ಮತ್ತೂಂದು ಚುನಾವಣೆಗೆ ಎಸ್‌.ಆರ್‌. ಪಾಟೀಲ ತಯಾರಿ!

ಮುಂದೆ ಪರಿಷತ್‌ ಚುನಾವಣೆಗೆ ಸ್ಪರ್ಧಿಸಲ್ಲ ಎಂದೇ ಹೇಳಿದ್ದ ಪಾಟೀಲ ಕಣಕ್ಕಿಳಿಯಲು ಸಜ್ಜು

Team Udayavani, Mar 22, 2021, 4:21 PM IST

ಮತ್ತೂಂದು ಚುನಾವಣೆಗೆ ಎಸ್‌.ಆರ್‌. ಪಾಟೀಲ ತಯಾರಿ!

ಬಾಗಲಕೋಟೆ: ಕಳೆದ ಚುನಾವಣೆ ವೇಳೆ ಇದು ನನ್ನ ಕೊನೆಯ ಚುನಾವಣೆ, ಮುಂದಿನ ಬಾರಿ ಪರಿಷತ್‌ಸ್ಪರ್ಧಿಸಲ್ಲ ಎಂದಿದ್ದ ವಿಧಾನ ಪರಿಷತ್‌ ವಿರೋಧಪಕ್ಷದ ನಾಯಕ ಎಸ್‌.ಆರ್‌. ಪಾಟೀಲ ಬದಲಾದ ರಾಜಕೀಯ ವಿದ್ಯಮಾನಗಳಿಂದ ಮತ್ತೂಂದು ಬಾರಿ ಚುನಾವಣಾ ಕಣಕ್ಕಿಳಿಯಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ವಿಜಯಪುರ-ಬಾಗಲಕೋಟೆ ಸ್ಥಳೀಯಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಸತತ ನಾಲ್ಕುಬಾರಿ ಆಯ್ಕೆಯಾಗಿರುವ ಅವರು ಇನ್ನೊಮ್ಮೆ ಅಖಾಡಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

ಹೌದು. ಕಳೆದ 2015-16ರಲ್ಲಿ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಾಟೀಲರು ವಿಜಯಪುರ ಮತ್ತು ಬಾಗಲಕೋಟೆ ಅವಳಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ (ಜಿಪಂ, ತಾಪಂ, ಗ್ರಾಪಂ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರಿಂದ ಆಯ್ಕೆ) ಸ್ಪರ್ಧಿಸಿದ್ದರು. ಆಗ ರಾಜ್ಯದ ಐಟಿ-ಬಿಟಿ ಸಚಿವರೂ ಆಗಿದ್ದ ಅವರು ಇದು ನನ್ನ ಕೊನೆಯ ಚುನಾವಣೆ. ಇದೊಂದು ಬಾರಿ ಆಯ್ಕೆ ಮಾಡಿ, ಮುಂದೆ ನಾನುಪರಿಷತ್‌ ಚುನಾವಣೆಗೆ ಸ್ಪರ್ಧಿಸಲ್ಲ. ರಾಜಕೀಯರಂಗದಲ್ಲಿ ಎಲ್ಲ ರೀತಿಯ ಸೇವೆ ಮಾಡಿದ್ದೇನೆಂದುಹೇಳಿದ್ದರು. ಆದರೀಗ ಇದೇ ಕ್ಷೇತ್ರದಿಂದ ಮತ್ತೂಮ್ಮೆಸ್ಪರ್ಧಿಸಲಿದ್ದಾರೆಂಬ ಮಾತು ಕೇಳಿ ಬರುತ್ತಿದೆ.

