ಮಹಾದೇವಗೆ ರಾಜ್ಯಮಟ್ಟದ “ಕೃಷಿ ಪಂಡಿತ’ ಪ್ರಶಸ್ತಿಯ ಗರಿ

Team Udayavani, Mar 23, 2021, 12:12 PM IST

22-bnt-1

ಬನಹಟ್ಟಿ: ರಬಕವಿ-ಬನಹಟ್ಟಿ ತಾಲೂಕಿನಹೊಸೂರ ಪಟ್ಟಣದ ಮಹಾದೇವ ಕರವೀರಪ್ಪಚೋಳಿ ಅವರಿಗೆ ರಾಜ್ಯ ಸರಕಾರ ಕೊಡಮಾಡುವ ರಾಜ್ಯಮಟ್ಟದ ಉದಯೋನ್ಮುಖ ಕೃಷಿ ಪಂಡಿತಪ್ರಶಸ್ತಿ ಲಭಿಸಿದೆ.

40ಎಕರೆ ಜಮೀನು ಹೊಂದಿರುವ ಮಹಾದೇವ ಕರವೀರಪ್ಪ ಚೋಳಿ ಬಾಲ್ಯದಿಂದಲೇ ಕೃಷಿ ಬಗ್ಗೆ ಆಸಕ್ತಿಹೊಂದಿದ್ದಾರೆ. ತಮ್ಮ ಭೂಮಿಯ ಶೇ.60ರಷ್ಟುಸಾವಯವ, ಶೇ. 40ರಷ್ಟು ರಾಸಾಯನಿಕ ಕೃಷಿ ಮಾಡುತ್ತಿದ್ದಾರೆ.

ಕಬ್ಬು, ಅರಿಷಿಣ ಬೆಳೆಗಳಲ್ಲಿ ಮಿಶ್ರ ಬೆಳೆಗಳಾಗಿ ಚಂಡು ಹೂ, ಹೂಕೋಸು (ಗೋಬಿ),ಎಲೆಕೋಸು (ಗೋಬಿ ಗಡ್ಡೆ), ಪಾಲಕ, ಮೆಂತೆ,ಕೋತಂಬರಿ, ಮೆಣಸಿನಕಾಯಿ, ಸಬಸಗಿಪಲ್ಲೆ, ಶೇಂಗಾ, ಉಳ್ಳಾಗಡಿ, ರಾಜಗಿರಿ ಪಲ್ಲೆ,ಸವತೆಕಾಯಿ ಜತೆಗೆ ಬಾಳೆ, ಪಪ್ಪಾಯಿ, ಚಿಕ್ಕು,ಸೀತಾಫಲ, ಮಾವು, ಪೇರಲ, ನೆಲ್ಲಿ, ತೆಂಗು, ಕಲ್ಲಂಗಡಿ, ನುಗ್ಗೆಕಾಯಿ, ಗಜ್ಜರಿ ಬೆಳೆಸಿದ್ದಾರೆ.ಸಾವಯವ ಕೃಷಿಯ ಮೂಲ ಅಡಗಿರುವುದೇ ಹೈನುಗಾರಿಕೆಯಲ್ಲಿ. ಅದನ್ನರಿತಿರುವ ಇವರು 5 ಎಮ್ಮೆ, 20 ಎಚ್‌ಎಫ್‌ ತಳಿ ಆಕಳು,2-ಗೀರ್‌ ತಳಿ ಆಕಳು, 8 ಆಡುಗಳನ್ನುಸಾಕುತ್ತಿದ್ದಾರೆ. ಇದರಿಂದ ಹಾಲು ಉತ್ಪಾದನೆ,ಆಕಳ ಸಗಣಿ, ಮೂತ್ರ (ಗಂಜಲು)ಸಾವಯವ ಗೊಬ್ಬರಕ್ಕೆ ಬಳಸುತ್ತಿದ್ದಾರೆ.

