ಕುರಿ ಸಂತೆ ಬಂದ್‌: ವ್ಯಾಪಾರಸ್ಥರ ಪರದಾಟ


Team Udayavani, Dec 29, 2019, 11:27 AM IST

bk-tdy-1

ಅಮೀನಗಡ: ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಶನಿವಾರ ನಡೆಯಬೇಕಿದ್ದ ಕುರಿ ಸಂತೆ ಬಂದ್‌ ಮಾಡಿದ್ದರಿಂದ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ವ್ಯಾಪಾರಸ್ಥರು, ಕುರಿ ಮಾಲೀಕರು ಪರದಾಡುವಂತಾಯಿತು.

ರಾಜ್ಯಮಟ್ಟದಲ್ಲೇ ಹೆಸರುವಾಸಿಯಾಗಿರುವ, ಶತಮಾನ ಕಂಡ ಪಟ್ಟಣದ ಕುರಿ ಸಂತೆಯಲ್ಲಿ ಕಳೆದ ಶನಿವಾರ ಡಿ. 21ರಂದು ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ತಾಲೂಕು ಆಡಳಿತ ಮಂಡಳಿ ಹಾಗೂ ಪೊಲೀಸ್‌ ಇಲಾಖೆ ಒಂದು ದಿನದ ಮಟ್ಟಿಗೆ ಕುರಿ ಸಂತೆ ಬಂದ್‌ ಮಾಡಿದ ಹಿನ್ನೆಲೆಯಲ್ಲಿ ಮಾಹಿತಿ ಇಲ್ಲದೆ ಬಂದಿದ್ದ ರಾಜ್ಯದ ವಿವಿಧ ಭಾಗದ ವ್ಯಾಪರಸ್ಥರು ತೀವ್ರ ತೊಂದರೆ ಅನುಭವಿಸಿದರು.

ವ್ಯವಹಾರ ಸ್ಥಗಿತ: ಪ್ರತಿ ಶನಿವಾರ ಕೋಟ್ಯಂತರ ರೂ. ವ್ಯವಹಾರವಾಗುವ ಕುರಿ ಸಂತೆ ಮತ್ತು ದನದ ಸಂತೆ ಕ್ಷುಲಕ್ಕ ಕಾರಣಕ್ಕೆ ಬಂದ್‌ ಆದ ಹಿನ್ನೆಲೆಯಲ್ಲಿ ಶನಿವಾರ ಕುರಿ ಮತ್ತು ದನದ ಸಂತೆಯಲ್ಲಿ ಕೋಟ್ಯಂತರ ರೂ. ವ್ಯವಹಾರ ಸ್ಥಗಿತಗೊಂಡಿತ್ತು. ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ವ್ಯಾಪಾರಸ್ಥರು ಪಟ್ಟಣದ ಹೊರ ವಲಯದ ರಕ್ಕಸಗಿ, ಬೇವಿನಮಟ್ಟಿ, ಸೂಳೇಭಾವಿ ಸೇರಿದಂತೆ ವಿವಿಧ ರಸ್ತೆಯ ಪಕ್ಕದಲ್ಲಿ ನಿಂತು ಸಣ್ಣ ಪ್ರಮಾಣದಲ್ಲಿ ಸಂತೆ ಮಾಡಿದ್ದು ಕಂಡು ಬಂತು.ಅಷ್ಟೆ ಅಲ್ಲದೇ ದೂರದಿಂದ ಬಂದಿದ್ದ ವ್ಯಾಪಾರಸ್ಥರು ಸಂತೆ ಬಂದ್‌ ಮಾಡಿದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದರು.

ಬಿಕೋ ಎಂದ ಸಂತೆ: ಪ್ರತಿ ಶನಿವಾರ ಸಾವಿರಾರು ಜನರಿಂದ ತುಂಬಿ ತುಳುಕುತ್ತಿದ್ದ ಕುರಿ ಸಂತೆ ಮತ್ತು ದನದ ಸಂತೆ ಬಂದ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಸ್ತಬ್ಧವಾಗಿತ್ತು. ಅಷ್ಟೆ ಅಲ್ಲದೇ ನೂರಾರು ಜನರ ಹೋಟೆಲ್‌ಗ‌ಳು ಕೂಡಾ ಬಂದ್‌ ಆಗಿದ್ದವು. ಆದರೆ ದನದ ಸಂತೆಯಲ್ಲಿ ಕೆಲವು ಹೋಟೆಲ್‌ ಗಳು ತೆರೆದಿದ್ದವು. ಅಲ್ಲಿಯೂ ಕೂಡಾ ಸಂತೆ ಬಂದ್‌ ಮಾಡಿದ ನಂತರ ಕೆಲವು ಅಂಗಡಿಕಾರರ ತಿಂಡಿ ತಿನಿಸುಗಳು ಹಾಗೆ ಉಳಿದಿದೆ. ಇದರಿಂದ ಅವರ ಮುಖದಲ್ಲಿ ನಿರಾಸೆ ಭಾವ ಮೂಡಿತ್ತು. ಅಮೀನಗಡ ಪಟ್ಟಣದ ಕುರಿ ಸಂತೆಯಲ್ಲಿ ಹಿಂದಿನ ಶನಿವಾರ ಡಿ. 21ರಂದು ನಡೆದ ಕೆಲವು ಅಹಿತಕರ ಘಟನೆಯಿಂದ ಮುಂಜಾಗ್ರತವಾಗಿ ಶಾಂತಿ ಕಾಪಾಡಲು ಡಿ.

28ರಂದು ಶನಿವಾರ ಒಂದು ದಿನ ಮಾತ್ರ ಬಂದ ಆಗಿದ್ದ ಕುರಿ ಸಂತೆಯಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಹಾಗೂ ಸ್ವಚ್ಚತೆ ಮಾಡಿ ರಾಜ್ಯ ಹೆದ್ದಾರಿಯಲ್ಲಿ ವ್ಯಾಪಾರಸ್ಥರು ಯಾವುದೇ ಕಾರಣಕ್ಕೂ ನಿಲ್ಲದೇ ಒಳಗೆ ನಿಂತು ಸಂತೆ ಮಾಡುವ ಹಾಗೆ ವ್ಯವಸ್ಥೆ ಮಾಡಿ ಪಟ್ಟಣದಲ್ಲಿ ಮೊದಲು ನಡೆಯುತ್ತಿದ್ದ ಸ್ಥಳದಲ್ಲಿಯೇ ಕುರಿ ಸಂತೆ ಮುಂದುವರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.