ಹಲವು ಅವಕಾಶ: ವಕೀಲರಾಗಿ, ಸಹಕಾರಿ ಧುರೀಣರಾಗಿ, ಶಿಕ್ಷಣ ಪ್ರೇಮಿಯಾಗಿ ಗುರುತಿಸಿಕೊಂಡಿರುವ ಎಸ್‌.ಆರ್‌. ಪಾಟೀಲರಿಗೆರಾಜಕೀಯ ರಂಗದ ಎಲ್ಲಾ ಅವಕಾಶಗಳು ದೊರೆತಿವೆ.ಜಿಲ್ಲಾ ಪಂಚಾಯಿತಿಗೂ ಮುಂಚೆ ಜಿಲ್ಲಾ ಪರಿಷತ್‌ನಸದಸ್ಯರಾಗಿ, ಅಖಂಡ ವಿಜಯಪುರದ ಜಿಲ್ಲಾ ಪರಿಷತ್‌ನ ವಿರೋಧ ಪಕ್ಷದ ನಾಯಕರಾಗಿ, ಮುಂದೆಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಸದಸ್ಯರಾಗಿ,ಅದೇ ಪರಿಷತ್‌ನ ವಿರೋಧ ಪಕ್ಷದ ಉಪನಾಯಕ,ನಾಯಕರಾಗಿ, ಬಳಿಕ ವಿಧಾನ ಪರಿಷತ್‌ನ ಸಭಾನಾಯಕರಾಗಿ, ಐಟಿ-ಬಿಟಿ ಸಚಿವರಾಗಿ, ಜಿಲ್ಲಾಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಇದೀಗವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಹುದ್ದೆಯೂ ಅವರಿಗೆ ಒಲಿದಿದೆ. ವಿಧಾನ ಪರಿಷತ್‌ನ ಆಡಳಿತ ಮತ್ತು ವಿರೋಧ ಪಕ್ಷದ ವ್ಯವಸ್ಥೆಯಲ್ಲಿರುವ ಎರಡೂ ಹಂತದಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡ ಅವರುತಮ್ಮದೇ ಆದ ಶೈಲಿಯ ರಾಜಕಾರಣದಿಂದ ಗುರುತಿಸಿಕೊಂಡಿದ್ದಾರೆ.

ಪಕ್ಷಾತೀತ ಬೆಂಬಲ: ಕಾಂಗ್ರೆಸ್‌ ಪಕ್ಷದ ಉತ್ತರ ಕರ್ನಾಟಕದ ಕಾರ್ಯಾಧ್ಯಕ್ಷರಾಗಿಯೂ ಕೆಲ ವರ್ಷಕೆಲಸ ಮಾಡಿದ ಪಾಟೀಲರು, ಪಕ್ಷ ಅಥವಾ ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ಕುರ್ಚಿಗೆ ಅಂಟಿಕೊಂಡವರಲ್ಲಎಂಬ ಹೆಸರು ಪಡೆದಿದ್ದಾರೆ. ವಿಧಾನಸಭೆ ಚುನಾವಣೆವೇಳೆ ಪಕ್ಷಕ್ಕೆ ಹಿನ್ನಡೆಯಾದಾಗ ಕೆಪಿಸಿಸಿ ಕಾರ್ಯಾಧ್ಯಕ್ಷಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದರು. ಸಿದ್ದರಾಮಯ್ಯಸರ್ಕಾರದಲ್ಲಿ ಸಚಿವ ಸ್ಥಾನದಿಂದ ಕೈಬಿಟ್ಟು,ಪಕ್ಷದ ಜವಾಬ್ದಾರಿ ಕೊಟ್ಟಾಗಲೂ ಅಷ್ಟೇ ಸಮಾನಮನಸ್ಸಿನಿಂದ ಒಪ್ಪಿದ್ದರು. ನಾಲ್ಕು ಬಾರಿ ವಿಧಾನಪರಿಷತ್‌ಗೆ ಸ್ಪರ್ಧಿಸಿದಾಗ ತಮ್ಮ ಮಾತೃಪಕ್ಷದ ಜತೆಗೆಇತರೆ ಪಕ್ಷಗಳ ಪ್ರಮುಖರು, ನಾಯಕರಿಗೆ ಪರೋಕ್ಷ ಬೆಂಬಲ ನೀಡಿರುವುದು ಅವರ ರಾಜಕೀಯ ಜಾಣ್ಮೆಎಂದೇ ಹೇಳಬಹುದು.