ಅಲ್ಲದೇ ಹಸುಗಳಿಗಾಗಿ ಹಸಿರು ಪಾಚಿ(ಅಜೋಲ್‌)ಯನ್ನು ಬೆಳೆಸಿ ಅವುಗಳಿಗೆ ನೀಡುತ್ತಿರುವುದರಿಂದ ಹಾಲಿನ ಪ್ರಮಾಣಹೆಚ್ಚಿಗೆ ದೊರಕುತ್ತದೆ ಎನ್ನುತ್ತಾರೆ ಮಹಾದೇವ ಚೋಳಿ. ಸ್ವತಃ ಹಾಲು ಒಕ್ಕೂಟದ ಸಹಕಾರಿ ಸಂಘ ಸ್ಥಾಪಿಸಿರುವ ಅವರು ಅದರ ಮೂಲಕ ಹಾಲು ಸರಬರಾಜು ಮಾಡುತ್ತಾರೆ. ತೋಟದಲ್ಲಿ ಬೆಳೆದ ಬೆಳೆಗಳಿಗೆ ಸ್ಥಳೀಯಮಾರುಕಟ್ಟೆ ಜತೆಗೆ ಆಯಾ ಬೆಳೆಗಳಿಗೆತಕ್ಕಂತೆ ಮಾರುಕಟ್ಟೆಗೆ ಕಳುಹಿಸುತ್ತಾರೆ. 40 ಎಕರೆ ಜಮೀನಿನಲ್ಲಿ ಹನಿ ನೀರಾವರಿ ಪದ್ಧªತಿಅಳವಡಿಸಿರುವ ಇವರು ಕೋಳಿ, ಎರೆಹುಳು ಗೊಬ್ಬರ, ತಿಪ್ಪೆ ಗೊಬ್ಬರ ಮಾತ್ರ ಹಾಕಿದ್ದಾರೆ.

ಇನ್ನೊಂದು ವಿಶೇಷ ಎಂದರೆ ಪ್ರತಿವಾರ ಜೀವಸಾರ ಘಟಕದಿಂದ ಹನಿ ನೀರಾವರಿಮೂಲಕ ಸಾವಯವ ಗೊಬ್ಬರ ನೀಡುತ್ತಾರೆ.  15 ಗುಂಟೆ ಜಮೀನಿನಲ್ಲಿ ಬಳ್ಳೊಳ್ಳಿ, ಕೊತ್ತಂಬರಿ, ಉಳ್ಳಾಗಡ್ಡಿ, ಮೆಂತೆ, ಸಬ್ಬಸಗಿ,ಗಜ್ಜರಿ ಸೇರಿದಂತೆ 15ಕ್ಕೂ ಹೆಚ್ಚು ತರಹದಬೆಳೆ ಬೆಳೆದು ಇತರರಿಗೆ ಮಾದರಿಯಾಗಿದ್ದಾರೆ.15 ಜನರ ತುಂಬು ಕುಟುಂಬದಲ್ಲಿಸಹೋದರರಾದ ಭೀಮಸಿ ಚೋಳಿ ಮತ್ತುಸುಭಾಸ ಚೋಳಿ ಅವರ ಹೆಗಲಿಗೆ ಹೆಗಲು ಕೊಟ್ಟು ಕೃಷಿಯಲ್ಲಿ ಜತೆಯಾಗಿದ್ದಾರೆ.

ಕೃಷಿಯಲ್ಲಿ ಆಧುನಿಕತೆ ಅಳವಡಿಸಿಕೊಂಡು ಕೃಷಿ ಕೈಗೊಂಡರೆ ಯಶಸ್ಸು ಸಿಗುತ್ತದೆ. ಅದಕ್ಕೆ ಶ್ರಮ-ತಾಳ್ಮೆ ಮುಖ್ಯ. ಸರಕಾರ ಸಾಧನೆ ಗಮನಿಸಿ ಪ್ರಶಸ್ತಿ ನೀಡಿರುವುದು ಹೆಮ್ಮೆಯ ಸಂಗತಿ. -ಮಹಾದೇವ ಕರವೀರಪ್ಪ ಚೋಳಿ, ಪ್ರಗತಿಪರ ರೈತರು ಹೊಸೂರ

ಟಾಪ್ ನ್ಯೂಸ್

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.