ಪುಣ್ಯಭೂಮಿ ಕೂಡಲಸಂಗಮದಲ್ಲಿ ಮೃತ್ತಿಕೆ ಸಂಗ್ರಹ
ಕನ್ನಡ ನಾಡಿನಲ್ಲಿ ಹುಟ್ಟಿರುವ ಪುಣ್ಯ ಪುರುಷರ ಸ್ಥಳಗಳ ಮೃತ್ತಿಕೆ ಸಂಗ್ರಹಿಸಲಾಗುತ್ತಿದೆ
Team Udayavani, Nov 5, 2022, 4:22 PM IST
ಬಾಗಲಕೋಟೆ: ಜಗಜ್ಯೋತಿ ಬಸವಣ್ಣನವರ ಪುಣ್ಯ ಭೂಮಿ ಕೂಡಲಸಂಗಮಕ್ಕೆ ಕಂದಾಯ ಸಚಿವ ಆರ್.ಆಶೋಕ, ಗೃಹಮಂತ್ರಿ ಆರಗ ಜ್ಞಾನೇಂದ್ರ, ಐಟಿ, ಬಿಟಿ ಸಚಿವ ಡಾ| ಅಶ್ವತ ನಾರಾಯಣ, ಕ್ರೀಡಾ ಸಚಿವ ನಾರಾಯಣಗೌಡ ಅವರು ಶುಕ್ರವಾರ ಭೇಟಿ ನೀಡಿ ಸಂಗಮನಾಥನ ದರ್ಶನ ಪಡೆದು ಮೃತ್ತಿಕೆ ಸಂಗ್ರಹಿಸಿದರು.
ಸಂಗಮನಾಥನ ದರ್ಶನ ಪಡೆದುಕೊಂಡು ಬಳಿಕ ಮಾತನಾಡಿದ ಐಟಿ, ಬಿಟಿ ಸಚಿವ ಅಶ್ವತನಾರಾಯಣ ಅವರು ಜಗಜ್ಯೋತಿ ಬಸವಣ್ಣನವರು ನೀಡಿರುವಂತಹ ಸಂದೇಶ, ಸಾಮಾಜಿಕ ನ್ಯಾಯದ ಮೂಲಕ ಕಲ್ಯಾಣ ಸಮಾಜ ಕಟ್ಟಲು ಪುಣ್ಯ ಭೂಮಿಯ ಮೃತ್ತಿಕೆಯನ್ನು ಸಂಗ್ರಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕೂಡಲ ಸಂಗಮ ಕ್ಷೇತ್ರಕ್ಕೆ ಆಗಮಿಸಿರುವುದಾಗಿ ತಿಳಿಸಿದರು. ಪುಣ್ಯ ಸ್ಥಳದ ಮೃತ್ತಿಕೆ ಪುಣ್ಯ ಮೃತ್ತಿಕೆಯಾಗಿರುತ್ತದೆ.
ಇಂತಹ ಮೃತ್ತಿಕೆಗಳನ್ನು ಸಂಗ್ರಹ ಮಾಡಿಯೇ ನಾಡಪ್ರಭು ಕೆಂಪೇಗೌಡ ಅವರು ಬೆಂಗಳೂರನ್ನು ಸ್ಥಾಪನೆ ಮಾಡಿದ್ದಾರೆ. ಬಸವಣ್ಣನವರ ಸಂದೇಶ, ಅವರ ಜೀವನದಲ್ಲಿ ಜಾತ್ಯತೀತ ಸಮಾಜ ನಿರ್ಮಾಣ, ಸಾಮಾಜಿಕ ನ್ಯಾಯ ಕೊಟ್ಟಿರುವದನ್ನು ಅಳವಡಿಸಿಕೊಂಡು ಇವರಿಬ್ಬರ ಸಂಗಮ ಮೃತ್ತಿಕೆ ಮೂಲಕ ತಂದು ನಾಡನ್ನು ಒಂದು ಕಡೆ ತಂದು ಶಕ್ತಿ ಕೇಂದ್ರವನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ನಾಡಪ್ರಭು ಕೆಂಪೇಗೌಡ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಹೆಸರು ಇಡುವ ಮೂಲಕ ವಿದೇಶಿಯರು ಅವರ ಬಗ್ಗೆ ಕೇಳುವಂತಾಗಿದೆ. ನಾಡಿನ ಸಮೃದ್ದಿಗಾಗಿ ಕನ್ನಡ ನಾಡಿನಲ್ಲಿ ಹುಟ್ಟಿರುವ ಪುಣ್ಯ ಪುರುಷರ ಸ್ಥಳಗಳ ಮೃತ್ತಿಕೆ ಸಂಗ್ರಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಗಜ್ಯೋತಿ ಬಸವಣ್ಣನವರ ಪುಣ್ಯ ಭೂಮಿ ಕೂಡಲಸಂಗಮದಲ್ಲಿ ಮೃತ್ತಿಕೆ ಸಂಗ್ರಹಿಸಲು ನಾಲ್ಕು ಜನ ಸಚಿವರು ಬಂದಿದ್ದೇವೆ. ಈ ಸ್ಥಳದ ಅಭಿವೃದ್ಧಿಗಾಗಿ 500 ಕೋಟಿ ರೂ. ನೀಡಲಾಗುತ್ತಿದ್ದು, ಹಂತ ಹಂತವಾಗಿ ಬಸವಣ್ಣನವರ ಪುಣ್ಯ ಸ್ಥಳವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಕೂಡಲಸಂಗಮದ ಮಹಾದೇವ ಸ್ವಾಮೀಜಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅ ಧಿಕಾರಿ ಟಿ. ಭೂಬಾಲನ್, ಉಪವಿಭಾಗಾ ಧಿಕಾರಿ ಶ್ವೇತಾ ಬೀಡಿಕರ ಕೂಡಲ ಸಂಗಮ ಅಭಿವೃದ್ಧಿ ಪ್ರಾ ಧಿಕಾರದ ಅ ಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಚಿವರನ್ನು ಜಾನಪದ ಕಲಾತಂಡಗಳ ಮೂಲಕ ಸ್ವಾಗತಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.