ಸಂಘಟನಾ ಪರ್ವ ಯಶಸ್ಸಿಗೆ ಶ್ರಮಿಸಿ: ಕಾರಜೋಳ
Team Udayavani, Jul 8, 2019, 2:30 PM IST
ಲೋಕಾಪುರ: ಗ್ರಾಮದಲ್ಲಿ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಮುಖಂಡ ಅರುಣ ಕಾರಜೋಳ ಚಾಲನೆ ನೀಡಿದರು.
ಲೋಕಾಪುರ: ಬಿಜೆಪಿ ವಿಶ್ವದಲ್ಲಿಯೇ ಅತೀ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷವಾಗಿದೆ ಎಂದು ಮುಧೋಳ ತಾಲೂಕಾ ಗ್ರಾಮೀಣ ಘಟಕದ ಬಿಜೆಪಿ ಅಧ್ಯಕ್ಷ ಕೆ. ಆರ್. ಮಾಚಪ್ಪನವರ ಹೇಳಿದರು.
ಸ್ಥಳೀಯ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಕಳೆದ ವರ್ಷ 11 ಕೋಟಿ ಸದಸ್ಯರನ್ನು ಹೊಂದಿತ್ತು. ಈ ಸಾಲಿನ ಸದಸ್ಯತ್ವ ಅಭಿಯಾನದ ಮೂಲಕ ಸದಸ್ಯರ ಸಂಖ್ಯೆ ದೇಶವ್ಯಾಪಿ ದುಪ್ಪಟ್ಟುಗೊಳಿಸುವ ಚಿಂತನೆ ವರಿಷ್ಠರು ನಡೆಸಿದ್ದಾರೆ ಎಂದು ಹೇಳಿದರು.
ಬಿಜೆಪಿ ಮಖಂಡ ವಿ.ಎಂ. ತೆಗ್ಗಿ ಮಾತನಾಡಿ, ಕಾರ್ಯಕರ್ತರೇ ಪಕ್ಷದ ಆಸ್ತಿ. ಕಾರ್ಯಕರ್ತರು ಸಕ್ರಿಯವಾಗಿದ್ದಾಗ ಮಾತ್ರ ಪಕ್ಷ ಸದೃಢವಾಗಿರುತ್ತದೆ. ಸಂಘಟನಾ ಪರ್ವ ಯಶಸ್ವಿಗೆ ಪಕ್ಷದ ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ನಡೆಯುವಂತೆ ಆಗಬೇಕು ಎಂದು ಹೇಳಿದರು.
ಬಿಜೆಪಿ ಮುಖಂಡ ನಾಗಪ್ಪ ಅಂಬಿ ಮಾತನಾಡಿ, ಪ್ರತಿಯೊಂದು ರಾಜಕೀಯ ಪಕ್ಷಗಳಿಗೂ ಕಾರ್ಯಕರ್ತರು ಮುಖ್ಯ. ಆದರೆ ಬಿಜೆಪಿ ಕಾರ್ಯಕರ್ತರು ಪಕ್ಷ ಸಂಘಟನೆ ಜೊತೆಗೆ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ ಎಂದರು.
ಬಿಜೆಪಿ ಪಕ್ಷದ ಮುಖಂಡರಾದ ಅರುಣ ಕಾರಜೋಳ, ಜಿಪಂ ಸದಸ್ಯ ಭೀಮನಗೌಡ ಪಾಟೀಲ, ಗುರುರಾಜ ಕಟ್ಟಿ, ಲೋಕಣ್ಣ ಕತ್ತಿ, ಯಮನಪ್ಪ ಹೊರಟ್ಟಿ, ಯುವ ಮೋರ್ಚಾಅಧ್ಯಕ್ಷ ಪ್ರಕಾಶ ಚಿತ್ತರಗಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಲ್ಲಪ್ಪಅಂಗಡಿ, ಪಿಕೆಪಿಎಸ್‌ಅಧ್ಯಕ್ಷ ಶಿ ವನಗೌಡ ಪಾಟೀಲ, ಬಿ.ಎಲ್.ಬಬಲಾದಿ,
ಸಿ.ಎ.ಪಾಟೀಲ, ವೈ,ಜಿ. ದಾಸರಡ್ಡಿ, ಕೆ.ಆರ್. ಪಾಟೀಲ, ತುಷಾರ ಬೋಪಳೆ, ಸೈಯ್ಯದ್ ಜೀರಗಾಳ, ನೀಲೇಶ ಬನ್ನೂರ, ಜಾಕೀರ ಅತ್ತಾರ ಮುಖಂಡರು, ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.