ನಾಳೆಯಿಂದ ಸಲೂನ್ ಬಂದ್
Team Udayavani, Jul 10, 2020, 3:18 PM IST
ಕೆರೂರ: ಹೋಬಳಿ ಸುತ್ತಮುತ್ತಲಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ನಾಗರಿಕರ ಹಿತದೃಷ್ಟಿಯಿಂದ ಜು.11ರಿಂದ ಸ್ವಯಂಪ್ರೇರಿತ ಲಾಕ್ ಡೌನ್ ಮೂಲಕ ವೃತ್ತಿ ಬಂದ್ ಮಾಡಲು ನಿರ್ಣಯಿಸಲಾಗಿದೆ ಎಂದು ಕ್ಷೌರಿಕ ಸಮಾಜದ ಅಧ್ಯಕ್ಷ ಮಲ್ಲು ಬೇಲೇರಿ (ಹಡಪದ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಗುರುವಾರ ಶಿವಶರಣ ಹಡಪದ ಅಪ್ಪಣ್ಣ ಸಮಾಜದ ಪ್ರಮುಖರು ಹಾಗೂ ಕ್ಷೌರಿಕ ವೃತ್ತಿ ನಿರತರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು ಯಾವುದೇ ಮದುವೆ ಮನೆಯವರಿಗೆ ಸೇವೆ ಮತ್ತು ಇತರೆ ಕಾರ್ಯಗಳಿದ್ದರೂ ಕ್ಷೌರಿಕ ವೃತ್ತಿ ಕಡ್ಡಾಯ ನಿರ್ಬಂಧಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸುವ ಜೊತೆಗೆ ಪ್ರತಿಜ್ಞೆ ಮಾಡುವ ಮೂಲಕ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ವೃತ್ತಿ ಸ್ವಯಂ ನಿರ್ಬಂಧ ಜು.19ರವರೆಗೆ ಎಂದು ನಿರ್ಣಯಿಸಲಾಗಿದ್ದು ಸಲೂನ್ ಮಾಲೀಕರು ಯಾವುದೇ ಆಮಿಷಕ್ಕೆ ಒಳಗಾಗದೇ ಸಂಘದ ನಿರ್ಣಯ ಕಡ್ಡಾಯವಾಗಿ ಪಾಲಿಸಬೇಕು. ಮುಂಬರುವ ಬೆಳವಣಿಗೆ ಗಮನಿಸಿ ನಿರ್ಬಂಧ ತೆರವು ನಿರ್ಧರಿಸಲಾಗುವುದು. ಅಲ್ಲಿಯವರೆಗೆ ಗ್ರಾಹಕರು ಸಹಕರಿಸುವಂತೆ ಉಪಾಧ್ಯಕ್ಷ ಮಳಿಯಪ್ಪ ಕೇಸನೂರ ವಿನಂತಿಸಿದ್ದಾರೆ.
ಸಭೆಯಲ್ಲಿ ಉಪಾಧ್ಯಕ್ಷ ಮಳಿಯಪ್ಪ ಕೇಸನೂರ, ಎಸ್.ಬಿ. ಹಡಪದ, ಎಸ್.ಬಿ. ಕೇಸನೂರ, ಎಸ್.ಆರ್. ಕೇಸನೂರ, ಹನಮಂತ ಹಡಪದ, ಚೇತನಕುಮಾರ ಹಡಪದ, ಜಿ.ಎಂ. ಕೇಸನೂರ, ಮುದ್ದೇಶ ಹಡಪದ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.