ದೇಶದ ಅಭಿವೃದ್ಧಿಗೆ ಗುಣಮಟ್ಟದ ಶಿಕ್ಷಣ ಅವಶ್ಯ : ಸಿದ್ದು ಸವದಿ
ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಣೆ
Team Udayavani, Jul 29, 2022, 8:53 PM IST
ರಬಕವಿ-ಬನಹಟ್ಟಿ : ದೇಶದ ಅಭಿವೃದ್ಧಿಗೆ ಗುಣಮಟ್ಟದ ಶಿಕ್ಷಣ ಅವಶ್ಯ. ಆ ನಿಟ್ಟಿನಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಸಿದ್ದು ಸವದಿ ಹೇಳಿದರು.
ಅವರು ರಾಮಪುರದ ಸರಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯತ ಬಾಗಲಕೋಟೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜಮಖಂಡಿ ಇವರ ಆಶ್ರಯದಲ್ಲಿ ಪೂರಕ ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ಕರ್ನಾಟಕ ಸರಕಾರ ಪ್ರಾರಂಭಿಸಿರುವ ಮಹತ್ವದ ಯೋಜನೆ ಇದಾಗಿದೆ. ಇದ್ದರಿಂದ ಕಡ್ಡಾಯ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಮಕ್ಕಳು ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣುಗಳಂತಹ ಪೌಷ್ಟಿಕ ಆಹಾರ ಪಡೆದುಕೊಂಡು ಆರೋಗ್ಯವಂತರಾಗಬೇಕು. ಸರಕಾರ ಮಕ್ಕಳ ಆರೋಗ್ಯಕ್ಕೆ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲ್ಯಾಘನೀಯ. ಇದೊಂದು ಉಪಯುಕ್ತ ಯೋಜನೆ ಇದಾಗಿದೆ. ಶಾಲೆ ಜೀವಂತ ದೇವರ ಗುಡಿ, ಅದರ ಅಭಿವೃದ್ಧಿಗೆ ಸಂಘ ಸಂಸ್ಥೆಗಳು ಮುಂದಾಗಬೇಕು. ಮಕ್ಕಳಿಗೆ ರಾಷ್ಟ್ರೀಯತೆ, ರಾಷ್ಟ್ರ ಪ್ರೇಮ ಬೆಳೆಸುವ ಕೆಲಸವಾಗಬೇಕು. ಕಾರ್ಯಕ್ರಮ ಯಶಸ್ವಿಗೆ ನಾವು ಸಹಕರಿಸೋಣ ಎಂದರು.
ಜಿಲ್ಲಾ ಅಕ್ಷರ ದಾಸೋಹ ಯೋಜನೆ ಎ. ಕೆ. ಬಸನ್ನವರ ಮಾತನಾಡಿ, ವಾರದಲ್ಲಿ ಎರಡು ದಿನ ಪೌಷ್ಠಿಕ ಆಹಾರವನ್ನು ನೀಡಲಾಗುತ್ತಿದ್ದು, ಶೈಕ್ಷಣಿಕ ವರ್ಷದಲ್ಲಿ ೪೬ ಮೊಟ್ಟೆಗಳನ್ನು ವಿತರಿಸಲಾಗುತ್ತದೆ. ಮಕ್ಕಳು ಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ಪೌಷ್ಟಿಕ ಆಹಾರವನ್ನು ನೀಡಲಾಗುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಎಸ್ ಡಿ ಎಂ ಸಿ ಅದ್ಯಕ್ಷ ಶ್ರೀಶೈಲ ಹಂದಿಗುಂದ, ಬಸಪರಪ್ಪ ಹಟ್ಟಿ, ಶಿಕ್ಷಣಾಧಿಕಾರಿ ಸಿ. ಎಂ. ನೇಮಗೌಡ, ಜಮಖಂಡಿಯ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಸಿ. ಎಸ್. ಕಲ್ಯಾಣಿ, ನಗರಸಭೆ ಅಧ್ಯಕ್ಷ ಸಂಜಯ ತೆಗ್ಗಿ, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಬಿ. ಎಸ್. ಕಡಕೋಳ, ಆರ್. ಎಂ. ಸಂಪಗಾಂವಿ, ಶ್ರೀಶೈಲ ಬುರ್ಲಿ, ಬಾಬಾಗೌಡ ಪಾಟೀಲ, ಪರಪ್ಪ ಬಿಳ್ಳೂರ, ಶ್ರೀಶೈಲ ಆಲಗೂರ, ವಿಜಯ ಕಲಾಲ, ಎಂ. ಎಂ. ಹೊಸಮನಿ, ರವಿ ಕೊರ್ತಿ, ಪ್ರಕಾಶ ಸಿಂಗನ, ಅರ್ಜುನ ಕಾಖಂಡಕಿ, ಎಸ್. ಎಂ. ಹಳೆಮನಿ, ಸಂತೋಷ ಬಡ್ಡಿ, ಸುನೀಲ ವಜ್ರಮಟ್ಟಿ, ಯಲ್ಲಪ್ಪ ತಳವಾರ, ಜಗದೀಶ ಕುಳ್ಳೋಳ್ಳಿ ಸೇರಿದಂತೆ ಶಾಲಾ ಮುಖ್ಯಗುರುಗಳು ಶಿಕ್ಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.