ಸ್ವಾವಲಂಬಿ: ನಿಮ್ಮ ಜಮೀನಿನ ನಕಾಶೆ ನಿಮ್ಮ ಕೈಯಲ್ಲಿ

ಅಂತಿಮ ಅನುಮೋದನೆಗೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಗೆ ಕಳುಹಿಸಲಾಗುತ್ತಿತ್ತು

Team Udayavani, Oct 8, 2022, 5:45 PM IST

ಸ್ವಾವಲಂಬಿ: ನಿಮ್ಮ ಜಮೀನಿನ ನಕಾಶೆ ನಿಮ್ಮ ಕೈಯಲ್ಲಿ

ಬಾಗಲಕೋಟೆ: ರೈತರು ತಮ್ಮ ಜಮೀನಿನ ನಕ್ಷೆಯನ್ನು ತಾವೇ ತಯಾರಿಸಿಕೊಳ್ಳಲು ಸ್ವಾವಲಂಬಿ ಆ್ಯಪ್‌ ಮೂಲಕ ಅವಕಾಶ ಕಲ್ಪಿಸಿದ್ದು, ಇದು ದೇಶದಲ್ಲಿಯೇ ಮೊದಲ ಬಾರಿ ಜಾರಿಗೆ ತಂದ ಮೊದಲ ರಾಜ್ಯವಾಗಿದೆ ಎಂದು ಭೂದಾಖಲೆಗಳ ಉಪ ನಿರ್ದೇಶಕ ಮಹಾಂತೇಶ ಮುಳಗುಂದ ತಿಳಿಸಿದ್ದಾರೆ.

ಮುಟೇನ್‌ ಪೂರ್ವ ನಕ್ಷೆ ಯೋಜನೆಯು ಕರ್ನಾಟಕ ರಾಜ್ಯಾದ್ಯಂತ ಪ್ರಾರಂಭವಾದಾಗಿನಿಂದ ಜನಸಾಮಾನ್ಯರಿಗೆ ತಮ್ಮ ಜಮೀನುಗಳ ಪೈಕಿ ಖರೀದಿ, ವಾಟ್ನಿ, ದಾನ ಪತ್ರ ಇತ್ಯಾದಿ ಹಕ್ಕು ಬದಲಾವಣೆ ವ್ಯವಹಾರಗಳಲ್ಲಿ ವ್ಯಾಜ್ಯ ರಹಿತ ಸೇವೆ ಸಲ್ಲಿಸುವಲ್ಲಿ ಭೂಮಾಪನ ಇಲಾಖೆಯ ಪಾತ್ರ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ತಂತ್ರಜ್ಞಾನ ಬಳಸಿ ಸಾಕಷ್ಟು ಮಾರ್ಪಾಡು ಮಾಡಿ ಸಾರ್ವಜನಿಕರ ಸೇವೆ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಈ ತೊಂದರೆ ನೀಗಿಸುವ ನಿಟ್ಟಿನಲ್ಲಿ ಸ್ವಾವಲಂಬಿ ಅಪ್ಲಿಕೇಷನ್‌ ರೂಪಿಸಲಾಗಿದೆ.

ಮೂಲ ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ ಪೋಡಿ, ಭೂ ಪರಿವರ್ತನಾ ನಕ್ಷೆಗಾಗಿ ಸಾರ್ವಜನಿಕರು ಕಚೇರಿ ಅಲೆಯುವ ಜಂಜಾಟ ಇನ್ನು ಮುಂದೆ ತಪ್ಪಲಿದೆ. ಹೌದು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಸಾರ್ವಜನಿಕರಿಗೆ ವಿಳಂಬವಿಲ್ಲದೆ ಸೇವೆ ಕಲ್ಪಿಸುವುದಕ್ಕೆ ಸ್ವಾವಲಂಬಿ ವೆಬ್‌ ಸೈಟ್‌ ಆರಂಭಿಸಲಾಗಿದೆ. ಈ ವೆಬ್‌ಸೈಟ್‌ ಮೂಲಕವೇ ಭೂಮಿಯ ಮಾಲಿಕರು ಜಮೀನಿನ 11ಇ ನಕ್ಷೆ, ಪೋಡಿ, ಭೂ ಪರಿವರ್ತನಾ ನಕ್ಷೆ ಇತ್ಯಾದಿ ಪಡೆಯಲು ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ವೆಬ್‌ಸೈಟ್‌ ಮೂಲಕ ಫೀ ಭರಣ ಮಾಡಿ ಅರ್ಜಿ ಸಲ್ಲಿಸಿದಲ್ಲಿ, ಅರ್ಜಿದಾರರು ಕೋರಿರುವ ಹಿಸ್ಸೆಗೆ ಸಂಬಂ ಸಿದ ನಕ್ಷೆಯನ್ನು ಇಲಾಖೆ ಮುಖಾಂತರ ಅಪ್‌ಲೋಡ್‌ ಮಾಡಲಾಗುತ್ತದೆ. ಅರ್ಜಿದಾರರು ಸದರಿ ನಕ್ಷೆಯನ್ನು ಡೌನ್‌ಲೋಡ್‌ ಮಾಡಿ, ಮಾರಾಟವಾಗಬೇಕಾದ ಭೂಮಿಯನ್ನು ನಿರ್ದಿಷ್ಟ ಅಳತೆ ಗುರುತಿಸಿ ಮರು ಅಪ್‌ ಲೋಡ್‌ ಮಾಡಬೇಕು.

