ಸರ್ಕಾರ ನೇಕಾರರನ್ನು ಕಡೆಗಣಿಸುತ್ತಿದೆ : ಶಿವಲಿಂಗ ಟಿರಕಿ


Team Udayavani, Jul 3, 2022, 7:46 PM IST

ಸರ್ಕಾರ ನೇಕಾರರನ್ನು ಕಡೆಗಣಿಸುತ್ತಿದೆ : ಶಿವಲಿಂಗ ಟಿರಕಿ

ರಬಕವಿ-ಬನಹಟ್ಟಿ: ನೇಕಾರರಲ್ಲಿ ತಾರತಮ್ಯವನ್ನುಂಟು ಮಾಡುತ್ತಿರುವ ಮತ್ತು ನೇಕಾರರನ್ನು ಕಡೆಗಣಿಸುತ್ತಿರುವ ಸರ್ಕಾರದ ನಡೆಯನ್ನು ಖಂಡಿಸುತ್ತ ಇದೇ 6 ರಂದು ಹುಬ್ಬಳ್ಳಿಯಲ್ಲಿರುವ ಜವಳಿ ಸಚಿವರ ಮನೆಗೆ ಮುತ್ತಿಗೆ ಹಾಕಲಾಗುವುದು. ರಾಜ್ಯದ ಮೂಲೆ ಮೂಲೆಗಳಿಂದ ನೇಕಾರರು ಆಗಮಿಸಿ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ತಿಳಿಸಿದರು.

ಭಾನುವಾರ ಅವರು ಸ್ಥಳೀಯ ಕಾಡಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡ ನೇಕಾರರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ನೇಕಾರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಬಾದಾಮಿಯಲ್ಲಿ ನೇಕಾರರ ಬೃಹತ್ ಸಮಾವೇಶವನ್ನು ಕರೆಯಲಾಗಿತ್ತು. ಸರ್ಕಾರದ ಯಾವುದೆ ಪ್ರತಿನಿಧಿ ಬಂದು ಅಲ್ಲಿ ನೇಕಾರರ ಸಮಸ್ಯೆಗಳಿಗೆ ಸ್ಪಂದಿಸದೆ ಇರುವುದು ಖೇದಕರ ಸಂಗತಿಯಾಗಿದೆ. ಸರ್ಕಾರ ನೇಕಾರರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿರುವುದರಿಂದ ನೇಕಾರಿಕೆಯ ಉದ್ಯೋಗ ಮತ್ತು ನೇಕಾರರು ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ನೇಕಾರರ ಹಕ್ಕೊತ್ತಾಯವನ್ನು ಮಂಡಿಸಲಾಗುವುದು ಎಂದು ಶಿವಲಿಂಗ ಟಿರಕಿ ತಿಳಿಸಿದರು.

ಸರ್ಕಾರ ಕೈಮಗ್ಗಗಳನ್ನು ಉಳಿಸುವ ನಿಟ್ಟಿನಲ್ಲಿ ಪಾವರಲೂಮ್ ಮಗ್ಗಗಳ ಮೇಲೆ ಕೇವಲ ಕಪ್ಪು ಬಿಳಿ ಬಟ್ಟೆಗಳನ್ನು ಮಾತ್ರ ತಯಾರಿಸಬೇಕು ಎಂದು ಹೇಳಿದೆ. ಈ ನಿಟ್ಟಿನಲ್ಲಿ ಇದೇ 19 ರಂದು ವೀಕ್ಷಣೆಗೆ ಬರಲಿದೆ. ಕೈಮಗ್ಗಗಳೇ ಇಂದು ಇಲ್ಲದಂತಾಗಿವೆ. ಅದರ ಮುಂದುವರೆದ ಭಾಗವಾಗಿ ಪಾವರಲೂಮ್ ಮಗ್ಗಗಳು ಬಂದಿವೆ. ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರಬೇಕಾದರೆ ಕೈಮಗ್ಗ ನೇಕಾರರನ್ನು ಪ್ರೋತ್ಸಾಹಿಸುವುದರ ಜೊತೆಗೆ ಯುವಕರನ್ನು ಕೈಮಗ್ಗ ನೇಕಾರಿಕೆಯತ್ತ ಕರೆದುಕೊಂಡು ಬರಬೇಕು ಎಂದು ಶಿವಲಿಂಗ ಟಿರಕಿ ತಿಳಿಸಿದರು.

ಈ ಸಂದರ್ಭದಲ್ಲಿ ಉದಯ ಕುಲಗೋಡ, ಗಂಗಪ್ಪ ಒಂಟಗುಡಿ, ಆನಂದ ಬಾಣಕಾರ, ಸುಲೋಚನಾ ಹಳ್ಯಾಳ, ಆನಂದ ಜೀರಗಾಳ, ರಾಜೇಂದ್ರ ಮಿರ್ಜಿ, ರಾಜು ಉದಗಟ್ಟಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.