ಖ್ಯಾತ ಬಾಲಿವುಡ್ ಗಾಯಕಿ ಮಧುಶ್ರೀಗೆ ಸಿದ್ದಶ್ರೀ ರಾಷ್ಟ್ರೀಯ ಪ್ರಶಸ್ತಿ ವಿತರಣೆ
ಪ್ರಶಸ್ತಿ ಮೊತ್ತ ಹುತಾತ್ಮ ಸೈನಿಕನ ಕುಟುಂಬಕ್ಕೆ ನೀಡಿದ ಬಾಲಿವುಡ್ ಗಾಯಕಿ ಮಧುಶ್ರೀ
Team Udayavani, Jan 15, 2020, 10:53 AM IST
ಅಮೀನಗಡ (ಬಾಗಲಕೋಟೆ): ಸುಕ್ಷೇತ್ರ ಸಿದ್ದನಕೊಳ್ಳದಲ್ಲಿ ನಡೆದ ಸಿದ್ದಶ್ರೀ ರಾಷ್ಟ್ರೀಯ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಬಾಲಿವುಡ್ ಗಾಯಕಿ ಮಧುಶ್ರೀ ಭಟ್ಟಾಚಾರ್ಯ ಅವರಿಗೆ ಸಂಗೀತ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸಿದ್ದಶ್ರೀ ರಾಷ್ಟ್ರೀಯ ಪ್ರಶಸ್ತಿ ವಿತರಣೆ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಖ್ಯಾತ ಬಾಲಿವುಡ್ ಗಾಯಕಿ ಮಧುಶ್ರೀ ಭಟ್ಟಾಚಾರ್ಯ, ಸಿದ್ದನಕೊಳ್ಳ ಕ್ಷೇತ್ರವು ಧಾರ್ಮಿಕವಾಗಿರುವ ಪವಿತ್ರ ಕ್ಷೇತ್ರವಾಗಿದೆ. ನಾನು ಕಳೆದ ವರ್ಷ ಕೂಡಾ ಸಿದ್ದಶ್ರೀ ಉತ್ಸವದಲ್ಲಿ ಈ ಕ್ಷೇತ್ರಕ್ಕೆ ಬಂದು ಹೋಗಿದ್ದು ಇಲ್ಲಿಯ ಶಾಂತಿ ನೆಮ್ಮದಿ ಮತ್ತು ಸಿದ್ದನಕೊಳ್ಳದ ನಿರಂತರ ದಾಸೋಹ ಮಠದಲ್ಲಿ ಡಾ.ಶಿವಕುಮಾರ್ ಶ್ರೀಗಳು ಸಮಾಜ ಸೇವೆ ಜೊತೆಯಲ್ಲಿ ಕಲಾವಿದರನ್ನು ಪ್ರೋತ್ಸಾಹ ನೀಡುವಂತ ಕೆಲಸ ಮಾಡುತ್ತಿದ್ದಾರೆ ಇದು ಶ್ಲಾಘನೀಯ ಕಾರ್ಯ ಎಂದರು.
ಸಂಗೀತ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ನನಗೆ ಸಿದ್ದನಕೊಳ್ಳದ ಪವಿತ್ರ ಕ್ಷೇತ್ರದಲ್ಲಿ ಸಿದ್ದಶ್ರೀ ರಾಷ್ಟ್ರೀಯ ಪ್ರಶಸ್ತಿ ವಿತರಣೆ ಮಾಡಿದ್ದು ತುಂಬಾ ಸಂತಸವಾಗಿದೆ. ಪ್ರಶಸ್ತಿ ಜೊತೆಗೆ ಬಂದಿರುವ 25 ಸಾವಿರ ರೂ,ನಗದು ಹಣವನ್ನು ಇತ್ತೀಚಿಗೆ ಹುತಾತ್ಮರಾದ ರೋಣ ತಾಲೂಕಿನ ಕರುಮುಡಿ ಗ್ರಾಮದ ವೀರಯೋಧ ವಿರೇಶ ಕುರಹಟ್ಟಿ ಅವರ ಕುಟುಂಬಕ್ಕೆ ನೀಡುತ್ತೇನೆ. ದೇಶಕ್ಕಾಗಿ ಸೇವೆ ಸಲ್ಲಿಸುತ್ತಿರುವ ಯೋಧರ ಸೇವೆ ಅಪಾರ. ಹುತಾತ್ಮರಾದ ಯೋಧರ ಕುಟುಂಬಗಳಿಗೆ ಪ್ರತಿಯೊಬ್ಬರು ಗೌರವ ಸಲ್ಲಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಹುತಾತ್ಮ ವೀರಯೋದ ವಿರೇಶ ಕುರಹಟ್ಟಿ ಅವರ ಕುಟುಂಬಕ್ಕೆ ಖ್ಯಾತ ಬಾಲಿವುಡ್ ಗಾಯಕಿ ಮಧುಶ್ರೀ ಭಟ್ಟಾಚಾರ್ಯ ಅವರು ಸನ್ಮಾನ ಮಾಡಿ 25 ಸಾವಿರ ರೂ,ಹಣವನ್ನು ನೀಡಿದರು.
ಸಮಾರಂಭದಲ್ಲಿ ಸಿದ್ದನಕೊಳ್ಳದ ಧರ್ಮಾಧಿಕಾರಿ ಡಾ.ಶಿವಕುಮಾರ ಶ್ರೀಗಳು, ಗುಳೇದಗುಡ್ಡ ಮರಡಿ ಮಠದ ಕಾಡಸಿದ್ದೇಶ್ವರ ಶ್ರೀಗಳು, ಬಾಗಲಕೋಟೆ ಜಿಪಂ ಅಧ್ಯಕ್ಷೆ ಬಾಯಕ್ಕೆ ಮೇಟಿ,ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ,ಡಾ.ಸಿ.ಕೆ.ಮೌಲಾ ಶರೀಫ್,ಕಸಾಪ ಅಧ್ಯಕ್ಷ ಮಹಾಂತೇಶ ಹಳ್ಳೂರ,ಯುವ ನಟ ಪ್ರವೀಣ ಪತ್ರಿ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ
MUST WATCH
ಹೊಸ ಸೇರ್ಪಡೆ
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.