ಅಪೌಷ್ಟಿಕತೆ ನಿರ್ಮೂಲನೆಯಿಂದ ಸದೃಢ ಸಮಾಜ ಸಾಧ್ಯ
Team Udayavani, Apr 8, 2021, 4:28 PM IST
ಬಾಗಲಕೋಟೆ : ಸಮಾಜದ ಜೀವಾಳ ಆಗಿರುವ ಮಹಿಳೆ ಮತ್ತು ಮಕ್ಕಳ ಆರೋಗ್ಯ ಕಾಳಜಿ ಮುಖ್ಯವಾಗಿದ್ದು, ಅಪೌಷ್ಟಿಕತೆ ತೊಡೆದು ಹಾಕಿದಲ್ಲಿ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ನಗರಸಭೆ ಉಪಾಧ್ಯಕ್ಷ ಬಸವರಾಜ ಅವರಾದಿ ಹೇಳಿದರು.
ನಗರಸಭೆ ಸಭಾಭವನದಲ್ಲಿ ಮಂಗಳವಾರ ತಾಲೂಕಾ ಆಡಳಿತ, ನಗರಸಭೆ, ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಹಯೋಗದಲ್ಲಿ ರಾಷ್ಟ್ರೀಯ ಪೊಷಣ್ ಅಭಿಯಾನದ ಪೋಷಣ್ ಪಕ್ವಾಡ್ ಅಂಗವಾಗಿ ಹಮ್ಮಿಕೊಂಡ ತಾಲೂಕಾ ಮಟ್ಟದ ಪೌಷ್ಟಿಕ ಆಹಾರ ಮೇಳ, ಪೌಷ್ಟಿಕ ಆಹಾರ ಕುರಿತ ರಂಗೋಲಿ ಸ್ಪರ್ಧೆ ಹಾಗೂ ಅಡುಗೆ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತಮ ಆರೋಗ್ಯ ಮತ್ತು ಪೌಷ್ಟಿಕ ಆಹಾರ ಸೇವನೆ ಪ್ರಾಮುಖ್ಯತೆ ಬಗ್ಗೆ ಗ್ರಾಮೀಣ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮುಂದಾಗಬೇಕು. ನಗರ ಪ್ರದೇಶಕ್ಕೆ ಹೋಲಿಸಿದರೆ ಗ್ರಾಮೀಣ ಭಾಗದ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗಿ ಕಂಡುಬರುತ್ತಿದೆ. ಅಪೌಷ್ಟಿಕತೆ ತೊಡೆದು ಹಾಕಲು ಸರಕಾರ ಹಲವಾರು ಯೋಜನೆ ಜಾರಿಗೊಳಿಸಿದೆ. ಈ ಯೋಜನೆಗಳ ಲಾಭವನ್ನು ಮಹಿಳೆಯರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ತಹಶೀಲ್ದಾರ್ ಗುರುಸಿದ್ದಯ್ಯ ಹಿರೇಮಠ ಮಾತನಾಡಿ, ಸರಕಾರ ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪೋಷಣ್ ಪಕ್ವಾಡ್, ಬೇಟಿ ಪಡಾವೋ ಬೇಟಿ ಬಚಾವೋ ಉತ್ತಮ ಯೋಜನೆಯಾಗಿದೆ ಎಂದು ತಿಳಿಸಿದರು. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ|ಬಿ.ಜಿ.ಹುಬ್ಬಳ್ಳಿ ಮಾತನಾಡಿ, ನಮ್ಮ ಪೂರ್ವಿಕರ ಆಹಾರ ಕ್ರಮ ಮುಂದುವರಿಸಿದ್ದರೆ ಇಂದು ಪೋಷಣ ಅಭಿಯಾನದಂತಹ ಕಾರ್ಯಕ್ರಮ ರೂಪಿಸುವ ಅಗತ್ಯವಿರಲಿಲ್ಲ.
ತಿಂಗಳಲ್ಲಿ ಎರಡು ದಿನ ಸಿಹಿ ತಿನ್ನಲೆಂದೇ ಹುಣ್ಣಿಮೆ ಮತ್ತು ಅಮವಾಸ್ಯೆಗಳಂದು ಮನೆಯಲ್ಲಿ ಸಿಹಿ ಅಡಿಗೆ ಮಾಡುತ್ತಾರೆ. ಸಾಂಪ್ರದಾಯಿಕವಾಗಿ ದೊರೆಯುವ ಕಾಳು, ತರಕಾರಿ ಹಣ್ಣುಗಳ ಮೂಲಕ ಪೌಷ್ಟಿಕತೆ ಪಡೆಯಬಹುದಾಗಿದೆ ಎಂದರು. ನಗರಸಭೆ ಪೌರಾಯುಕ್ತ ಮುನಿಷಾಮಪ್ಪ, ಕಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಗಂಗಮ್ಮ ಪಾಟೀಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ ಮಾತನಾಡಿದರು.
ನಗರಸಭೆಯ ಸಭಾಪತಿ ರವಿ ದಾಮಜಿ, ಸದಸ್ಯ ವೀರಪ್ಪ ಶಿರಗಣ್ಣನವರ ಇದ್ದರು. ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ, ಬೇಟಿ ಬಚಾವೋ ಬೇಟಿ ಪಡಾವೋ ಸ್ಟಿಕರ್ ಬಿಡುಗಡೆ ಮಾಡಲಾಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.