ಹಳೇ ನೋಟಿನ ಹೊಸ ವ್ಯವಹಾರ: ಎಸ್ಪಿ ಕಚೇರಿ ಸಿಬ್ಬಂದಿ ಅಮಾನತು
Team Udayavani, Oct 30, 2018, 6:00 AM IST
ಬಾಗಲಕೋಟೆ: ಹಳೆಯ ನೋಟು ಬದಲಾಯಿಸುವ ಅಂತಾರಾಜ್ಯ ವಂಚಕರ ತಂಡದೊಂದಿಗೆ ಶಾಮೀಲಾದ ಆರೋಪದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಮಿನಿ ಸ್ಟರಿಯಲ್ ಸಿಬ್ಬಂದಿ ಅಶೋಕ ನಾಯಕ ಅವರನ್ನು ಎಸ್‌ಪಿ ಸಿ.ಬಿ. ರಿಷ್ಯಂತ
ಸೋಮವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಅಶೋಕ ನಾಯಕ ಹಣ ದ್ವಿಗುಣ ಹಾಗೂ ಹಳೆಯ ನೋಟು ಬದಲಿಸಿಕೊಡುವ ಅಂತಾರಾಜ್ಯ ವಂಚಕರೊಂದಿಗೆ ವ್ಯವಹಾರ ಮಾಡಲು ಮುಂದಾಗಿದ್ದರು. 20 ಸಾವಿರ ಕೊಟ್ಟು ಹಣ ದ್ವಿಗುಣ ಮಾಡಿಕೊಳ್ಳಲು ಹೋಗಿದ್ದರು. ಜವಾಬ್ದಾರಿಯುತ ಇಲಾಖೆಯಲ್ಲಿದ್ದು, ಹಣದಾಸೆಗೆ ವಂಚಕರೊಂದಿಗೆ ಶಾಮೀಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಗೋವಾ, ಮಹಾರಾಷ್ಟ್ರ, ಉತ್ತರಪ್ರದೇಶ ಹಾಗೂ ಕರ್ನಾಟಕದ 12 ಜನರ ತಂಡ ಹಣ ದ್ವಿಗುಣ ಹಾಗೂ ಹಳೆಯ ನೋಟು ಬದಲಿಸಿ ಕೊಡುವ 667 ಕೋಟಿ ವ್ಯವಹಾರದ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಈ ತಂಡ ತಮ್ಮ ವಾಹನಗಳ ಮೇಲೆ ಪೊಲೀಸ್ ಮತ್ತು ಪ್ರಸ್ ಎಂಬ ಸ್ಟಿಕ್ಕರ್ ಅಂಟಿಸಿ ವ್ಯವಹಾರ ಕುದುರಿಸಿಕೊಳ್ಳುತ್ತಿತ್ತು. ಸೋಮವಾರ ಈ ತಂಡದವರು ಬಳಸುತ್ತಿದ್ದ ಮೂರು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ಎಸ್.ಬಿ. ಗಿರೀಶ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಲಾಗುತ್ತಿದೆ. 12 ಆರೋಪಿಗಳನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆ ಮುಂದುವರಿದಿದ್ದು, ಮಾಹಿತಿ ಕಲೆ ಹಾಕಲಾಗುತ್ತಿದೆ.
ರಾಜ್ಯ, ಕೇಂದ್ರಕ್ಕೂ ಮಾಹಿತಿ
ಪ್ರಕರಣವನ್ನು ಜಿಲ್ಲಾ ಪೊಲೀಸ್ ಇಲಾಖೆ ಮೊದಲು ಗಂಭೀರವಾಗಿ ಪರಿಗಣಿಸಿರಲಿಲ್ಲ. ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗುತ್ತಿದ್ದಂತೆ ಇಡೀ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲು ಗೃಹ ಇಲಾಖೆಯಿಂದ ನಿರ್ದೇಶನ ಬಂದಿದೆ ಎನ್ನಲಾಗಿದೆ. ಅಲ್ಲದೇ ಪ್ರಕರಣದ ಕುರಿತು ರಾಜ್ಯ ಹಾಗೂ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಪಡೆದುಕೊಂಡಿದೆ. ಹಳೇ ನೋಟು ಬದಲಾಯಿಸಿಕೊಡುವ ಈ ತಂಡದೊಂದಿಗೆ ಆರ್‌ಬಿಐ ನೌಕರ ಸಂಪರ್ಕ ಹೊಂದಿರುವ ಕುರಿತು ವದಂತಿಗಳಿದ್ದು, ಆ ನಿಟ್ಟಿನಲ್ಲಿ ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.