ಎಲ್ಲದರಲ್ಲೂ ಮಾದರಿ ಈ ಶಾಲೆ

ಕ್ವಿಜ್‌ ಸ್ಪರ್ಧೆ-ನಾಟಕಗಳ ಮೂಲಕ ವಿಷಯಗಳ ಮನವರಿಕೆಸಿದ್ದಾಪುರ ತೋಟದ ಶಾಲೆಗೆ ಸಂದಿವೆ ಹಲವು ಪ್ರಶಸ್ತಿ

Team Udayavani, Jan 23, 2020, 3:47 PM IST

23-January-15

ಮಹಾಲಿಂಗಪುರ: ಸಮೀಪದ ರನ್ನಬೆಳಗಲಿಯ ಸಿದ್ದಾಪುರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಕ್ಕದಾಗಿದ್ದರೂ ಹಲವು ಪ್ರಶಸ್ತಿಗಳ ಗರಿ ಮುಡಿಗೇರಿಸಿಕೊಂಡು ಮಾದರಿ ಶಾಲೆಯಾಗಿ ರೂಪುಗೊಂಡಿದೆ.

ಶಾಲಾ ಸುಧಾರಣಾ ಸಮಿತಿ ಸಹಕಾರ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಿಂದ ಹಿಡಿದು ಎಲ್ಲ ಶಿಕ್ಷಕರ ಶ್ರಮದ ಫಲವಾಗಿ ಸುಸಜ್ಜಿತ ಶಾಲೆಯಾಗಿ ಗಮನ ಸೆಳೆದಿದೆ. ಹೀಗಾಗಿ ಈ ಶಾಲೆಯಲ್ಲಿ ಸುಮಾರು 260 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಮೊದಮೊದಲು ಗುಡಿಸಲಿನಿಂದಲೇ ಆರಂಭವಾದ ಈ ಶಾಲೆ ಇಂದು 10 ಕೋಣೆಗಳನ್ನು ಹೊಂದಿದ್ದು, ಪ್ರತಿ ಕೋಣೆಯೂ ಸಾಕಷ್ಟು ಗಾಳಿ, ಬೆಳಕು ಹೊಂದಿದೆ. ಶೌಚಾಲಯ ಇದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದೆ. 1600 ಪುಸ್ತಕಗಳನ್ನು ಒಳಗೊಂಡ ಗ್ರಂಥಾಲಯ, ವಿಜ್ಞಾನ ಪ್ರಯೋಗಾಲಯ ಒಳಗೊಂಡಿದೆ.

