ಸ್ವಯಂ ಬೆಳೆ ಸಮೀಕ್ಷೆ ಕಾರ್ಯಕ್ಕೆ ಕಳಸದ ಚಾಲನೆ
ಬೆಳೆ ಸಮೀಕ್ಷೆಗೆ ಮೊಬೈಲ್ ಆ್ಯಪ್ ಬಿಡುಗಡೆ ; ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿಗಳ ಆಯ್ಕೆ
Team Udayavani, Jun 29, 2022, 1:16 PM IST
ಬಾಗಲಕೋಟೆ: ಪ್ರಸಕ್ತ ಮುಂಗಾರು ಹಂಗಾಮಿನ ಬೆಳೆ ವಿವರವನ್ನು ದಾಖಲಿಸಲು ಮೊಬೈಲ್ ಆ್ಯಪ್ ಮೂಲಕ ರೈತರಿಂದಲೇ ಸ್ವಯಂ ಬೆಳೆ ಸಮೀಕ್ಷೆ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಚಾಲನೆ ನೀಡಿದರು.
ಜಿಲ್ಲೆಯ ಬಾದಾಮಿ ತಾಲೂಕಿನ ಆಡಗಲ್ಲ ಗ್ರಾಮದ ರೈತ ಕೋನಪ್ಪ ತಗಳನ್ನವರ ಸರ್ವೆ ನಂ.143/1, 155/1 ಜಮೀನಿನಲ್ಲಿ ಬೆಳೆ ಸಮೀಕ್ಷೆಯನ್ನು ಸ್ವಯಂ ರೈತರಿಂದಲೇ ಮಾಡಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಬೆಳೆ ಸಮೀಕ್ಷೆಗಾಗಿಯೇ ಮೊಬೈಲ್ ಆ್ಯಪ್ ಬಿಡುಗಡೆಗೊಳಿಸಿದ್ದು, ಅದನ್ನು ಬಳಸಿಕೊಂಡು ಸ್ವತಂತ್ರವಾಗಿ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಬಹುದಾಗಿದೆ ಎಂದು ತಿಳಿಸಿದರು.
ಬೆಳೆ ಸಮೀಕ್ಷೆಯ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆ ಅಡಿ ಸರ್ವೆ ನಂಬರ್ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಳನ್ನು ಕೈಗೊಳ್ಳಲು ಸರ್ವೆ ನಂಬರ್ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಸಾದ್ಯವಾಗುತ್ತದೆ ಎಂದರು.
ಅಲ್ಲದೇ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕಾಗಿ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಬಳಸಬಹುದಾಗಿದೆ. ಜಿಲ್ಲೆಯ ರೈತ ಬಾಂಧವರು ತಪ್ಪದೇ ತಮ್ಮ ಜಮೀನಲ್ಲಿರುವ ಬೆಳೆಗಳ ವಿವರವನ್ನು ತಪ್ಪದೇ ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ತಮ್ಮ ಹಳ್ಳಿಯ ರೈತ ಸಮುದಾಯದ ಬೆಳೆ ಮಾಹಿತಿ ದಾಖಲಿಸಬಹುದು. ಬೆಳೆ ವಿವರ ದಾಖಲಾಗದಿದ್ದಲ್ಲಿ ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕಿ ಡಾ| ಚೇತನಾ ಪಾಟೀಲ ಮಾತನಾಡಿ ಜಿಲ್ಲೆಯ ರೈತ ಬಾಂಧವರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಮುಂಗಾರು ರೈತರ ಬೆಳೆ ಸಮೀಕ್ಷೆ 2022-23 ಎಂಬ ಮೊಬೈಲ್ ಆ್ಯಪ್ ಗೂಗಲ್ ಪ್ಲೇಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಂಡು ಆಧಾರ ಕ್ಯೂಆರ್ ಕೋಡ್‌ನ್ನು ಸ್ಕ್ಯಾನ್ ಮಾಡಿ ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ಮೊಬೈಲ್ ಸಂಖ್ಯೆಗೆ ಒಟಿಪಿ ಬರಲಿದೆ. ಒಟಿಪಿಯನ್ನು ದಾಖಲಿಸಿ ಮೊಬೈಲ್ ಆ್ಯಪ್‌ನಲ್ಲಿ ಮೊದಲು ಮಾಸ್ಟರ್ ವಿವರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು, ನಂತರ ಗ್ರಾಮದ ಪಹಣಿ ಮತ್ತು ಜಮೀನಿನ ವಿವರ ಅಂದರೆ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ, ಸರ್ವೇ ನಂಬರ್, ಮಾಲೀಕರ ಹೆಸರು ಆಯ್ಕೆಮಾಡಿ ಕ್ಷೇತ್ರವನ್ನು ನಮೂದಿಸಿ ಸರ್ವೇ ನಂಬರಿನ ಗಡಿರೇಖೆ ಒಳಗೆ ನಿಂತು ತಾವು ಬೆಳೆದ ಪ್ರತಿ ಬೆಳೆಗಳ ವಿವರ ದಾಖಲಿಸಿ ಪ್ರತಿ ಬೆಳೆಯ 2 ಛಾಯಾ ಚಿತ್ರ ತೆಗೆದು ಅಪ್‌ಲೋಡ್ ಮಾಡಬೇಕು ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮದ ಖಾಸಗಿ ನಿವಾಸಿ (ಪಿ.ಆರ್), ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾ ಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಮತ್ತು ಟೋಲ್ ಫ್ರೀ ಸಂಖ್ಯೆ 8448447715ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೃಷಿ ಉಪನಿರ್ದೇಶಕ ಎಸ್.ಬಿ. ಕೊಂಗವಾಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.