ಉರ್ದು ವಿಭಾಗದಲ್ಲಿ ಒಬ್ಬಳೇ ವಿದ್ಯಾರ್ಥಿನಿ!
ನನ್ನ ಗೆಳೆತಿಯರು ಬಂದಿಲ್ಲ. ಯಾಕೆ ಎಂದು ಕೇಳಿದರೆ ಈಗ ಎಲ್ಲ ಜಗಳ ಮುಗಿಲಿ ಎಂದು ಹೇಳುತ್ತಿದ್ದಾರೆ.
Team Udayavani, Feb 16, 2022, 6:01 PM IST
ಬಾಗಲಕೋಟೆ: ನಿತ್ಯ ನೂರಾರು ಮಕ್ಕಳು ಬರುತ್ತಿದ್ದ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಈಗ ಮಕ್ಕಳೇ ಬರುತ್ತಿಲ್ಲ. ಮಂಗಳವಾರ ಈ ಶಾಲೆಯ ಉರ್ದು ವಿಭಾಗದಲ್ಲಿ ಒಟ್ಟು 19 ವಿದ್ಯಾರ್ಥಿಗಳಿದ್ದು, ಮಂಗಳವಾರ ಜಬೀನ್ ಮಕಾನದಾರ ವಿದ್ಯಾರ್ಥಿನಿ ಮಾತ್ರ ಶಾಲೆಗೆ ಬಂದಿದ್ದಳು.
ನನ್ನ ಗೆಳೆತಿಯರು ಬಂದಿಲ್ಲ. ಯಾಕೆ ಎಂದು ಕೇಳಿದರೆ ಈಗ ಎಲ್ಲ ಜಗಳ ಮುಗಿಲಿ ಎಂದು ಹೇಳುತ್ತಿದ್ದಾರೆ. ಅದೆಲ್ಲ ನಮಗೆ ಬೇಡ. ನಾವು ಶಿಕ್ಷಣ ಕಲಿಯಬೇಕಷ್ಟೆ. ಅದಕ್ಕಾಗಿ ಎಲ್ಲರೂ ಶಾಲೆಗೆ ಬನ್ನಿ ಎಂದು ನಾನೂ ಕೇಳಿಕೊಂಡಿದ್ದೇನೆ ಎಂದಳು ಜಬೀನ್ ಮಕಾನದಾರ.
ಇದೇ ಶಾಲೆಯಲ್ಲಿ 8,9 ನೇ ತರಗತಿಗೂ ಕೂಡ ಪ್ರತಿಶತ ನೂರರಷ್ಟು ಉರ್ದು ಮಾಧ್ಯಮ ವಿದ್ಯಾರ್ಥಿನಿಯರು ಬರುತ್ತಿಲ್ಲ. ಕೆಲವರು ಹಿಜಾಬ್ ಧರಿಸಿಕೊಂಡು ಶಾಲೆವರೆಗೂ ಬಂದು ನಂತರ ಅದನ್ನು ತೆಗೆದು ಕೊಠಡಿಯೊಳಗೆ ಹೋಗುತ್ತಿದ್ದಾರೆ. ಇನ್ನೂ ಕೆಲವರು ಶಾಲೆ ಕಡೆ ತಿರುಗಿಯೂ ನೋಡುತ್ತಿಲ್ಲ.
ಡಿಡಿಪಿಐ ಶ್ರೀಶೈಲ ಎಸ್. ಬಿರಾದಾರ ಮಂಗಳವಾರ ಈ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳ ಜತೆ ಮಾತನಾಡಿ, ನಿಮ್ಮ ಸಹಪಾಠಿಗಳನ್ನು ಶಾಲೆಗೆ ಕರೆದುಕೊಂಡು ಬನ್ನಿ, ಯಾರೂ ಭಯ ಪಡುವ ಅವಶ್ಯಕತೆಯಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.