಿಸಲಿದ್ದಾರೆ. ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಿಂದ ಸಂಕಲ್ಪ ಯಾತ್ರೆ ಆರಂಭವಾಗುತ್ತದೆ.
ಬಿಜೆಪಿ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿದ್ದು ಸವದಿ ಮಾತನಾಡಿ, ಸಂಕಲ್ಪ ಯಾತ್ರೆ ಗ್ರಾಮೀಣ ಪ್ರದೇಶದಲ್ಲಿ ಸಂಚರಿಸುವ ಸಂದರ್ಭದಲ್ಲಿ ಮಹಾತ್ಮ ಗಾಂಧಿಧೀಜಿಯವರ ಕನಸು, ಆದರ್ಶ, ಮತ್ತು ಸತ್ಯ, ಅಹಿಂಸೆ, ಶಾಂತಿಯಿಂದ ದೇಶಕ್ಕೆ ಸ್ವಾತಂತ್ರ್ಯ ನೀಡಿದ ಮಹಾನ್ ಪುರುಷನ ಕುರಿತು ಜನರಿಗೆ ಮುಟ್ಟಿಸುವ ಕೆಲಸ ನಡೆಯಲಿದೆ. ಗ್ರಾಮ ಪಂಚಾಯತ್ ಮಟ್ಟದಿಂದ ಸಂಸತ್ತಿನವರೆಗೆ ಗಾಂ ಧೀಜಿಯವರ ಆದರ್ಶದಂತೆ ಆಡಳಿತ ನಡೆಯುವ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಕಲ್ಪ ಯಾತ್ರೆ ನಡೆಯಲಿದೆ ಎಂದು ಹೇಳಿದರು.
ಭಾರತದಲ್ಲಿಯೂ ನಿಯಂತ್ರಣ ಆಗಬೇಕಾಗಿದೆ. ಜನಸಂಖ್ಯೆ ಹೆಚ್ಚಾಗುತ್ತಾ ಹೋದರೆ ಆಹಾರ, ಕುಡಿಯುವ, ವಸತಿ ಬಗ್ಗೆ ಹೆಚ್ಚು ತೊಂದರೆ ಅನುಭವಿಸುವ ಕಾಲ ಬರಲಿದೆ. ಜನಸಂಖ್ಯೆ ನಿಯಂತ್ರಣ ಕುರಿತು ಸಹ ಜನರಿಗೆ ತಿಳಿವಳಿಕೆ ನೀಡಲಾಗುವುದು ಎಂದರು. ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಈಗಾಗಲೇ ಕೇಂದ್ರ ಸಚಿವ ಜಾವಡೇಕರ ಪುಣೆಯಲ್ಲಿ ಚಾಲನೆ ನೀಡಿದ್ದಾರೆ.
ಅದರಂತೆ ನಿಯಗಳನ್ನು ಮೀರಿ ಪ್ಲಾಸ್ಟಿಕ್ ಉತ್ಪಾದನೆ ಮಾಡುವ ಕಾರ್ಖಾನೆಗಳನ್ನು ಬಂದ್ ಮಾಡಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಜಲಶಕ್ತಿಯನ್ನು ಉಳಿಸಲು ನೀರಿನ ಸದ್ಭಳಕೆಯನ್ನು ದೇಶದ ನಾಗರಿಕರು ಮಾಡಬೇಕು ಎಂಬುದರ ಕುರಿತು ಅರಿವು ಮೂಡಿಸಲಾಗುವುದು ಎಂದು ಹೇಳಿದರು. ಜಮಖಂಡಿ ಪ್ರತ್ಯೇಕ ಜಿಲ್ಲೆಯಾದರೆ ಸ್ವಾಗತ ಮಾಡುತ್ತೇನೆ. ಇದಕ್ಕೆ ನಡೆಯುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸುತ್ತೇನೆ. ಜಿಲ್ಲೆಯಾದರೆ ಇನ್ನಷ್ಟು ಅಭಿವೃದ್ಧಿಯಾಗಲು ಸಾಧ್ಯವಿದೆ. ಜಿಲ್ಲೆ ವಿಂಗಡಣೆ ಕುರಿತು ಮುಖ್ಯಮಂತ್ರಿಗಳು ಪ್ರಕ್ರಿಯೆ ಆರಂಭಿಸಿದರೆ ಭೇಟಿಯಾಗಿ ಚರ್ಚೆ ನಡೆಸುವುದಾಗಿ ಎಂದರು.
ಶಾಸಕ ಡಾ| ವೀರಣ್ಣ ಚರಂತಿಮಠ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷ ಗಟ್ಟಿಯಾಗಿದೆ. ಉಳಿದ ಪಕ್ಷಕ್ಕಿಂತ ನಮ್ಮ ಪಕ್ಷದಲ್ಲಿ ಗಟ್ಟಿಯಾಗಿರುವ ನಾಯಕರಿದ್ದಾರೆ. ಹೊಸ ಮೋಟಾರು ಕಾಯ್ದೆ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಹೆಲ್ಮೆಟ್ ಹಾಕಿಕೊಂಡು ಪ್ರತಿಯೊಬ್ಬರು ಬೈಕ್ ಸವಾರಿ ಮಾಡಬೇಕು ಎಂದು ಸಲಹೆ ನೀಡಿದರು.
ಮಾಜಿ ಶಾಸಕ ಪಿ.ಎಚ್.ಪೂಜಾರ, ಮಾಜಿ ವಿಧಾನ ಪರಿಷತ್ ಸದಸ್ಯ ನಾರಾಯಣಸಾ ಭಾಂಡಗೆ, ಬಿಟಿಡಿಎ ಮಾಜಿ ಅಧ್ಯಕ್ಷ ಜಿ.ಎನ್.ಪಾಟೀಲ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ
ರಬಕವಿ-ಬನಹಟ್ಟಿ: ಜಗದಾಳ ರೈತ ಬೆಳೆದ ಬಾಳೆಹಣ್ಣುಇರಾನ್ ದೇಶಕ್ಕೆ ರಫ್ತು!
ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ
Rabakavi: ರೈತರ ಬದುಕಿನ ರೊಟ್ಟಿಯನ್ನು ಕಾಂಗ್ರೆಸ್ ಕಸಿದುಕೊಳ್ಳುತ್ತಿದೆ: ಶಾಸಕ ಸಿದ್ದು ಸವದಿ
Rabkavi Banhatti: ಜಗದಾಳದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಪಗಡೆಯಾಟ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.