ಮತ್ತೆ ಸ್ಪರ್ಧೆ: ಕಳೆದ ಬಾರಿ ವಿಧಾನ ಪರಿಷತ್‌ ಚುನಾವಣೆ ವೇಳೆ ಮತ್ತೂಮ್ಮೆ ಸ್ಪರ್ಧಿಸಲ್ಲ ಎಂದಿದ್ದ ಪಾಟೀಲರು ಮುಂದೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆಂಬ ಮಾತು ಎಲ್ಲೆಡೆ ಕೇಳಿ ಬಂದಿತ್ತು. ಜಿ.ಪಂ ಹಾಗೂ ವಿಧಾನ ಪರಿಷತ್‌ನಲ್ಲಿ ಎಲ್ಲ ರೀತಿಯ ಅಧಿಕಾರ ಅನುಭವಿಸಿರುವ ಅವರು ಒಮ್ಮೆಯಾದರೂ ವಿಧಾನಸಭೆಗೆ ಆಯ್ಕೆಯಾಗಬೇಕೆಂಬ ಹಂಬಲಅವರ ಬೆಂಬಲಿಗರದ್ದು. ಹೀಗಾಗಿ ಪರಿಷತ್‌ಚುನಾವಣೆಯಿಂದ ದೂರ ಉಳಿದು ವಿಧಾನಸಭೆಗೆ ಸ್ಪರ್ಧಿಸುತ್ತಾರೆಂಬ ಮಾತು ಪ್ರಚಲಿತದಲ್ಲಿದೆ.

ಈ ಭಾಗದ ಜ್ವಲಂತ ಸಮಸ್ಯೆಗಳಿಗೆ ಧ್ವನಿಯಾಗಬೇಕು. ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು.

ವಿರೋಧ ಪಕ್ಷದಲ್ಲಿದ್ದಾಗ ಆಡಳಿತ ಪಕ್ಷದ ಕಿವಿ ಹಿಂಡಿ ಜನರ ಕೆಲಸ ಮಾಡಿಸಬೇಕು, ಆಡಳಿತ ಪಕ್ಷದಲ್ಲಿದ್ದಾಗಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ಹೀಗಾಗಿಚುನಾವಣೆಯಲ್ಲಿ ಸ್ಪರ್ಧಿಸಿ, ಜನರ ಧ್ವನಿಯಾಗಬೇಕು.ಅದಕ್ಕಾಗಿ ಸ್ಪರ್ಧೆ ಅನಿವಾರ್ಯ ಎಂದು ರವಿವಾರಹೇಳಿಕೊಂಡಿದ್ದಾರೆ. ಇದರಿಂದ ಅವರು ಮತ್ತೂಮ್ಮೆಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತವಾದರೂ ಅದುವಿಧಾನಸಭೆಗೋ ಅಥವಾ ವಿಧಾನ ಪರಿಷತ್‌ಗೊà ಎಂಬುದು ಇನ್ನೂ ನಿಗೂಢವಾಗಿದೆ.

ನಾನು ಪ್ರತಿನಿಧಿಸುವ ವಿಜಯಪುರ- ಬಾಗಲಕೋಟೆ ಜಿಲ್ಲೆಗಳ ಜ್ವಲಂತ ಸಮಸ್ಯೆಗಳಿಗೆಧ್ವನಿಯಾಗಬೇಕು. ದಾರಿಯಲ್ಲಿ ನಿಂತು ಮಾತನಾಡಿದರೆ ಅದಕ್ಕೆಆದ್ಯತೆ ಸಿಗಲ್ಲ. ಹೀಗಾಗಿ ವಿಧಾನಸಭೆಯೇ ಇರಲಿ, ವಿಧಾನ ಪರಿಷತ್‌ ಇರಲಿ ಅಲ್ಲಿ ನಮ್ಮ ಭಾಗದ ಸಮಸ್ಯೆಯ ಮೇಲೆ ಬೆಳಕು ಚೆಲ್ಲಿ, ಜನರ ಕಷ್ಟಕ್ಕೆ ಸ್ಪಂದಿಸಬೇಕೆಂಬುದು ನನ್ನ ಗುರಿ. – ಎಸ್‌.ಆರ್‌. ಪಾಟೀಲ, ವಿರೋಧ ಪಕ್ಷದ ನಾಯಕ, ವಿಧಾನ ಪರಿಷತ್‌

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.