ಶಾಲಾ ಆವರಣದಲ್ಲಿ ಶುಂಠಿ, ಅಜವಾನ, ಲವಂಗದಂತಹ ಸುಮಾರು 200ಕ್ಕೂ ಅಧಿ ಕ
ಔಷ ಧೀಯ ಗಿಡಮೂಲಿಕೆಗಳನ್ನು ಬೆಳೆಸಲಾಗಿದೆ. ಪ್ರಾಣಿ, ಪಕ್ಷಿಗಳಿಗೆಂದೇ ಕುಡಿಯುವ ನೀರು ಹಾಗೂ ಆಹಾರದ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಆಕರ್ಷಿಸಲು ಶಿಕ್ಷಕರು
ಕ್ವಿಜ್‌ ಸ್ಪರ್ಧೆ, ನಾಟಕ ರೂಪದಲ್ಲಿ ಕೆಲವೊಂದಿಷ್ಟು ವಿಷಯಗಳನ್ನು ತೋರಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಶಾಲೆಯ ಅನೇಕ ವಿದ್ಯಾರ್ಥಿಗಳು ರಾಜ್ಯ-ರಾಷ್ಟ್ರಮಟ್ಟದ ಖೋಖೋ ಸ್ಪರ್ಧೆ ಮತ್ತು ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ಸಿದ್ದಾಪುರ, ಕಾಡಪ್ಪ ಹೊಸೂರ, ಮಹಾಲಿಂಗಪ್ಪ
ಹಿಪ್ಪರಗಿ, ಹನಮಂತ ಗುಂಜಿಗಾಂವಿ, ಪಾಂಡು ಸಿದ್ದಾಪುರ, ಸತ್ಯಪ್ಪ ಸಿದ್ದಾಪುರ, ಮಲ್ಲಪ ಸಿದ್ದಾಪುರ, ಮುತ್ತಪ್ಪ ಕಣಬೂರ, ಶಿವಪ್ಪ ಗರಗದ, ಶ್ರೀಶೈಲ ಸಿದ್ದಾಪುರ, ರಾಮಪ್ಪ ಕುಂಬಾಳೆ ಅವರ ಜತೆಗೆ ಊರ ಹಿರಿಯರ ಸಹಾಯ-ಸಹಕಾರದಿಂದ ಶಾಲೆ ಉತ್ತರೋತ್ತರ ಅಭಿವೃದ್ಧಿ ಸಾಧಿಸುತ್ತಿದೆ. ಶಾಲಾ ಮುಖ್ಯಗುರು ಬಿ.ಆರ್‌.ಕರೆನ್ನವರ ಹಾಗೂ ಶಿಕ್ಷಕರಾದ ಕೆ.ಎಸ್‌.ಸಿದ್ನಾಳ, ಪಿ.ವೈ. ಘಂಟಿ, ಬಿ.ಡಿ.ಗದಗ, ಎಂ.ಎಚ್‌.ಗುಗ್ರಿ ಅವರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ
ಶ್ರಮಿಸುತ್ತಿದ್ದು, ಕಲಿಕೆಯ ಹೊಸ ವಿಧಾನಗಳನ್ನು ಅಳವಡಿಸಿಕೊಂಡಿದ್ದಾರೆ. ಮಕ್ಕಳ ಮನಸ್ಥಿತಿ ಅರಿತು ಹೊಸ ಹೊಸ ವಿಧಾನಗಳ ಮೂಲಕ ಮಕ್ಕಳ ಜ್ಞಾನಾರ್ಜನೆಗೆ ಸಹಕಾರಿಯಾಗಿದ್ದಾರೆ.

ನಮ್ಮ ಶಾಲೆ ಇಷ್ಟೊಂದು ಅಭಿವೃದ್ಧಿ ಹೊಂದಲು ಎಸ್‌ಡಿಎಂಸಿ ಅಧ್ಯಕ್ಷರ-ಸದಸ್ಯರ ಸಹಕಾರ ಬಹಳ ಇದೆ. 1986ರಲ್ಲಿ ಗುಡಿಸಿಲಿನಿಂದ ಆರಂಭವಾದ
ಈ ಶಾಲೆ ಇಂದು ಸೌಕರ್ಯಗಳನ್ನು ಪಡೆದು ಉತ್ತರೋತ್ತರ ಅಭಿವೃದ್ಧಿ ಸಾಧಿಸುತ್ತಿದೆ. ಬಿ.ಆರ್‌.ಕರೆನ್ನವರ, ಮುಖ್ಯಗುರುಗಳು,
ಸಿದ್ದಾಪುರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.

ಬಂದಿವೆ ಹಲವು ಪ್ರಶಸ್ತಿ: ಈ ಶಾಲೆಯು ಎರಡು ಸಲ ಜಿಲ್ಲಾಮಟ್ಟದ ಹಸಿರು ಶಾಲೆ ಪ್ರಶಸ್ತಿ, ಎರಡು ಬಾರಿ ಜಿಲ್ಲಾ ಮಟ್ಟದ ಹಳದಿ ಶಾಲೆ ಪ್ರಶಸ್ತಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡ ಮಾಡುವ ಪರಿಸರ ಮಿತ್ರ ಹಸಿರು ಶಾಲೆ ಪ್ರಶಸ್ತಿ ಪಡೆದುಕೊಂಡ ಹೆಮ್ಮೆ ಇದೆ.

„ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.