ಸಿದ್ದರಾಮೋತ್ಸವಕ್ಕೆ ಬಾದಾಮಿ ತಾಲೂಕಿನಿಂದ 25 ಸಾವಿರ ಕಾರ್ಯಕರ್ತರು ಭಾಗಿ: ಹೊಳಬಸು ಶೆಟ್ಟರ
Team Udayavani, Aug 2, 2022, 2:28 PM IST
ಬಾಗಲಕೋಟೆ: ಆ.3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಮಾಜಿ ಸಿಎಂ, ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯನವರ ಜನ್ಮದಿನದ ಅಮೃತ ಮಹೋತ್ಸವ ಸಮಾರಂಭಕ್ಕೆ ಬಾದಾಮಿ ತಾಲೂಕಿನಿಂದ 25 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಹೊಳಬಸು ಶೆಟ್ಟರ ಹೇಳಿದರು.
ಅವರು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಬಾದಾಮಿಯಿಂದ ಒಟ್ಟು 600 ಕ್ಕೂ ಹೆಚ್ಚಿನ ವಾಹನಗಳಲ್ಲಿ ಜನತೆ ತೆರಳಲಿದ್ದು, ಅವರಿಗೆ ಮಾರ್ಗ ಮಧ್ಯದಲ್ಲಿ ಉಪಹಾರದ ವ್ಯವಸ್ಥೆಯನ್ನು ಕೂಡಾ ಅಲ್ಲಿನ ಅಭಿಮಾನಿಗಳು ಮಾಡಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಸಾಹೇಬ್ರು ಸಿಎಂ ಆಗಿದ್ದಾಗ ಮಾಡಿದ ಅಭಿವೃದ್ದಿ ಮತ್ತು ಜನಪರ ಕಾರ್ಯಗಳು ಜನ ಮಾನಸದಲ್ಲಿ ಉಳಿದಿವೆ. ಹೀಗಾಗಿ ಜನರು ಲಕ್ಷಾಂತರ ಸಂಖ್ಯೆಯಲ್ಲಿ ಪಾಲ್ಗೋಳ್ಳಲಿದ್ದಾರೆ ಎಂದು ತಿಳಿಸಿದರು.
ವಾಹನಗಳ ವ್ಯವಸ್ಥೆ ಮಾಡಲಾಗಿದೆ, ಅದೇ ರೀತಿ ಬಾದಾಮಿ ಮತಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ನಂತರ ಐತಿಹಾಸಿಕ, ಧಾರ್ಮಿಕ ತಾಣಗಳು, ವಿವಿಧ ಸಮುದಾಯಗಳ ಸೇರಿದಂತೆ ಅಭಿವೃದ್ದಿಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ಅವುಗಳನ್ನು ಅನುಷ್ಟಾನಗೊಳಿಸುವ ಮೂಲಕ ಬಾದಾಮಿ ಕ್ಷೇತ್ರದ ಜನರಿಗೆ ಭಾಗ್ಯವಿಧಾತರಾಗಿದ್ದಾರೆ ಎಂದು ಹೇಳಿದರು.
ಬ್ಲಾಕ್ ಅಧ್ಯಕ್ಷ ಹನಮಂತಗೌಡ ಯಕ್ಕಪ್ಪನವರ ಮಾತನಾಡಿ, ಮಾಜಿ ಸಿಎಂ ಹಾಗೂ ಕ್ಷೇತ್ರದ ಶಾಸಕಾಗಿರುವ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬಕ್ಕೆ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಮುಚಖಂಡಯ್ಯ ಹಂಗರಗಿ, ಡಾ.ಎಂ.ಎಚ್. ಚಲವಾದಿ, ಪಿ.ಆರ್.ಗೌಡರ, ರಾಜಮ್ಮದ ಬಾಗವಾನ, ಮಹೇಶ ಹೊಸಗೌಡರ, ಮಲ್ಲಣ್ಣ ಯಲಿಗಾರ ಮಾತನಾಡಿ,ಸಿದ್ದರಾಮಯ್ಯನವರು ಹುಟ್ಟು ಹಬ್ಬವನ್ನು ಎಂದಿಗೂ ಆಚರಿಸಿ ಕೊಂಡವರಲ್ಲ ಆದರೆ ಇವರ ಜನ್ಮೋತ್ಸವ ಮತ್ತು ನಮ್ಮ ಕಾಂಗ್ರೆಸ್ ಪಕ್ಷವು ಕೂಡಾ 75 ವಸಂತಗಳನ್ನು ಪೂರೈಸಿದ್ದರ ಹಿನ್ನಲೆಯಲ್ಲಿ ಈ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ ಎಂದರು.
ರಾಜ್ಯ ಹೊರ ರಾಜ್ಯಗಳಲ್ಲಿಂದ ಸಿದ್ದರಾಮಯ್ಯ ಅವರ ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಅದೇ ರೀತಿ ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲೂಕಿನಿಂದ ಲಕ್ಷಾಂತರ ಜನರು ಭಾಗವಹಿಸುವ ಮೂಲಕ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗಿ ಬರುವ ದಿನಗಳಲ್ಲಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಅಭಿವೃದ್ದಿಗೆ ದಿಕ್ಸೂಚಿ ಆಗಲಿದೆ ಎಂದರು.
ಎಫ್.ಆರ್. ಪಾಟೀಲ, ಅಶೋಕ ಕೋಟನಕರ, ಶಶಿ ಉದಗಟ್ಟಿ, ನಾಗಪ್ಪ ಅಡಪಟ್ಟಿ, ಮಧು ಯಡ್ರಾಮಿ, ಮಹಾಂತೇಶ ಹಟ್ಟಿ, ವೆಂಕಣ್ಣ ಹೊರಕೇರಿ, ಹನಮಂತ ನರಗುಂದ, ಶೇಖಪ್ಪ ಪವಾಡಿನಾಯ್ಕರ್, ಲಕ್ಷ್ಮಣ್ ದಾದನಟ್ಟಿ ಸೇರಿದಂತೆ ಇನ್ನಿತರು ಮುಖಂಡರು ಉಪಸ್ಥಿತರಿದ್ದರು.
ದಾವಣಗೆರೆಯಲ್ಲಿ ಆ.3 ರಂದು ಆಯೋಜಿಸಲಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸಾಹೇಬ್ರ ಅಮೃತ ಮಹೋತ್ಸವ ಮುಗಿದ ನಂತರ ಬಾದಾಮಿಯಲ್ಲಿಯೂ ಒಂದು ದಿನ ಜನ್ಮದಿನದ ಕಾರ್ಯಕ್ರಮವನ್ನು ಆಯೋಜಿಸಲು ಮುಖಂಡರೊಂದಿಗೆ ಸೇರಿ ನಿರ್ಣಯಿಸಲಾಗಿದೆ– ಹೊಳಬಸು ಶೆಟ್ಟರ, ಕಾಂಗ್ರೆಸ್ ಯುವ ಮುಖಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.