ತದನಂತರ ಇಲಾಖೆಯು ಅದನ್ನು ಪರಿಶೀಲಿಸಿದ ಬಳಿಕ ಅನುಮೋದಿಸಿ ದೃಢೀಕರಿಸಿ ಮತ್ತೇ ಅಪ್‌ಲೋಡ್‌ ಮಾಡಲಾಗುತ್ತದೆ. ಸದರಿ ನಕ್ಷೆಯನ್ನು ಆನ್‌ಲೈನ್‌ನಲ್ಲಿ ಎಲ್ಲಿಬೇಕಾದರೂ ಪ್ರಿಂಟ್‌ ಪಡೆದು ಮಾರಾಟಕ್ಕೆ ನೋಂದಣಿ ಮಾಡಿಕೊಡಬಹುದು. ಈ ಪ್ರಕ್ರಿಯೆ ಮುಗಿದ ಬಳಿಕ ಪ್ರತ್ಯೇಕವಾಗಿ ಪಹಣಿಗಳು ಸೃಜಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ಮೊದಲು ನಾಡಕಚೇರಿಗೆ ಹೋಗಿ ಜಮೀನಿನ 11ಇ, ಪೋಡಿ ಕಾರ್ಯ ಸೇರಿ ಇತ್ಯಾದಿ ಕಾರ್ಯಗಳಿಗೆ ಅರ್ಜಿ ಸಲ್ಲಿಸಬೇಕಾಗಿತ್ತು. ಆ ಅರ್ಜಿಯು ನಾಡ ಕಛೇರಿಯಲ್ಲಿ ಪರಿಶೀಲನೆಗೊಳಪಟ್ಟು ಸರತಿಯಲ್ಲಿ ಬೀಳುತ್ತಿತ್ತು. ಸರತಿಯಿಂದ ಭೂಮಾಪಕರ ಬಳಿ ಹೋಗುತ್ತಿತ್ತು. ಭೂಮಾಪಕರು ಜಮೀನನ್ನು ಪರಿಸೀಲಿಸಿ ನಕ್ಷೆ ಗುರುತಿಸಿ ಅಪ್‌ಲೋಡ್‌ ಮಾಡುತ್ತಿದ್ದರು. ಅಪ್‌ ಲೋಡ್‌ ಆದ ದಾಖಲೆಯನ್ನು ತಪಾಸಕರ ಮೂಲಕ ಪರಿಶೀಲಿಸಿ ಬಳಿಕ ಅಂತಿಮ ಅನುಮೋದನೆಗೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಗೆ ಕಳುಹಿಸಲಾಗುತ್ತಿತ್ತು. ಆದರೆ ಸ್ವಾವಲಂಬಿ ವೆಬ್‌ ಸೈಟ್‌ ಮೂಲಕ ಸಲ್ಲಿಕೆಯಾಗುವ ಅರ್ಜಿ ಅತೀ ಕಡಿಮೆ ಅವ ಯಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ. ಕಡ್ಡಾಯವಾಗಿ ಜಮೀನಿನ ಆರ್‌ ಟಿಸಿ ನಂಬರ್‌ ಇದ್ದರೆ ಮಾತ್ರ ಅರ್ಜಿ ಮಾನ್ಯವಾಗುತ್ತದೆ. ಈ ಹೊಸ ಯೋಜನೆಯ ಲಾಭವನ್ನು ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಭೂದಾಖಲೆಗಳ ಉಪ ನಿರ್ದೇಶಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Sleep Champion; lady from Bangalore won Rs 9 lakh by sleeping

Sleep Champion; ನಿದ್ದೆ ಮಾಡಿ 9 ಲಕ್ಷ ರೂ ಗೆದ್ದ ಬೆಂಗಳೂರಿನ ಯುವತಿ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

10-mudhol

Mudhol: ಉದಯವಾಣಿ ಫಲಶೃತಿ; ಭವನ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Mangaluru: ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡಕ್ಕೆ ಸಮ್ಮಾನ

Mangaluru: ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡಕ್ಕೆ ಸಮ್ಮಾನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.