ಸಚಿವ ಸ್ಥಾನಕ್ಕಾಗಿ ಕೆಲವರು ಕಾಯಬೇಕು: ಕಾರಜೋಳ
Team Udayavani, Feb 3, 2020, 8:15 PM IST
ಬಾಗಲಕೋಟೆ: ಎಲ್ಲರೂ ಒಂದೇ ಬಾರಿಗೆ ಸಚಿವರಾಗುವುದು ಕಷ್ಟ. ಹೀಗಾಗಿ ಕೆಲವರು ಸಚಿವ ಸ್ಥಾನಕ್ಕಾಗಿ ಕಾಯಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ಮುಂದಿನ ದಿನಗಳಲ್ಲಿ ಎಲ್ಲರಿಗೂ ಸಚಿವ ಸ್ಥಾನ ದೊರೆಯಲಿದೆ.
ಸಂಪುಟ ವಿಸ್ತರಣೆ ಕುರಿತು ಈಗಾಗಲೇ ರಾಷ್ಟ್ರೀಯ ಅಧ್ಯಕ್ಷರು, ಕೇಂದ್ರ ಗೃಹ ಸಚಿವರ ಜತೆಗೆ ಚರ್ಚಿಸಲಾಗಿದೆ. 17 ಜನ ಶಾಸಕರಲ್ಲಿ 10 ಜನ ಹಾಗೂ ಮೂವರು ಮೂಲ ಬಿಜೆಪಿ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ ಎಂದರು.
ಶಾಸಕ ಮಹೇಶ ಕುಮಟಳ್ಳಿ ಹಾಗೂ ಎಚ್. ವಿಶ್ವನಾಥ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಕೇಂದ್ರ ಸರ್ಕಾರದ 9 ಸಾವಿರ ಕೋಟಿ ತೆರಿಗೆ ಕಡಿತವಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ಒಂದು ವರ್ಷದ ಅಂದಾಜು ಮಾಡಿದ್ದೇವೆ. ಮುಂದಿನ 12 ತಿಂಗಳ ಕಾಲ ಎಷ್ಟು ತೆರಿಗೆ ಬರಬಹುದು ಎಂದು ಅಂದಾಜು ಮಾಡಲಾಗುತ್ತಿದ್ದು, ಕೆಲವೊಮ್ಮೆ ಹೆಚ್ಚು-ಕಡಿಮೆ ಆಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.